Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:26 - ಕನ್ನಡ ಸತ್ಯವೇದವು C.L. Bible (BSI)

26 ನನ್ನ ವಿಷಯವಾಗಿ ಕಹಿಯಾದ ತೀರ್ಪನು ಬರೆದಿರುವೆ ಯೌವನದ ಪಾಪಪರಿಣಾಮಗಳನು ನನ್ನ ಮೇಲೆ ಹೊರಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನನ್ನ ವಿಷಯವಾಗಿ ಕಠಿಣವಾದ ತೀರ್ಪುಗಳನ್ನು ಬರೆದು, ನನ್ನ ಯೌವನದ ಪಾಪಗಳ ಬಾಧ್ಯತೆಯನ್ನು ನನಗೆ ಕೊಟ್ಟಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನನ್ನ ವಿಷಯವಾಗಿ ಕಠಿಣವಾದ ತೀರ್ಪುಗಳನ್ನು ಬರೆದು ನನ್ನ ಯೌವನದ ಪಾಪಗಳ ಫಲದ ಬಾಧ್ಯತೆಯನ್ನು ನನಗೆ ಕೊಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ದೇವರೇ, ನೀನು ನನಗೆ ಕಠಿಣವಾದ ದಂಡನೆಗಳನ್ನು ವಿಧಿಸಿರುವೆ. ನನ್ನ ಯೌವನದ ಪಾಪಗಳ ದೆಸೆಯಿಂದ ನನ್ನನ್ನು ಸಂಕಟಪಡಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಏಕೆಂದರೆ ನನಗೆ ವಿರೋಧವಾಗಿ ಕಹಿಯಾದ ತೀರ್ಪನ್ನು ನೀವು ಬರೆದಿರುವಿರಿ; ನನ್ನ ಯೌವನದ ಪಾಪಗಳನ್ನು ನನ್ನ ಮೇಲೆ ಹೊರಿಸಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:26
11 ತಿಳಿವುಗಳ ಹೋಲಿಕೆ  

ಯೌವನದೆನ್ನ ಪಾಪಪ್ರವೃತ್ತಿಗಳ ಮನದಲ್ಲಿಟ್ಟುಕೊಳ್ಳಬೇಡ I ನಿನ್ನೊಲುಮೆ ನಲ್ಮೆಗಳ ನಿಮಿತ್ತ ಪ್ರಭು, ನನ್ನ ನೆನೆಯದಿರಬೇಡ II


ಅನಂತರ ದೇವಾಲಯದಲ್ಲಿ ಯೇಸು ಆ ಮನುಷ್ಯನನ್ನು ಕಂಡು, “ನೋಡು, ನೀನು ಗುಣಹೊಂದಿರುವೆ; ಇನ್ನುಮೇಲೆ ಪಾಪಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ನಿನ್ನ ಗತಿ ಇನ್ನಷ್ಟು ಚಿಂತಾಜನಕವಾದೀತು,” ಎಂದರು.


ಮೂವತ್ತೆಂಟು ವರ್ಷ ಕಾಯಿಲೆಯಿಂದ ನರಳುತ್ತಿದ್ದ ಒಬ್ಬ ರೋಗಿ ಅಲ್ಲಿ ಮಲಗಿದ್ದನು.


ತಿರುಗಿಸಲ್ಪಟ್ಟ ಮೇಲೆಯೆ ನಾನು ಪಶ್ಚಾತ್ತಾಪ ಪಟ್ಟೆ ತಿಳುವಳಿಕೆ ಹೊಂದಿದ ಮೇಲೆಯೆ ಕೆನ್ನೆಗೆ ಹಾಕಿಕೊಂಡೆ ನನ್ನ ಯೌವನ ನಡತೆ ನನಗೆ ಅವಮಾನದ ಹೊರೆ ಈ ಕಾರಣ ಲಜ್ಜೆಗೊಂಡೆ. ಹೌದು, ನಾಚಿಕೆಯಿಂದ ತಲೆತಗ್ಗಿಸಿದೆ’.”


ಯೌವನ ಅವನ ದೇಹದಲ್ಲಿ ತುಂಬಿತ್ತು ಅದು ಕೂಡ ಅವನ ಸಮೇತ ಧೂಳಿನಲಿ ಮಲಗುವುದು.


ಕಷ್ಟದಲ್ಲಿರುವವರಿಗೆ ಏತಕ್ಕೆ ಬೆಳಕು? ದುಃಖಪೀಡಿತನಿಗೆ ಏತಕ್ಕೆ ಬದುಕು?


ಅದಕ್ಕೆ ಅವಳು, “ನನ್ನನ್ನು ‘ನವೊಮಿ’ ಎಂದು ಕರೆಯಬೇಡಿ; ‘ಮಾರಾ’ ಎಂದು ಕರೆಯಿರಿ. ಏಕೆಂದರೆ ಸರ್ವಶಕ್ತ ದೇವರು ನನ್ನನ್ನು ಬಹಳ ದುಃಖಪಡಿಸಿದ್ದಾರೆ.


ನನಗೆ ಉಸಿರಾಡಲೂ ಬಿಡದೆ ನನ್ನ ಹೊಟ್ಟೆಯನ್ನು ಕಹಿಯಾದವುಗಳಿಂದ ತುಂಬಿಸುತ್ತಾನೆ.


ಆಗ ಆಕೆ ಎಲೀಯನಿಗೆ, “ದೈವಪುರುಷನೇ, ನನ್ನ ವಿರುದ್ಧ ನಿನಗೇನಿದೆ? ನೀನು ನನ್ನ ಪಾಪವನ್ನು ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿಯೋ?” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು