Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 15:27 - ಕನ್ನಡ ಸತ್ಯವೇದವು C.L. Bible (BSI)

27 ಕೊಬ್ಬೇರಿತ್ತು ಅವನ ಮೋರೆಯಲಿ ಬೊಜ್ಜು ಬೆಳೆದಿತ್ತು ಅವನ ಸೊಂಟದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನು ಮುಖದಲ್ಲಿ ಕೊಬ್ಬೇರಿಸಿಕೊಂಡು ಸೊಂಟದಲ್ಲಿ ಬೊಜ್ಜನ್ನು ಬೆಳೆಸಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನು ಮುಖದಲ್ಲಿ ಕೊಬ್ಬೇರಿಸಿಕೊಂಡು ಸೊಂಟದಲ್ಲಿ ಬೊಜ್ಜನ್ನು ಬೆಳಿಸಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ದುಷ್ಟನ ಮುಖದಲ್ಲಿ ಕೊಬ್ಬೇರಿದೆ, ಅವನ ಸೊಂಟದಲ್ಲಿ ಬೊಜ್ಜು ಬೆಳೆದುಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ದುಷ್ಟನು ತನ್ನ ಮುಖದಲ್ಲಿ ಕೊಬ್ಬೇರಿಸಿಕೊಂಡು, ತನ್ನ ಸೊಂಟದಲ್ಲಿ ಬೊಜ್ಜನ್ನು ಬೆಳೆಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 15:27
10 ತಿಳಿವುಗಳ ಹೋಲಿಕೆ  

ಕರುಣೆಗೆಡೆಯಿಲ್ಲ ಕೊಬ್ಬಿದಾ ಹೃದಯಗಳಲಿ I ಗರ್ವ ತುಳುಕುತಿದೆ ಆ ಜನರ ಬಾಯಿಗಳಲಿ II


ಕೊಬ್ಬಿ ಮೆರೆಯುತ್ತಿದ್ದಾರೆ. ಕೆಟ್ಟ ಕಾರ್ಯಗಳಲ್ಲಂತೂ ನಿಸ್ಸೀಮರಾಗಿದ್ದಾರೆ. ಅನಾಥರ ಏಳಿಗೆಗಾಗಿ ಅವರ ಪಕ್ಷ ಹಿಡಿದು ವಾದಿಸುವುದಿಲ್ಲ. ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸುವುದಿಲ್ಲ.


ಅದೂ ಅಲ್ಲದೆ, ಆ ಜನರು: “ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ಗ್ರಹಿಸಿ, ನನಗೆ ಅಭಿಮುಖರಾಗಿ ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಅವರ ಹೃದಯವನ್ನು ಕೊಬ್ಬಿಸು, ಕಿವಿಗಳನ್ನು ಮಂದವಾಗಿಸು, ಕಣ್ಣುಗಳನ್ನು ಮಬ್ಬಾಗಿಸು,” ಎಂದು ನನಗೆ ಹೇಳಿದರು.


ದೋಷ ಹೊರಸೂಸುತ್ತಿದೆ ಕೊಬ್ಬಿನಾ ಕಣ್ಗಳಿಂದ I ದುಷ್ಕಲ್ಪನೆಗಳು ತುಳುಕುತಿವೆ ಹೃನ್ಮನಗಳಿಂದ II


“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


ದೈವಕೋಪವೆದ್ದಿತು ಅವರಿಗೆ ವಿರುದ್ಧ I ಮಾಡಿತವರಲಿ ಕೊಬ್ಬಿದವರ ವಧ I ನೆಲಕುರುಳಿತು ಇಸ್ರಯೇಲ ಸಿರಿಜನ II


ನೀವೆಲ್ಲರೂ ಮತ್ತೆ ಬನ್ನಿ ವಾದಕ್ಕೆ ನಿಮ್ಮಲ್ಲಿ ಜ್ಞಾನಿಯೊಬ್ಬನನ್ನೂ ನಾ ಕಾಣೆ.


ಗಟ್ಟಿಮುಟ್ಟಾದ ಗುರಾಣಿಯನ್ನು ಹಿಡಿದುಕೊಂಡೇ ಆತನ ಮೇಲೆ ಬೀಳಲು ತಲೆ ನಿಮಿರಿ ಓಡಿದನಲ್ಲವೆ?


ಕೊಬ್ಬಿನಂತೆ ಆ ಜನರ ಹೃದಯ ಮಂದ I ನಿನ್ನ ಧರ್ಮಶಾಸ್ತ್ರವೇ ನನಗಾನಂದ II


ಆ ಜನರಿಗೆ ನೋವುಕಾವೆಂಬುದಿಲ್ಲ I ಅವರ ದೇಹ ಸಬಲವಾಗಿದೆಯಲ್ಲ! II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು