Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:19 - ಕನ್ನಡ ಸತ್ಯವೇದವು C.L. Bible (BSI)

19 ದೇವಾ, ನನ್ನ ಮೇಲೆ ಆಪಾದನೆ ಹೊರಿಸಲು ಬರುವೆಯಾ? ಹಾಗಾದರೆ ಮೌನತಾಳಿ ನಾ ಮಾಡುವೆ ಪ್ರಾಣತ್ಯಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನಗೆ ಪ್ರತಿವಾದಿ ಇದ್ದಾನೋ? ಇದ್ದರೆ, ನಾನು ನನ್ನನ್ನು ನಿನ್ನ ದೃಷ್ಟಿಗೆ ಮರೆಮಾಡಿಕೊಂಡು, ಮೌನನಾಗಿ ಪ್ರಾಣಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನಗೆ ಪ್ರತಿವಾದಿ ಇದ್ದಾನೋ? ಇದ್ದರೆ ಸುಮ್ಮನಾಗಿ ಪ್ರಾಣಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಾನು ತಪ್ಪಿತಸ್ಥನೆಂದು ಯಾವನೂ ನಿರೂಪಿಸಲಾರನು. ನಿರೂಪಿಸಬಲ್ಲವನಿದ್ದರೆ ಬಾಯಿ ಮುಚ್ಚಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯಾರಾದರೂ ನನ್ನ ವಿರುದ್ಧ ದೂರನ್ನು ತರಬಹುದೋ? ಹಾಗಿದ್ದರೆ ನಾನು ಮೌನವಾಗಿದ್ದು ಸತ್ತು ಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:19
13 ತಿಳಿವುಗಳ ಹೋಲಿಕೆ  

ದೇವರೇ ಆರಿಸಿಕೊಂಡವರ ಮೇಲೆ ಯಾರು ತಾನೇ ದೋಷಾರೋಪಣೆ ಮಾಡಬಲ್ಲರು? ದೇವರೇ ಅವರನ್ನು ನಿರ್ದೋಷಿಗಳೆಂದು ನಿರ್ಣಯಿಸಿರುವಾಗ ಅವರನ್ನು ದೋಷಿಗಳೆಂದು ನಿರ್ಣಯಿಸುವವರು ಯಾರು? ಪ್ರಾಣತ್ಯಾಗ ಮಾಡಿದ್ದಲ್ಲದೆ ಪುನರುತ್ಥಾನ ಹೊಂದಿದ ಕ್ರಿಸ್ತಯೇಸುವೇ ದೇವರ ಬಲಪಾರ್ಶ್ವದಲ್ಲಿದ್ದುಕೊಂಡು ನಮ್ಮ ಪರವಾಗಿ ಬಿನ್ನಯಿಸುತ್ತಿದ್ದಾರೆ.


‘ಸರ್ವೇಶ್ವರನ ವಿಷಯವನ್ನು ಪ್ರಕಟಿಸೆನು, ಅವರ ಹೆಸರಿನಲ್ಲಿ ಇನ್ನು ಮಾತಾಡೆನು’ ಎಂದುಕೊಂಡೆನಾದರೆ ನನ್ನ ಹೃದಯದೊಳು ಸಂಕಟ ಉಂಟಾಗುತ್ತದೆ. ಸುಡುಬೆಂಕಿ ನನ್ನೆಲುಬುಗಳಲ್ಲಿ ಅಡಗಿದೆಯೋ ಎಂಬಂತೆ ಅದನ್ನು ತಡೆತಡೆದು ದಣಿದಿರುವೆ, ಇನ್ನು ಸಹಿಸಲಾಗದಿದೆ.


ಏನಾದರೂ ಹೇಳಬೇಕೆಂದಿದ್ದರೆ ಹೇಳು, ಉತ್ತರಕೊಡು ನನಗೆ, ನೀನು ಸತ್ಯವಂತನೆಂದು ಸ್ಥಾಪಿಸಬೇಕೆಂಬುದೇ ನನ್ನ ಬಯಕೆ.


ನನಗಿಂತ ನೀವೇ ಮೇಲೆಂದು ಭಾವಿಸುತ್ತೀರೋ? ನನ್ನ ದೀನ ಸ್ಥಿತಿಗೆ ನನ್ನ ದೋಷವೇ ಕಾರಣವೆನ್ನುತ್ತೀರೋ?


ಸುಮ್ಮನಿರಿ, ನನ್ನನ್ನು ಮಾತಾಡಲು ಬಿಡಿ ನನ್ನ ಮೇಲೆ ಏನು ಬೇಕಾದರೂ ಬರಲಿ.


ನನ್ನನ್ನು ನಿರ್ಮಿಸಿ ರೂಪಿಸಿದಾತ ನೀನು ಆದರೆ ಈಗ ಮುಗಿಸಿಬಿಡುವಿಯೋ ಮಾನಸಾಂತರಗೊಂಡು?


ಬಾಯಿ ಮುಚ್ಚಿಡಲಾಗದು ನನ್ನಿಂದ ಮಾತಾಡುತ್ತೇನೆ ಆತ್ಮವೇದನೆಯಿಂದ ಪ್ರಲಾಪಿಸುತ್ತೇನೆ ಮನೋವ್ಯಥೆಯಿಂದ.


ನನ್ನ ಅಪರಾದವನ್ನು ನೀನು ಕ್ಷಮಿಸಬಾರದೆ? ನನ್ನ ದೋಷವನ್ನು ನೀನು ಪರಿಹರಿಸಬಾರದೆ? ಮಣ್ಣಿನೊಳಗೆ ಬಿದ್ದಿರುವೆ ನಾನು ಈಗ ನಾನು ಇಲ್ಲವಾಗಿರುವೆ ನೀ ಹುಡುಕುವಾಗ.


ಯಾರಾದರೂ ಆತನೊಡನೆ ವಾದಿಸಲು ಇಷ್ಟಪಟ್ಟರೂ ಆತನ ಸಹಸ್ರ ಪ್ರಶ್ನೆಗಳೊಂದಕ್ಕೂ ಉತ್ತರಿಸಲಾಗದು.


ನನ್ನೆರಡು ಕೋರಿಕೆಗಳನ್ನು ಈಡೇರಿಸಯ್ಯಾ ಆಗ ನಿನ್ನ ದೃಷ್ಟಿಗೆ ನಾನು ಮರೆಮಾಡಿಕೊಳ್ಳಲಾರೆನಯ್ಯಾ.


ಇಗೋ, ಸ್ವಾಮಿ ಸರ್ವೇಶ್ವರ ನಿಂತಿಹರು ನನಗೆ ನೆರವಾಗಿ ನಿರ್ಣಯಿಸುವವನು ಯಾರು ನನ್ನನ್ನು ಅಪರಾಧಿಯಾಗಿ? ನುಸಿತಿಂದ ವಸ್ತ್ರದಂತೆ ಅಳಿದುಹೋಗುವರವರು ಜೀರ್ಣವಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು