ಯೋಬ 15:25 - ಕನ್ನಡ ಸತ್ಯವೇದವು C.L. Bible (BSI)25 ದೇವರಿಗೆ ವಿರುದ್ಧ ಅವನು ಮುಷ್ಠಿ ತೋರಿದನಲ್ಲವೆ? ಸರ್ವಶಕ್ತನನು ಧಿಕ್ಕರಿಸುತಾ ಶೂರನಂತೆ ಮೆರೆದನಲ್ಲವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವನು ದೇವರಿಗೆ ವಿರುದ್ಧವಾಗಿ ಕೈಚಾಚಿ ಸರ್ವಶಕ್ತನಾದ ದೇವರ ಎದುರು ನಿಂತು ಶೂರನಂತೆ ಮೆರೆದನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವನು ದೇವರಿಗೆ ವಿರುದ್ಧವಾಗಿ ಕೈಚಾಚಿ ಸರ್ವಶಕ್ತನಿಗೆ ಎದುರು ನಿಂತು ಶೂರನಂತೆ ಮೆರೆದನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯಾಕೆಂದರೆ ದುಷ್ಟನು ದೇವರಿಗೆ ವಿರುದ್ಧವಾಗಿ ತನ್ನ ಕೈಯನ್ನು ಝಳಪಿಸುತ್ತಾನೆ. ದುಷ್ಟನು ಸರ್ವಶಕ್ತನಾದ ದೇವರ ವಿರುದ್ಧವಾಗಿ ಮಹಾಶೂರನಂತೆ ಆಕ್ರಮಣ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಏಕೆಂದರೆ ದುಷ್ಟನು ದೇವರಿಗೆ ವಿರೋಧವಾಗಿ ಮುಷ್ಠಿ ತೋರಿಸಿದನಲ್ಲಾ, ಸರ್ವಶಕ್ತರ ಎದುರು ನಿಂತು ಶೂರನಂತೆ ಮೆರೆದನಲ್ಲಾ. ಅಧ್ಯಾಯವನ್ನು ನೋಡಿ |
ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.