Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:12 - ಕನ್ನಡ ಸತ್ಯವೇದವು C.L. Bible (BSI)

12 ಸತ್ತು ಮಲಗಿದ ಮನುಜ ಏಳುವಂತಿಲ್ಲ. ಅಳಿದುಹೋದರೂ ಆಕಾಶಮಂಡಲ ಅವನು ಎಚ್ಚರಗೊಳ್ಳುವುದಿಲ್ಲ, ಎಬ್ಬಿಸಲ್ಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮನುಷ್ಯರು ಮಲಗಿಕೊಂಡು ಏಳದೇ ಇರುವರು; ಆಕಾಶವು ಅಳಿದು ಹೋಗುವ ತನಕ ಅವರು ನಿದ್ರೆಯನ್ನು, ತಿಳಿಯುವುದಿಲ್ಲ, ಎಬ್ಬಿಸಲ್ಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮನುಷ್ಯರು ಮಲಗಿಕೊಂಡು ಏಳದೇ ಇರುವರು; ಆಕಾಶವು ಅಳಿದುಹೋಗುವ ತನಕ ಅವರು ನಿದ್ರೆತಿಳಿಯುವದಿಲ್ಲ, ಎಬ್ಬಿಸಲ್ಪಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸತ್ತ ಮನುಷ್ಯನು ಮಲಗಿಕೊಂಡೇ ಇರುವನು. ಅವನು ಮತ್ತೆ ಮೇಲೇಳುವುದಿಲ್ಲ. ಆಕಾಶವು ಅಳಿದುಹೋಗುವವರೆಗೆ ಅವನು ನಿದ್ರೆಯಿಂದ ಎಬ್ಬಿಸಲ್ಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮನುಷ್ಯನು ಸತ್ತು ಮಲಗಿದರೆ ಏಳುವುದೇ ಇಲ್ಲ; ಆಕಾಶಗಳು ಅಳಿದು ಹೋಗುವವರೆಗೆ ಅವನು ಎಚ್ಚರಗೊಳ್ಳುವುದಿಲ್ಲ; ನಿದ್ರೆಯಿಂದ ಎಬ್ಬಿಸಲಾಗುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:12
26 ತಿಳಿವುಗಳ ಹೋಲಿಕೆ  

ತರುವಾಯ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಕಂಡೆ. ಮೊದಲಿದ್ದ ಆಕಾಶಮಂಡಲವೂ ಮೊದಲಿದ್ದ ಭೂಮಂಡಲವೂ ಕಣ್ಮರೆಯಾಗಿ ಹೋದವು. ಸಮುದ್ರವು ಇನ್ನಿಲ್ಲವಾಯಿತು.


ಆಗ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ ಕಣ್ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆ.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಈಗಿರುವ ಭೂಮ್ಯಾಕಾಶಗಳನ್ನು ಅದೇ ವಾಕ್ಯದ ಬಲದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲಾಗಿದೆ. ದುರ್ಜನರು ವಿನಾಶವಾಗಬೇಕಾದ ನ್ಯಾಯತೀರ್ಪಿನ ದಿನದವರೆಗೂ ಇವನ್ನು ಉಳಿಸಲಾಗಿದೆ.


ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.


ಸಮಸ್ತವನ್ನೂ ಪುನರ್‍ಸ್ಥಾಪನೆಗೊಳಿಸುವವರೆಗೆ ಕ್ರಿಸ್ತಯೇಸು ಸ್ವರ್ಗದಲ್ಲಿಯೇ ಇರಬೇಕಾಗಿದೆ. ಇದನ್ನು ದೇವರು ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲಕ್ಕೆ ಹಿಂದೆಯೇ ಪ್ರಕಟಿಸಿದ್ದಾರೆ.


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುವೆನು; ಆಗ, ಮೊದಲಿದ್ದದ್ದು ಜ್ಞಾಪಕದಲ್ಲಿರದು; ಅದು ಯಾರ ನೆನಪಿಗೂ ಬಾರದು.


ಆಕಾಶಮಂಡಲವನು ನೋಡಿ ಕಣ್ಣೆತ್ತಿ ಭೂಮಂಡಲದತ್ತ ನೋಡಿ ಕೆಳಗೆ ದಿಟ್ಟಿಸಿ. ಆಕಾಶ ಚದರಿಹೋಗುವುದು ಹೊಗೆಯಂತೆ ಭೂಮಿ ಹರಿದುಹೋಗುವುದು ಬಟ್ಟೆಯಂತೆ ಸಾಯುವರು ಭೂನಿವಾಸಿಗಳು ಅದರಂತೆ. ನಾ ಕೊಡುವ ವಿಮೋಚನೆಯೋ ನಿಲ್ಲುವುದು ಶಾಶ್ವತವಾಗಿ ನಾ ನೀಡುವ ಮುಕ್ತಿಯೋ ಅಳಿದುಹೋಗದು ಭಂಗವಾಗಿ.


ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.


ನನ್ನನು ಮರಣಕ್ಕೆ ಗುರಿಮಾಡುವೆಯೆಂದು ತಿಳಿದಿದೆ ಸಮಸ್ತಜೀವಿಗಳು ತೆರಳುವ ಮಂದಿರಕ್ಕೆ ಸೇರಿಸುವೆಯೆಂದು ಗೊತ್ತೇ ಇದೆ.


ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಇದು ಅದರ ಸ್ವಂತ ಇಚ್ಛೆಯಿಂದಲ್ಲ. ದೇವರ ಇಚ್ಛೆಯಿಂದಲೇ ಆಯಿತು. ಆದರೂ ಸೃಷ್ಟಿಗೆ ನಿರೀಕ್ಷೆಯೊಂದಿದೆ.


ಸತ್ತು ಧೂಳಿ ಮಣ್ಣಿನಲ್ಲಿ ‘ದೀರ್ಘನಿದ್ರೆ’ಮಾಡುತ್ತಿರುವ ಅನೇಕರು ಏಳುವರು. ಎಚ್ಚೆತ್ತವರಲ್ಲಿ ಕೆಲವರು ನಿತ್ಯಜೀವವನ್ನು ಅನುಭವಿಸುವರು; ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


“ನಾ ಸೃಷ್ಟಿಸುವ ಹೊಸ ಆಕಾಶ, ಹೊಸ ಭೂಮಿ, ನಿಲ್ಲುವುವು ನನ್ನ ಮುಂದೆ ಸ್ಥಿರವಾಗಿ; ಅಂತೆಯೇ ನಿಮ್ಮ ಸಂತತಿ, ನಿಮ್ಮ ಹೆಸರು ನಿಲ್ಲುವುವು ಸ್ಥಿರವಾಗಿ.


ದಾರಿಯಲ್ಲಿ ನಡೆವುದು ಅಪಾಯಕರವಾಗಿರುವುದು; ಹೂಬಿಟ್ಟ ಬಾದಾಮಿ ಮರದಂತೆ ತಲೆಗೂದಲು ನರೆತುಬಿಡುವುದು, ಮಿಡತೆಯು ಕೂಡ ಭಾರವಾಗುವುದು; ಆಸೆ ಕುಂದಿಹೋಗುವುದು. ನಿನ್ನ ನಿತ್ಯಗೃಹಕ್ಕೆ ತೆರಳಿರುವೆ, ಗೋಳಾಟದವರು ಬೀದಿಯಲ್ಲಿ ಕಾಣಿಸಿಕೊಳ್ಳುವರು.


ನೀನಾದರೋ ಉಳಿದಿರುವೆ, ಅವೋ ಅಳಿದುಹೋಗುವುವು I ಹಳೆಯದಾಗುತ್ತವೆ ಬಟ್ಟೆಯಂತೆ ಅವೆಲ್ಲವು I ಉಡುಪಿನಂತೆ ಬದಲಿಸುತ್ತ, ಮಾರ್ಪಡುತ್ತವೆ ಅವು II


ನನ್ನ ಅಪರಾದವನ್ನು ನೀನು ಕ್ಷಮಿಸಬಾರದೆ? ನನ್ನ ದೋಷವನ್ನು ನೀನು ಪರಿಹರಿಸಬಾರದೆ? ಮಣ್ಣಿನೊಳಗೆ ಬಿದ್ದಿರುವೆ ನಾನು ಈಗ ನಾನು ಇಲ್ಲವಾಗಿರುವೆ ನೀ ಹುಡುಕುವಾಗ.


ಮನುಜರು ನೀ ಹರಿದೋಡಿಸುವ ಹೊಯಿಲು I ಇರುಳಿನ ಕನಸು, ಹಗಲಿನ ಗರಿಹುಲ್ಲು II


ಮೋಡ ಕರಗಿ ಮಾಯವಾಗುವಂತೆ ಪಾತಾಳಕ್ಕಿಳಿದವನು ಬಾರನು ಮತ್ತೆ.


ಯುವಕನೇ, ಯೌವನದಲ್ಲಿ ಆನಂದಿಸು. ಯೌವನ ದಿನಗಳಲ್ಲಿ ಹೃತ್ಪೂರ್ವಕವಾಗಿ ಸಂತೋಷಿಸು. ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೊ. ಆದರೆ ಈ ಎಲ್ಲ ವಿಷಯಗಳಲ್ಲಿ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವರೆಂಬುದನ್ನು ಮನದಲ್ಲಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು