Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:9 - ಕನ್ನಡ ಸತ್ಯವೇದವು C.L. Bible (BSI)

9 ದೇವರು ನಿಮ್ಮನ್ನು ಪರಿಶೋಧಿಸಿದರೆ ನಿಮಗೆ ಒಳಿತೆ? ಮನುಷ್ಯರಂತೆ ಆತನನ್ನು ಮೋಸಗೊಳಿಸಲಾದೀತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ನಿಮ್ಮನ್ನು ಶೋಧಿಸಿದರೆ ನಿಮಗೆ ಒಳ್ಳೆಯದಾಗುವುದೋ? ಮನುಷ್ಯನನ್ನು ಮೋಸಗೊಳಿಸುವಂತೆ ಆತನನ್ನೂ ಮೋಸಗೊಳಿಸುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನು ನಿಮ್ಮನ್ನು ಶೋಧಿಸಿದರೆ ನಿಮಗೆ ಒಳ್ಳೇದಾಗುವದೋ? ಮನುಷ್ಯನನ್ನು ಮೋಸಗೊಳಿಸುವಂತೆ ಆತನನ್ನೂ ಮೋಸಗೊಳಿಸುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರು ನಿಮ್ಮನ್ನು ಸೂಕ್ಷ್ಮವಾಗಿ ಪರಿಶೋಧಿಸಿದರೆ ನೀವು ನೀತಿವಂತರಾಗಿ ಕಂಡುಬರುವಿರಾ? ಜನರಿಗೆ ಮೋಸ ಮಾಡುವಂತೆ ದೇವರಿಗೂ ಮೋಸ ಮಾಡಬಹುದೆಂದು ಯೋಚಿಸಿಕೊಂಡಿದ್ದೀರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರು ನಿಮ್ಮನ್ನು ಶೋಧಿಸಿದರೆ, ಅದು ನಿಮಗೆ ಒಳ್ಳೇದೋ? ಒಬ್ಬ ಮನುಷ್ಯನು ಇನ್ನೊಬ್ಬನನ್ನು ವಂಚಿಸುವ ಪ್ರಕಾರ, ನೀವೂ ದೇವರನ್ನು ವಂಚಿಸುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:9
9 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ದೇವಾ, ನಿನಗದು ಬಯಲಾಗದಿರುತ್ತಿತ್ತೆ? I ನಮ್ಮೆದೆ ಗುಟ್ಟು ನಿನಗೆ ತಿಳಿಯದಿರುತ್ತಿತ್ತೆ? II


ಆದಕಾರಣ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಟ್ಟುಬಿಡಿ. ‘ಇಡೀ ನಾಡೇ ನಾಶವಾಗಲಿ’ ಎಂಬ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ತೀರ್ಪನ್ನು ನಾನು ಕೇಳಿದ್ದೇನೆ.


ತಿಳಿದುಕೋ ದೇವಾ, ನನ್ನ ಹೃದಯವನು ಪರೀಕ್ಷಿಸಿ I ಅರಿತುಕೋ ನನ್ನ ಆಲೋಚನೆಗಳನು ಪರಿಶೋಧಿಸಿ II


ಅವನ ಪರಿಶೋಧನೆ ಇನ್ನೂ ಮುಂದುವರೆದರೆ ಒಳಿತು ಅವನು ಕೊಟ್ಟ ಉತ್ತರ ದುರುಳರಿಗೆ ತಕ್ಕುದಾದುದು.


ಚೇಷ್ಟೆಗಾರರಿದ್ದಾರೆ ನನ್ನ ಸುತ್ತಮುತ್ತ ನನ್ನ ಕಣ್ಮುಂದಿದೆ ಸದಾ ಅವರ ಕೆಣಕಾಟ.


ಸಾಮರ್ಥ್ಯ ಹಾಗು ವಿಜಯ ಆತನ ಲಕ್ಷಣ ವಂಚಕ ಹಾಗು ವಂಚಿತ ಆತನಿಗೆ ಅಧೀನ.


ಮನುಜನೋ ಬಿದ್ದಿರುತ್ತಾನೆ ಸತ್ತು ಕೊನೆಯುಸಿರೆಳೆದಾಗ ಎಲ್ಲವು ಮುಗಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು