Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:27 - ಕನ್ನಡ ಸತ್ಯವೇದವು C.L. Bible (BSI)

27 ನನ್ನ ಕಾಲುಗಳಿಗೆ ನೀ ಕೋಳವನ್ನು ತೊಡಿಸಿರುವೆ ನನ್ನ ನಡತೆಯನು ದಿಟ್ಟಿಸಿ ನೋಡುತ್ತಿರುವೆ ನನ್ನ ಹೆಜ್ಜೆ ಹೆಜ್ಜೆಯನು ಲೆಕ್ಕಿಸುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನೀನು ನನ್ನ ಕಾಲುಗಳಿಗೆ ಕೋಳವನ್ನು ಹಾಕಿದ್ದಿ; ನನ್ನ ದಾರಿಗಳನ್ನೆಲ್ಲಾ ಮನದಟ್ಟುಮಾಡಿ ನನ್ನ ಹೆಜ್ಜೆಗಳ ಸುತ್ತಲೂ ಗೆರೆಯೆಳೆದಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನೀನು ನನ್ನ ಕಾಲುಗಳನ್ನು ಕೋಳಕ್ಕೆ ಹಾಕಿದ್ದೀ; ನನ್ನ ದಾರಿಗಳನ್ನೆಲ್ಲಾ ಮಂದಟ್ಟುಮಾಡಿ ನನ್ನ ಹೆಜ್ಜೆಗಳ ಸುತ್ತಲೂ ಗೆರೆಯೆಳೆದಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನೀನು ನನ್ನ ಕಾಲುಗಳಿಗೆ ಕೋಳವನ್ನು ಹಾಕಿರುವೆ. ನಾನಿಡುವ ಪ್ರತಿಯೊಂದು ಹೆಜ್ಜೆಯನ್ನು ನೀನು ಸೂಕ್ಷ್ಮವಾಗಿ ಗಮನಿಸಿ ನನ್ನ ಹೆಜ್ಜೆಗಳಿಗೆ ಮೇರೆಗಳನ್ನು ಹಾಕಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನನ್ನ ಪಾದಗಳನ್ನು ಸಂಕೋಲೆಗಳಿಂದ ಕಟ್ಟಿಹಾಕಿದ್ದೀರಿ, ನನ್ನ ಪಾದಗಳ ಹಿಮ್ಮಡಿಗಳ ಮೇಲೆ ಗುರುತು ಹಾಕಿದ್ದೀರಿ; ನನ್ನ ಹಾದಿಗಳನ್ನೆಲ್ಲಾ ಲಕ್ಷ್ಯವಿಟ್ಟು ನೋಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:27
10 ತಿಳಿವುಗಳ ಹೋಲಿಕೆ  

‘ನನ್ನ ಕಾಲುಗಳಿಗೆ ಕೋಳ ತೊಡಿಸಿದ್ದಾನೆ ನನ್ನ ಎಲ್ಲ ಹಾದಿಗಳನ್ನು ಕಂಡುಕೊಂಡಿದ್ದಾನೆ.’


ಅಂತೆಯೇ, ಆ ಅಧಿಕಾರಿ ಅವರನ್ನು ಸೆರೆಮನೆಯ ಒಳಕೋಣೆಗೆ ತಳ್ಳಿ ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಿಗಿಸಿದನು.


ವಧ್ಯಸ್ಥಾನಕ್ಕೆ ಹೋಗುವ ಹೋರಿಯಂತೆ, ಬಲೆಗೆ ಸಿಕ್ಕಿಬೀಳುವ ಜಿಂಕೆಯಂತೆ,


ದೇವರ ಸಿಟ್ಟು ಸೀಳಿ ಹಾಳುಮಾಡುತ್ತಿದೆ ಆತ ನನ್ನನ್ನು ನೋಡಿ ಹಲ್ಲುಕಡಿದಿದ್ದಾನೆ ನನ್ನ ವೈರಿ ನನ್ನನ್ನು ದುರುಗುಟ್ಟಿ ನೋಡುತ್ತಿದ್ದಾನೆ.


ಆಗ ನನ್ನ ಹೆಜ್ಜೆಹೆಜ್ಜೆಗಳನು ನೀ ಲೆಕ್ಕಿಸುವೆ ನನ್ನ ಪಾಪ ಹುಡುಕಲು ನೀ ಕಾವಲು ಇಡಲಾರೆ.


ನನ್ನ ತಪ್ಪುಗಳನ್ನು ಹುಡುಕುವ ನಿನಗೆ ನನ್ನ ಪಾಪಗಳನ್ನು ವಿಚಾರಿಸುವ ನಿನಗೆ


ಸೈತಾನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ಹೊರಟುಬಂದ. ಯೋಬನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಕೆಟ್ಟಕುರುಗಳು ಹುಟ್ಟುವಂತೆ ಮಾಡಿ ಆತನನ್ನು ಬಾಧಿಸಿದ.


ಅವನು ಪ್ರವಾದಿ ಯೆರೆಮೀಯನನ್ನು ಹೊಡೆಯಿಸಿ ಸರ್ವೇಶ್ವರನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲ ಬಳಿಯಲ್ಲಿದ್ದ ಸೆರೆಗೆ ಹಾಕಿಸಿದನು.


ಬೆಳಕು ಏತಕೆ ದಾರಿ ಮುಚ್ಚಿರುವವನಿಗೆ? ತನ್ನ ಸುತ್ತಲೂ ದೇವರೆ ಬೇಲಿಹಾಕಿರುವವನಿಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು