Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:18 - ಕನ್ನಡ ಸತ್ಯವೇದವು C.L. Bible (BSI)

18 ಇಗೋ ನನ್ನ ಮೊಕದ್ದಮೆಯನ್ನು ಸಿದ್ಧಗೊಳಿಸಲಾಗಿದೆ ನಾನು ನಿರ್ದೋಷಿಯೆಂಬ ನಿರ್ಣಯ ನನಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಗೋ, ನನ್ನ ನ್ಯಾಯವನ್ನು ಸಿದ್ಧಪಡಿಸಿದ್ದೇನೆ; ನಾನು ನೀತಿವಂತನೆಂಬುದಾಗಿ ನಿರ್ಣಯವಾಗುವುದೆಂದು ನನಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಗೋ, ನನ್ನ ನ್ಯಾಯವನ್ನು ಸಿದ್ಧಪಡಿಸಿದ್ದೇನೆ; ನಾನು ನೀತಿವಂತನೆಂಬದಾಗಿ ನಿರ್ಣಯವಾಗುವದೆಂದು ನನಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನ ಪರವಾಗಿ ವಾದಿಸಲು ಈಗ ಸಿದ್ಧವಾಗಿದ್ದೇನೆ. ನಾನು ನಿರಪರಾಧಿಯೆಂದು ನನಗೆ ಗೊತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇಗೋ, ನನ್ನ ನ್ಯಾಯವನ್ನು ಕ್ರಮಪಡಿಸಿದೆನು; ನಾನು ನೀತಿವಂತನೆಂದು ನಿರ್ಣಯ ಹೊಂದುವುದು ನನಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:18
17 ತಿಳಿವುಗಳ ಹೋಲಿಕೆ  

ನನ್ನ ನ್ಯಾಯವನ್ನು ಆತನ ಮುಂದೆ ವಿವರಿಸಬಹುದಿತ್ತು ಬಾಯ್ತುಂಬಾ ಆತನೊಡನೆ ವಾದಿಸಬಹುದಿತ್ತು.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ಮಂಡಿಸು ನನ್ನ ವಿರುದ್ಧ ನಿನ್ನ ಆಪಾದನೆಯನ್ನು; ಒಟ್ಟಿಗೆ ವಾದಿಸೋಣ ಮಂಡಿಸು ನಿನ್ನ ನ್ಯಾಯವನ್ನು; ನೀನು ನಿರ್ದೋಷಿಯೆಂದು ರುಜುಪಡಿಸು ನೋಡೋಣ.


ಇದು ನನಗೆ ನ್ಯಾಯ ದೊರಕಿಸಲಿ, ದೇವರ ಮುಂದೆ ತನ್ನ ಮಿತ್ರನಿಗಾಗಿ ಒಬ್ಬನು ವಾದಿಸುವಂತೆ.


ನಾನು ಸತ್ಯವಂತನಾಗಿದ್ದರೂ ಬಾಯೇ ನಾನು ಅಪರಾಧಿಯೆಂದು ಒಪ್ಪಿಕೊಳ್ಳುತ್ತದೆ. ನಾನು ನಿರ್ದೋಷಿಯಾಗಿದ್ದರೂ ‘ನಿನ್ನದು ವಕ್ರಬುದ್ಧಿ’ ಎನ್ನುತ್ತದೆ.


ದಯಮಾಡಿ ಮತ್ತೆ ಆಲೋಚಿಸಿರಿ ಅನ್ಯಾಯವಾಗದಂತೆ ಮರಳಿ ವಿಮರ್ಶಿಸಿರಿ ನನ್ನ ಸತ್ಯತೆ ತಿಳಿಯುವಂತೆ.


ನಾನು ನಿರ್ದೋಷಿಯೇ ಹೌದು; ಅದರ ಬಗ್ಗೆ ನನಗಿಲ್ಲ ಚಿಂತೆ. ನನ್ನ ಪ್ರಾಣ ಕೂಡ ನನಗೆ ತೃಣವಾಗಿಬಿಟ್ಟಿದೆ.


ನಾನು ಅಪರಾಧಿಯಲ್ಲವೆಂದು ತಿಳಿದಿದೆಯಲ್ಲವೆ? ನಿನ್ನ ಕೈಯಿಂದ ಬಿಡಿಸಬಲ್ಲವರಾರೂ ಇಲ್ಲವಲ್ಲವೆ?


ನೀತಿವಂತನೂ ನಿರ್ದೋಷಿಯೂ ಆದ ನಾನು ದೇವರನ್ನು ಪ್ರಾರ್ಥಿಸಿ ಪ್ರತ್ಯುತ್ತರಕ್ಕಾಗಿ ಕಾದಿರಲು ಗೆಳೆಯರ ಗೇಲಿಪರಿಹಾಸ್ಯಕೆ ಗುರಿಯಾದೆನು.


ಕೇಳಿ, ನನ್ನ ಮಾತನ್ನು ಲಕ್ಷ್ಯವಿಟ್ಟು ನನ್ನ ಅರಿಕೆಯನ್ನು ಕಿವಿಗೊಟ್ಟು.


ನ್ಯಾಯನೀತಿಯನ್ನು ಬಿಡದೆ ಹಿಡಿವೆನು ಭದ್ರವಾಗಿ ನನ್ನ ಬಾಳಿನ ಯಾವ ದಿನದಂದೂ ನಿಂದಿಸಿದ್ದಿಲ್ಲ ನನ್ನ ಮನಸ್ಸಾಕ್ಷಿ.


ಯೋಬನು ತಾನು ಸತ್ಯವಂತನೆಂದು ಸಾಧಿಸಿದ್ದನು. ಇದನ್ನು ಕೇಳಿದ ಅವನ ಮೂವರು ಮಿತ್ರರು ವಾದಿಸುವುದನ್ನು ನಿಲ್ಲಿಸಿಬಿಟ್ಟರು.


‘ನಾನು ಪರಿಶುದ್ಧನು, ನಿರ್ದೋಷಿ ನಾನು ನಿರ್ಮಲನು, ನಿರಪರಾಧಿ.


ಇಂತಿದೆ ಯೋಬನ ವಾದ - ‘ನಾನು ಸತ್ಯವಂತ ನನಗೆ ದೇವರಿಂದ ನ್ಯಾಯ ದೊರೆತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು