Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:13 - ಕನ್ನಡ ಸತ್ಯವೇದವು C.L. Bible (BSI)

13 ಆಹಾ! ಬಚ್ಚಿಡಲಾರೆಯಾ ನನ್ನನ್ನು ಪಾತಾಳದೊಳಗೆ? ಅಲ್ಲಿ ಮರೆಮಾಚಿಡಲಾರೆಯಾ ನಿನ್ನ ಕೋಪ ಇಳಿಯುವವರೆಗೆ? ಕಾಲವನ್ನು ಗೊತ್ತುಮಾಡಲಾರೆಯಾ ನನ್ನನು ನೆನೆಯುವುದಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿನ್ನ ಕೋಪವು ಇಳಿಯುವ ವರೆಗೆ ನನ್ನನ್ನು ಮರೆಮಾಡಿ, ನೀನು ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟು, ನನಗೆ ಅವಧಿಯನ್ನು ಗೊತ್ತುಮಾಡಿ ಕಡೆಯಲ್ಲಿ ನನ್ನನ್ನು ಜ್ಞಾಪಿಸಿಕೊಂಡರೆ ಎಷ್ಟೋ ಒಳ್ಳೇದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀನು ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟು ನಿನ್ನ ಕೋಪವು ಇಳಿಯುವ ಪರ್ಯಂತ ನನ್ನನ್ನು ಮರೆಮಾಡಿ ನನಗೆ ಅವಧಿಯನ್ನು ಗೊತ್ತುಮಾಡಿ [ಕಡೆಯಲ್ಲಿ] ನನ್ನನ್ನು ಜ್ಞಾಪಿಸಿಕೊಂಡರೆ ಎಷ್ಟೋ ಒಳ್ಳೇದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನಿನ್ನ ಕೋಪವು ಇಳಿಯುವ ತನಕ ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟಿದ್ದು, ನೀನು ಗೊತ್ತುಪಡಿಸಿದ ಸಮಯದಲ್ಲಿ ನನ್ನನ್ನು ಜ್ಞಾಪಿಸಿಕೊಂಡಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ದೇವರೇ, ನೀವು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿಮ್ಮ ಶಿಕ್ಷೆ ಮುಗಿಯುವವರೆಗೂ ನನ್ನನ್ನು ಅಡಗಿಸಿರಿ! ನೀವು ನನಗೆ ಒಂದು ಕಾಲವನ್ನು ನಿಗದಿಪಡಿಸಿ, ಅನಂತರ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:13
13 ತಿಳಿವುಗಳ ಹೋಲಿಕೆ  

“ಆ ದಿನವಾಗಲಿ, ಆ ಗಳಿಗೆಯಾಗಲಿ, ಯಾವಾಗ ಬರುವುದೆಂದು ಪಿತನ ಹೊರತು ಮತ್ತಾರೂ ಅರಿಯರು. ಸ್ವರ್ಗದಲ್ಲಿರುವ ದೂತರೇ ಆಗಲಿ, ಪುತ್ರನೇ ಆಗಲಿ, ಅದನ್ನು ಅರಿಯರು.


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಯೇಸು ಪ್ರತ್ಯುತ್ತರವಾಗಿ, “ಸಮಯ ಸಂದರ್ಭಗಳು ನನ್ನ ಪಿತನ ಸ್ವಾಧೀನದಲ್ಲಿವೆ. ಅವುಗಳನ್ನು ತಿಳಿಯುವುದು ನಿಮ್ಮ ಕೆಲಸವಲ್ಲ.


ಬಳಿಕ ಅವನು, “ಸ್ವಾಮಿ ಯೇಸುವೇ, ನೀವು ರಾಜ್ಯಾಧಿಕಾರದೊಡನೆ ಬರುವಾಗ ನನ್ನನ್ನು ಜ್ಞಾಪಿಸಿಕೊಳ್ಳಿ,” ಎಂದು ಬೇಡಿಕೊಂಡನು.


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ಮರೆಯಬೇಡೆನ್ನನು ಪ್ರಭು, ನಿನ್ನ ಪ್ರಜೆಗೆ ದಯೆತೋರುವಾಗ I ನೆರವು ನೀಡೆನಗೆ ಸ್ವಾಮಿ, ನೀನಾ ಜನರನು ಉದ್ಧರಿಸುವಾಗ II


ದೇವರಿಗೆ ನೋಹನ ಮತ್ತು ಅವನ ಸಂಗಡ ನಾವೆಯಲ್ಲಿದ್ದ ಎಲ್ಲ ಪ್ರಾಣಿಪಕ್ಷಿಗಳ ನೆನಪಿತ್ತು. ಅವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲು ನೀರು ತಗ್ಗಿತು.


ಮೋಡ ಕರಗಿ ಮಾಯವಾಗುವಂತೆ ಪಾತಾಳಕ್ಕಿಳಿದವನು ಬಾರನು ಮತ್ತೆ.


ಸತ್ತಮೇಲೆ ಮನುಜ ಮರಳಿ ಬದುಕುತ್ತಾನೆಯೇ? ಬದುಕುವುದಾದರೆ ಮುಕ್ತಿಹೊಂದುವವರೆಗೆ ನನ್ನ ವಾಯಿದೆಯ ದಿನವೆಲ್ಲ ನಾ ಕಾದಿರುವೆ.


ಸರ್ವೇಶ್ವರ ಈಜಿಪ್ಟಿನವರನ್ನು ವಧಿಸಲು ಆ ದೇಶದ ನಡುವೆ ಹಾದುಹೋಗುವಾಗ ನಿಮ್ಮ ನಿಮ್ಮ ಮನೆಬಾಗಲಿನ ಮೇಲ್ಪಟ್ಟಿಯಲ್ಲೂ ಹಾಗೂ ಎರಡು ನಿಲುವು ಕಂಬಗಳಲ್ಲೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿಹೋಗುವರು. ನಿಮ್ಮನ್ನು ವಧಿಸಲು ವಿನಾಶಕನನ್ನು ನಿಮ್ಮ ಮನೆಗಳಿಗೆ ಅವರು ಬರಗೊಡಿಸುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು