Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:1 - ಕನ್ನಡ ಸತ್ಯವೇದವು C.L. Bible (BSI)

1 “ಹೆಣ್ಣಿನಿಂದ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನು, ದುಃಖಭರಿತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಮಾನವ ಜನ್ಮ ಪಡೆದವನು, ಅಲ್ಪಾಯುಷ್ಯನಾಗಿಯೂ, ಕಳವಳದಿಂದ ತುಂಬಿದವನಾಗಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸ್ತ್ರೀಯಲ್ಲಿ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನಾಗಿಯೂ ಕಳವಳದಿಂದ ತುಂಬಿದವನಾಗಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೋಬನು ಹೇಳಿದನು: “ನಾವು ಮನುಷ್ಯರಷ್ಟೇ. ನಮ್ಮ ಅಲ್ಪಜೀವಿತವು ಕಷ್ಟಗಳಿಂದ ತುಂಬಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನೂ, ಕಷ್ಟಸಂಕಟಗಳಿಂದ ತುಂಬಿದವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:1
20 ತಿಳಿವುಗಳ ಹೋಲಿಕೆ  

ಜ್ವಾಲೆಗಳು ಏರುವುದು ಮೇಲಕೆ ಜನರು ಹುಟ್ಟಿರುವುದು ದುಃಖಕೆ.


ಅವನ ಮನಸ್ಸಿಗೆ ನೆಮ್ಮದಿ ಇಲ್ಲ, ಇದು ಸಹ ವ್ಯರ್ಥವೇ ಸರಿ.


ನರನು ದೇವರ ದೃಷ್ಟಿಯಲ್ಲಿ ಸಜ್ಜನನಾಗಿರಲು ಸಾಧ್ಯವೆ? ಸ್ತ್ರೀಯರಲ್ಲಿ‌ ಹುಟ್ಟಿದವನು ಪರಿಶುದ್ಧನಾಗಿರುವುದು ಶಕ್ಯವೆ?


“ಮಾನವನ ಜೀವನ ಸೈನಿಕರ ಸೇವಾವಧಿಯಂತೆ ಅವನ ದಿನಗಳು ಕಳೆಯುತ್ತವೆ ಜೀತದಾಳಿನ ದಿನಗಳಂತೆ.


ಯಕೋಬನು, “ನನ್ನ ಬಾಳಿನ ಪಯಣದ ದಿನಗಳು ನೂರ ಮೂವತ್ತು ವರ್ಷಗಳಷ್ಟೇ. ಎಣಿಕೆಯಲ್ಲಿ ಅವು ಕಮ್ಮಿ; ಕಷ್ಟದುಃಖದಲ್ಲಿ ಜಾಸ್ತಿ; ನನ್ನ ಪೂರ್ವಜರು ಬಾಳಿದಷ್ಟು ವರ್ಷಗಳು ನನಗಾಗಿಲ್ಲ,” ಎಂದು ಹೇಳಿ


ಮಾನವನಾಗಿ ಜನಿಸಿದ್ದವರಲ್ಲಿ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಾರೂ ಹುಟ್ಟಿಲ್ಲ! ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಆದರೂ ಸ್ವರ್ಗಸಾಮ್ರಾಜ್ಯದಲ್ಲಿ ಕನಿಷ್ಠನಾದವನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ.


ನಾ ಜನಿಸಿದೆ ಪಾಪಪಂಕದಲೆ I ದ್ರೋಹಿ ನಾ ಮಾತೃಗರ್ಭದಿಂದಲೆ II


ನರನು ಎಷ್ಟರವನು? ಅವನು ಪರಿಶುದ್ಧನಿರಲು ಸಾಧ್ಯವೆ? ಸ್ತ್ರೀಯರಲ್ಲಿ ಹುಟ್ಟಿದವನು ನೀತಿವಂತನಾಗಿರಬಹುದೆ?


ನನ್ನ ದಿನಗಳು ಓಟಗಾರನಿಗಿಂತ ವೇಗ ಅವು ಓಡುತ್ತವೆ ಕಾಣದೆ ಯಾವುದೊಂದು ಸುಖ.


ನನ್ನ ದಿನಗಳು ಮಗ್ಗದ ಲಾಳಕ್ಕಿಂತ ತ್ವರಿತ ಅವುಗಳಿಗಿದೋ ನಿರೀಕ್ಷೆಯಿಲ್ಲದ ಮುಕ್ತಾಯ.


ಲೋಕದ ಆಗುಹೋಗುಗಳು ಕೇಡಿಗೆ ಈಡಾಗುವುವೆಂದು ನನಗೆ ಕಂಡುಬಂದಿತು. ಜೀವನವೇ ನೀರಸವೆಂದು ನನಗೆ ತೋಚಿತು; ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ಸಮಸ್ತವೂ ವ್ಯರ್ಥವೇ ಸರಿ!


ನನ್ನಾಯುಸ್ಸು ಗೇಣುದ್ದ, ನಿನ್ನೆಣಿಕೆಗದು ಶೂನ್ಯ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ! II


ಅನಂತರ ಆದಾಮನಿಗೆ: “ತಿನ್ನಬಾರದೆಂದು ನಾ ವಿಧಿಸಿದ ಮರದ ಹಣ್ಣನ್ನು ತಿಂದೆ ನೀನು, ಕೇಳಿ ನಿನ್ನಾ ಮಡದಿಯ ಮಾತನ್ನು. ಇದಕಾರಣ ಹಾಕಿರುವೆನು ಶಾಪ ಹೊಲನೆಲಕ್ಕೆ ದುಡಿವೆ ನೀನು ಜೀವಮಾನವಿಡೀ ಅದರ ಕೃಷಿಗೆ.


ನನಗುಳಿದಿರುವ ದಿನಗಳು ಕೆಲವೇ ಕಿಂಚಿತ್ತು ವಿಶ್ರಮಿಸಲು ನನ್ನನು ಬಿಟ್ಟುಬಿಡಬಾರದೆ?’


ಎಷ್ಟು ಅಲ್ಪವಾದುದೆನ್ನ ಜೀವಮಾನಕಾಲ I ಎಷ್ಟು ನಶ್ವರ ನೀ ನಿರ್ಮಿಸಿದ ಮಾನವ ಕುಲ! II


ಗರ್ಭ ಬಿಟ್ಟು ನಾನೇಕೆ ಹೊರಬಂದೆ? ಕಷ್ಟದುಃಖಗಳನ್ನು ಅನುಭವಿಸುವುದಕ್ಕೊ? ಅವಮಾನದಲ್ಲೆ ಬಾಳಿನ ದಿನಗಳನ್ನೆಲ್ಲ ಕಳೆಯುವುದಕ್ಕೊ?


ಅಲ್ಲಿದ್ದಾಗ ಅವನು ಇದ್ದಕ್ಕಿದ್ದ ಹಾಗೆ, “ಅಪ್ಪಾ, ನನ್ನ ತಲೆ ಸಿಡಿಯುತ್ತಿದೆ, ಸಿಡಿಯುತ್ತಿದೆ,” ಎಂದು ಕೂಗಿಕೊಂಡನು. ತಂದೆ ಒಬ್ಬ ಸೇವಕನನ್ನು ಕರೆದು, “ಇವನನ್ನು ತಾಯಿಯ ಹತ್ತಿರ ತೆಗೆದುಕೊಂಡು ಹೋಗು,” ಎಂದು ಆಜ್ಞಾಪಿಸಿದನು.


ನಾವಾದರೋ ನಿನ್ನೆ ಹುಟ್ಟಿದವರು, ಏನೂ ಅರಿಯದವರು ಭೂಲೋಕದಲ್ಲಿನ ನಮ್ಮ ಬಾಳು ಕೇವಲ ನೆರಳು.


ಆತನ ದೃಷ್ಟಿಗೆ ಚಂದ್ರನೂ ಕಾಂತಿಯುತನಲ್ಲ ನಕ್ಷತ್ರಗಳೂ ನಿರ್ಮಲವಾದವುಗಳಲ್ಲ.


ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು