Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:18 - ಕನ್ನಡ ಸತ್ಯವೇದವು C.L. Bible (BSI)

18 ಆದರೆ ಬೆಟ್ಟ ಕದಡಿ ಕರಗುವಂತೆ ಬಂಡೆ ತನ್ನ ಸ್ಥಳದಿಂದ ಜಾರುವಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ಪರ್ವತವೂ ಬಿದ್ದು ಕರಗಿಹೋಗುವುದು, ಬಂಡೆಯು ತನ್ನ ಸ್ಥಳದಿಂದ ಜರುಗುವುದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೆ ಪರ್ವತವೂ ಬಿದ್ದು ಕರಗಿಹೋಗುವದು, ಬಂಡೆಯು ತನ್ನ ಸ್ಥಳದಿಂದ ಜರಗುವದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಪರ್ವತವು ಬಿದ್ದು ಕರಗಿಹೋಗುವಂತೆ ಬಂಡೆಯು ತನ್ನ ಸ್ಥಳದಿಂದ ಚಲಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಆದರೂ ಬೆಟ್ಟವು ಬಿದ್ದು ಹಾಳಾಗುವಂತೆಯೂ, ಬಂಡೆಯು ತನ್ನ ಸ್ಥಳದಿಂದ ತೊಲಗುವಂತೆಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:18
13 ತಿಳಿವುಗಳ ಹೋಲಿಕೆ  

ಆಕಾಶವು ಸುರುಳಿಯಂತೆ ಸುತ್ತಿಕೊಂಡು ಕಣ್ಮರೆಯಾಯಿತು. ಎಲ್ಲಾ ಪರ್ವತಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚಲಿಸಿದವು.


ಸಿಟ್ಟಿನಿಂದ ನಿನ್ನನ್ನೆ ಸೀಳಿಕೊಳ್ಳುತ್ತಿರುವವನೇ, ನಿನ್ನ ನಿಮಿತ್ತ ಇಡೀಲೋಕ ಬಿಕೋ ಎನ್ನಬೇಕೆ? ಬೆಟ್ಟಗುಡ್ಡಗಳು ಸ್ಥಳಬಿಟ್ಟು ಜರುಗಬೇಕೆ?


ಬೆಟ್ಟಗಳನ್ನು ನೋಡಿದೆ, ಅವು ನಡುನಡುಗುತ್ತಿದ್ದವು. ಗುಡ್ಡ ದಿಣ್ಣೆಗಳೂ ಅಲ್ಲೋಲಕಲ್ಲೋಲವಾಗಿದ್ದವು.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಎರಡನೆಯ ದೇವದೂತನು ತುತೂರಿಯನ್ನು ಊದಿದನು. ಬೆಂಕಿ ಹತ್ತಿ ಉರಿಯುತ್ತಿರುವ ಪರ್ವತವೋ ಎಂಬಂತಿದ್ದ ವಸ್ತುವೊಂದನ್ನು ಸಮುದ್ರಕ್ಕೆ ಎಸೆಯಲಾಯಿತು. ಸಮುದ್ರದಲ್ಲಿ ಮೂರನೆಯ ಒಂದು ಭಾಗ ರಕ್ತವಾಗಿ ಮಾರ್ಪಟ್ಟಿತು.


ಆಗ ಇಗೋ, ಮಹಾದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೆ ಇಬ್ಭಾಗವಾಗಿ ಸೀಳಿಹೋಯಿತು; ಭೂಮಿ ನಡುಗಿತು,


(ಸ್ವಾಮೀ) ಆಕಾಶವನ್ನು ಸೀಳಿ ಇಳಿದು ಬರಲಾರಿರಾ? ನಿಮ್ಮ ದರ್ಶನವನ್ನು ಕಂಡು ಬೆಟ್ಟಗುಡ್ಡಗಳು ಗಡಗಡನೆ ನಡುಗಬಾರದೆ?


ಬಿರುಕುಬಿಟ್ಟಾವು ಬೆಟ್ಟಗಳು, ಕದಲಿಯಾವು ಗುಡ್ಡಗಳು, ನನ್ನ ಅಚಲ ಪ್ರೀತಿಯಾದರೊ ಬಿಟ್ಟುಹೋಗದು ನಿನ್ನನು. ಶಾಂತಿಸಮಾಧಾನದ ನನ್ನೀ ಒಪ್ಪಂದವು ಕದಲದು. ನಿನ್ನ ಮೇಲೆ ಕರುಣೆಯಿಟ್ಟಿರುವ ಸರ್ವೇಶ್ವರನ ನುಡಿಯಿದು.”


ಅಳೆವನಾರು ಸಮುದ್ರಸಾಗರಗಳನ್ನು ಬೊಗಸೆಗೈಯಿಂದ? ಮೊಳ ಹಾಕುವವನಾರು ಆಕಾಶಮಂಡಲವನ್ನು ಕೈಗೇಣಿನಿಂದ? ತುಂಬುವವನಾರು ಧರೆಯ ಮರಳನ್ನೆಲ್ಲಾ ಕೊಳಗದೊಳಗೆ? ತೂಗಿದವನಾರು ಬೆಟ್ಟಗುಡ್ಡಗಳನ್ನು ತ್ರಾಸುತಕ್ಕಡಿಯೊಳಗೆ?


ಆಗ ನನ್ನ ದ್ರೋಹವನ್ನೆಲ್ಲ ಮೂಟೆಕಟ್ಟಿ ಮೂಲೆಗೆ ಹಾಕುವೆ ನನ್ನ ದೋಷವನ್ನು ಮುಚ್ಚಿ, ನೀ ಮರೆಮಾಡುವೆ.


ಕಲ್ಲುಗಳನ್ನು ನೀರು ಸವೆಸುವಂತೆ ನೆಲದ ಮಣ್ಣನು ಪ್ರವಾಹ ಕೊಚ್ಚುವಂತೆ ಭಂಗವಾಗುವುದು ಮಾನವನ ನಿರೀಕ್ಷೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು