Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:2 - ಕನ್ನಡ ಸತ್ಯವೇದವು C.L. Bible (BSI)

2 ಅರಳಿ ಬಾಡುವನು ಹೂವಿನಂತೆ ನಿಲ್ಲದೆ ಓಡುವನು ನೆರಳಿನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೂವಿನ ಹಾಗೆ ಅರಳಿ ಬಾಡುವನು, ನೆರಳಿನಂತೆ ನಿಲ್ಲದೆ ಓಡಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹೂವಿನ ಹಾಗೆ ಅರಳಿ ಬಾಡುವನು, ನೆರಳಿನಂತೆ ನಿಲ್ಲದೆ ಓಡಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮನುಷ್ಯನ ಜೀವಿತವು ಹೂವಿನಂತೆ ಬೇಗನೆ ಬೆಳೆದು ಒಣಗಿಹೋಗುವುದು. ಮನುಷ್ಯನ ಜೀವಿತವು ನೆರಳಿನಂತೆ ಕ್ಷಣಿಕವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಹೂವಿನ ಹಾಗೆ ಅರಳಿ ಬಾಡುವನು; ಅವನು ನೆರಳಿನಂತೆ ಓಡಿಹೋಗುತ್ತಾನೆ, ಶಾಶ್ವತವಾಗಿರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:2
21 ತಿಳಿವುಗಳ ಹೋಲಿಕೆ  

ಪವಿತ್ರಗ್ರಂಥದಲ್ಲಿ ಬರೆದಿರುವಂತೆ : ನರಮಾನವರೆಲ್ಲರೂ ಗರಿಹುಲ್ಲಿನಂತೆ ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತೆ. ಹುಲ್ಲೊಣಗಿ ಹೂ ಬಾಡಿಬೀಳುವುದು ಪ್ರಭುವಿನ ವಾಕ್ಯವಾದರೋ ಶಾಶ್ವತವಾಗಿ ನಿಲ್ಲುವುದು.


ನಾವಾದರೋ ನಿನ್ನೆ ಹುಟ್ಟಿದವರು, ಏನೂ ಅರಿಯದವರು ಭೂಲೋಕದಲ್ಲಿನ ನಮ್ಮ ಬಾಳು ಕೇವಲ ನೆರಳು.


ನಿಮ್ಮ ಜೀವಮಾನ ಎಷ್ಟುಮಾತ್ರದ್ದು? ಈಗ ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹೊಗೆಯಂತೆ ಅದು.


ನಾವು ನಿಮ್ಮ ದೃಷ್ಟಿಯಲ್ಲಿ ಪರದೇಶಿಗಳು; ನಮ್ಮ ಪೂರ್ವಜರಂತೆ ಪ್ರವಾಸಿಗಳು. ನಮ್ಮ ಆಯುಷ್ಕಾಲ ನೆರಳಿನಂತೆ; ನಮಗಿಲ್ಲ, ಯಾವ ನಿರೀಕ್ಷೆ.


ಮಾನವನು ಕೇವಲ ಉಸಿರಿಗೆ ಸಮಾನ I ಮರೆಯಾಗುವ ನೆರಳು ಅವನ ಜೀವನ II


ನನ್ನ ಬಾಳು ಬೈಗಿನ ನೆರಳಂತೆ I ನಾನಿರುವೆ ಬಾಡಿದ ಹುಲ್ಲಿನಂತೆ II


ದೇವರಿಗೆ ಹೆದರದ ದುರ್ಜನನಿಗೆ ಒಳ್ಳೆಯದಾಗದೆಂಬುದು ನಿಶ್ಚಯ. ನೆರಳಿನಂತಿರುವ ಅವನ ಬಾಳಿನ ದಿನಗಳು ಹೆಚ್ಚುವುದಿಲ್ಲ.


ಬೆಳೆಯುವರು ಸಜ್ಜನರು ಖರ್ಜೂರದ ವೃಕ್ಷದಂತೆ I ವೃದ್ಧಿಯಾಗುವರು ಲೆಬನೋನಿನ ದೇವದಾರಿನಂತೆ II


ದುರುಳರು ಚಿಗುರಬಹುದು ಹುಲ್ಲಿನಂತೆ I ಕೆಡುಕರು ಅರಳಬಹುದು ಹೂವಿನಂತೆ I ಅವರ ಅಳಿವಂತೂ ಕಟ್ಟಿಟ್ಟ ಬುತ್ತಿಯಂತೆ II


ಅವರು ಉದಯಾಸ್ತಮಾನಗಳ ನಡುವೆ ಜಜ್ಜಿಹೋಗುವರು ಯಾರ ಲಕ್ಷ್ಯವೂ ಇಲ್ಲದೆ ನಿತ್ಯವಿನಾಶ ಹೊಂದುವರು.


ಅವನಾಗುವನು ಮಾಗದ ಹಣ್ಣನ್ನು ಕಳೆದುಕೊಂಡ ದ್ರಾಕ್ಷಿಬಳ್ಳಿಯಂತೆ ಹೂಗಳನ್ನು ಉದುರಿಸಿಕೊಂಡ ಓಲಿವ್ ಎಣ್ಣೆ ಮರದಂತೆ.


ಅವರು ಒಣಗಿಹೋಗುವರು ಕಾಡುಗರಿಕೆಯಂತೆ I ಬೇಗ ಬಾಡಿಹೋಗುವರು ಕಾಯಿಪಲ್ಯದಂತೆ II


ನನ್ನಾಯುಸ್ಸು ಗೇಣುದ್ದ, ನಿನ್ನೆಣಿಕೆಗದು ಶೂನ್ಯ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ! II


ಇಂತಿರಲು ಪ್ರಭು, ನಾನೇತಕೆ ಕಾದಿರಬೇಕು? I ನೀನೆ ಅಲ್ಲವೆ ನನಗೆ ನಂಬಿಕೆ, ಇದು ಸಾಕು II


ಕೂಗಿ ನಾ ನಿಟ್ಟುಸಿರಿಟ್ಟೆ I ಎಲುಬು ತೊಗಲು ಆಗಿಬಿಟ್ಟೆ II


ನೀನಾದರೋ ಪ್ರಭು, ಸದಾ ಸಿಂಹಾಸನಾರೂಢ I ಮಾಳ್ಪರು ತಲತಲಾಂತರಕು ನಿನ್ನ ನಾಮಸ್ಮರಣ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು