Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 16:11 - ಕನ್ನಡ ಸತ್ಯವೇದವು C.L. Bible (BSI)

11 ದೇವರು ನನ್ನನ್ನೊಪ್ಪಿಸಿಬಿಟ್ಟಿದ್ದಾನೆ ತುಂಟರಿಗೆ ನನ್ನನ್ನು ಎಸೆದುಬಿಟ್ಟಿದ್ದಾನೆ ದುಷ್ಟರ ಕೈಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇವರು ನನ್ನನ್ನು ಅಪರಿಶುದ್ಧರಿಗೆ ಒಪ್ಪಿಸಿ, ದುಷ್ಟರ ಕೈಗೆ ಒಪ್ಪಿಸಿಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೇವರು ನನ್ನನ್ನು ತುಂಟರಿಗೆ ಒಪ್ಪಿಸಿ ಕೆಟ್ಟವರ ಕೈಗೆ ಎಸೆದುಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರು ನನ್ನನ್ನು ದುಷ್ಟರಿಗೆ ಕೊಟ್ಟುಬಿಟ್ಟಿದ್ದಾನೆ. ನನಗೆ ಕೇಡುಮಾಡಲು ಕೆಡುಕರಿಗೆ ಬಿಟ್ಟುಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರು ನನ್ನನ್ನು ದುಷ್ಟರ ಕೈಗೆ ಒಪ್ಪಿಸಿಬಿಟ್ಟಿದ್ದಾರೆ; ಹೌದು, ದುಷ್ಟರ ಕೈಗೆ ನನ್ನನ್ನು ಎಸೆದುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 16:11
17 ತಿಳಿವುಗಳ ಹೋಲಿಕೆ  

ವಿರೋಧಿಗಳ ವಶಕ್ಕೆ ಎನ್ನನು ನೀ ಬಿಟ್ಟುಬಿಡಲಿಲ್ಲ I ನಿರಾತಂಕದೆಡೆಯಲಿ ನನ್ನ ನಿಲ್ಲಿಸಿದೆಯಲ್ಲಾ II


ತಳ್ಳಬೇಡೆನ್ನನು ವೈರಿಗಳ ವಶಕ್ಕೆ I ಸುಳ್ಳುಸಾಕ್ಷಿಗಳು, ಕ್ರೂರಿಗಳವರೆನಗೆ II


ನನಗೆ ತಿಳಿಸಲಾದ ಗಹನ ಸತ್ಯಗಳಿಂದ ನಾನು ಉಬ್ಬಿಹೋಗದ ಹಾಗೆ ನನ್ನ ದೇಹದಲ್ಲಿ ಶೂಲದಂತೆ ನಾಟಿರುವ ಬೇನೆಯೊಂದನ್ನು ನನಗೆ ಕೊಡಲಾಯಿತು. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.


ಏಕೆಂದರೆ, ಸರ್ವರೂ ತಮ್ಮ ಕರುಣೆಯನ್ನು ಸವಿಯುವಂತೆ ದೇವರು ಎಲ್ಲರನ್ನು ಅವಿಧೇಯತೆ ಎಂಬ ಬಂಧನಕ್ಕೆ ಒಳಪಡಿಸಿದ್ದಾರೆ.


ಕಡೆಗೆ ಪಿಲಾತನು ಯೇಸುವನ್ನು ಶಿಲುಬೆಗೇರಿಸುವುದಕ್ಕಾಗಿ ಅವರಿಗೆ ಒಪ್ಪಿಸಿಬಿಟ್ಟನು. ಅವರು ಯೇಸುವನ್ನು ತಮ್ಮ ವಶಕ್ಕೆ ತೆಗೆದುಕೊಂಡರು.


ಕೇಡನು ಹಡೆಯಲು ದುರುಳನು ಪಡುವ ಬೇನೆಯನು ನೋಡು I ಹಾನಿಯ ಹಡೆವನೆಂದೆಣಿಸಿ ಶೂನ್ಯವ ಹೆರುವುದ ನೋಡು II


ಸೈತಾನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ಹೊರಟುಬಂದ. ಯೋಬನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಕೆಟ್ಟಕುರುಗಳು ಹುಟ್ಟುವಂತೆ ಮಾಡಿ ಆತನನ್ನು ಬಾಧಿಸಿದ.


ಸರ್ವೇಶ್ವರ ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ದಿನ ಖಚಿತವಾಯಿತು.


ದೇಶವು ದುರುಳರ ಕೈವಶವಾಗಿದ್ದರೂ ನ್ಯಾಯಾಧೀಶರ ಮುಖಕ್ಕೆ ಮುಸುಕುಹಾಕುತ್ತಾನೆ. ಇದನ್ನು ಮಾಡುವವರು ದೇವರಲ್ಲದೆ ಮತ್ತೆ ಯಾರು?


ದುರುಳರ ಯೋಜನೆಯನು ನೀನು ಪುರಸ್ಕರಿಸಬಹುದೆ? ನಿನ್ನ ಕೈಕೃತಿಯಾದ ನನ್ನನು ತಿರಸ್ಕರಿಸಿ ಬಾಧಿಸುವುದು ಸರಿಯೆ?


ಜನರು ಬಾಯಿಕಿಸಿದು ನನ್ನನು ಅಣಕಿಸುತ್ತಾರೆ ಛೀಮಾರಿ ಹಾಕಿ ನನ್ನ ದವಡೆಗೆ ಬಡಿದಿದ್ದಾರೆ ನನಗೆ ವಿರುದ್ಧವಾಗಿ ಗುಂಪುಕಟ್ಟಿದ್ದಾರೆ.


ನೆಮ್ಮದಿಯಾಗಿದ್ದ ನನ್ನನು ಒಡೆದು ಬಡಿದುಹಾಕಿದ್ದಾನೆ ಕುತ್ತಿಗೆ ಹಿಸುಕಿ ನನ್ನನು ತುಂಡಾಗಿಸಿದ್ದಾನೆ. ಬಾಣಬಿಡಲು ನನ್ನನು ಗುರಿಹಲಗೆಯಾಗಿಸಿಕೊಂಡಿದ್ದಾನೆ.


ನನಗೆ ಅನ್ಯಾಯವಾಗಿರುವುದು ದೇವರಿಂದಲೇ ನನ್ನ ಸುತ್ತಲು ಬಲೆಯೊಡ್ಡಿರುವವನು ಆತನೇ! ನಾನು ಹೇಳುವ ಈ ಮಾತು ತಿಳಿದಿರಲಿ ನಿಮಗೆ:


ದೇವರಂತೆ ನೀವೂ ನನ್ನನು ದಂಡಿಸುವುದೇಕೆ? ನನ್ನನ್ನು ಛಿನ್ನಪನ್ನವಾಗಿಸಿದ್ದೀರಿ, ಇದು ಸಾಲದೆ ನಿಮಗೆ?


“ನನಗೆ ನ್ಯಾಯ ದೊರಕಿಸದ ಜೀವಂತ ದೇವರಾಣೆ, ನನ್ನ ಮನಸ್ಸನು ಕಹಿಯಾಗಿಸಿದ ಸರ್ವಶಕ್ತನಾಣೆ.


ಏನು, ನನ್ನ ನಿರ್ಣಯವನ್ನು ನೀನು ಖಂಡಿಸುತ್ತೀಯೋ? ನೀನು ನಿರ್ದೋಷಿಯೆನಿಸಿಕೊಳ್ಳಲು ನನ್ನನ್ನು ದೋಷಿಯನ್ನಾಗಿಸುತ್ತೀಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು