Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 16:12 - ಕನ್ನಡ ಸತ್ಯವೇದವು C.L. Bible (BSI)

12 ನೆಮ್ಮದಿಯಾಗಿದ್ದ ನನ್ನನು ಒಡೆದು ಬಡಿದುಹಾಕಿದ್ದಾನೆ ಕುತ್ತಿಗೆ ಹಿಸುಕಿ ನನ್ನನು ತುಂಡಾಗಿಸಿದ್ದಾನೆ. ಬಾಣಬಿಡಲು ನನ್ನನು ಗುರಿಹಲಗೆಯಾಗಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ನೆಮ್ಮದಿಯಿಂದಿದ್ದಾಗ ಆತನು ನನ್ನನ್ನು ಒಡೆದು ಹಾಕಿದನು; ಕತ್ತುಹಿಡಿದು ನನ್ನನ್ನು ಚೂರು ಚೂರು ಮಾಡಿದನು. ಬಾಣ ಪ್ರಯೋಗಿಸಲು ನನ್ನನ್ನು ಗುರಿಮಾಡಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನು ನೆಮ್ಮದಿಯಿಂದಿದ್ದಾಗ ಆತನು ನನ್ನನ್ನು ಒಡೆದುಹಾಕಿದನು; ಕತ್ತು ಹಿಡಿದು ನನ್ನನ್ನು ಚೂರು ಚೂರು ಮಾಡಿದನು. ನನ್ನನ್ನು ಗುರಿಮಾಡಿಕೊಂಡಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ಸುಖದಿಂದಿದ್ದಾಗ ದೇವರು ನನ್ನನ್ನು ಜಜ್ಜಿಹಾಕಿದನು; ನನ್ನ ಕತ್ತು ಹಿಡಿದು ನನ್ನನ್ನು ಚೂರುಚೂರು ಮಾಡಿದನು! ದೇವರು ನನ್ನನ್ನು ತನ್ನ ಗುರಿ ಅಭ್ಯಾಸಕ್ಕಾಗಿ ಉಪಯೋಗಿಸುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ನೆಮ್ಮದಿಯಿಂದ ಇದ್ದಾಗ ದೇವರು ನನ್ನನ್ನು ಚದರಿಸಿದ್ದಾರೆ; ನಾನು ಮಡಕೆ ಒಡೆದುಬಿದ್ದಂತೆ ಇದ್ದೇನೆ. ನನ್ನನ್ನು ತಮಗೆ ಗುರಿ ಹಲಗೆಯಾಗಿ ನಿಲ್ಲಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 16:12
19 ತಿಳಿವುಗಳ ಹೋಲಿಕೆ  

ನರಮಾನವರ ಮೇಲೆ ಬೆಂಗಾವಲಿರುವವನೇ, ಭಾರವಾಗಿರುವೆನು ನನಗೆ ನಾನೇ. ನಾನು ಪಾಪಮಾಡಿದ್ದಾದರೂ ನಿನಗೇನು ಮಾಡಿದೆ? ನನ್ನನ್ನೇಕೆ ನಿನ್ನ ಹೊಡೆತಕ್ಕೆ ಗುರಿಪಡಿಸಿದೆ?


ಸವೆಸಿರುವನು ನನ್ನ ಮಾಂಸಚರ್ಮಗಳನ್ನು ಮುರಿದಿರುವನು ನನ್ನ ಎಲುಬುಗಳನ್ನು.


ಆದರೂ ನಮ್ಮನ್ನು ತಂದು ನಾಯಿನರಿಗಳ ಪಾಲಾಗಿಸಿರುವೆ I ಕಾರ್ಗತ್ತಲೆಮ್ಮನು ಸುತ್ತುವರಿಯುವಂತೆ ಮಾಡಿರುವೆ II


ಅವರು ನನ್ನ ಪ್ರಾಣರಕ್ಷಣೆಗಾಗಿ ತಮ್ಮ ಪ್ರಾಣಗಳನ್ನೇ ಅಪಾಯಕ್ಕೆ ಈಡಾಗಿಸಿದವರು. ಅದಕ್ಕಾಗಿ ನಾನು ಅವರಿಗೆ ಚಿರಋಣಿ. ನಾನು ಮಾತ್ರವಲ್ಲ, ಯೆಹೂದ್ಯೇತರ ಸಭೆಗಳ ಎಲ್ಲರೂ ಅವರು ಮಾಡಿದ ಉಪಕಾರಕ್ಕೆ ಚಿರಋಣಿಗಳಾಗಿದ್ದಾರೆ.


ಅಷ್ಟೇ ಅಲ್ಲದೆ, ಆ ಕಲ್ಲಿನ ಮೇಲೆ ಬೀಳುವವನು ಛಿದ್ರಛಿದ್ರನಾಗುವನು. ಯಾವನ ಮೇಲೆ ಆ ಕಲ್ಲು ಬೀಳುವುದೋ ಅವನು ಜಜ್ಜಿಹೋಗುವನು’.”


ಈಜಿಪ್ಟೇ, ಇಸ್ರಯೇಲರು ನಿನ್ನ ಮೇಲೆ ಕೈಯಿಡಲು, ನೀನು ಅವರನ್ನು ಮುರಿದು ಅವರೆಲ್ಲರ ಹೆಗಲನ್ನು ಚುಚ್ಚಿದೆ; ನಿನ್ನ ಮೇಲೆ ಊರಿಕೊಳ್ಳಲು, ನೀನು ಒಡೆದು ಅವರೆಲ್ಲರ ನಡುವಿಗೆ ನಡುಕವನ್ನು ಉಂಟುಮಾಡಿದೆ.


ಆಗ ಬೆಳಗುತ್ತಿತ್ತು ಆತನ ದೀಪ ತಲೆಯ ಮೇಲೆ ಇರುಳಲ್ಲೂ ಸಂಚರಿಸುತ್ತಿದ್ದೆ ಆತನ ಬೆಳಕಿನಲೇ.


ಗಟ್ಟಿಮುಟ್ಟಾದ ಗುರಾಣಿಯನ್ನು ಹಿಡಿದುಕೊಂಡೇ ಆತನ ಮೇಲೆ ಬೀಳಲು ತಲೆ ನಿಮಿರಿ ಓಡಿದನಲ್ಲವೆ?


ನನ್ನನ್ನು ಬಿರುಗಾಳಿಯಿಂದ ಬಡಿಯುತ್ತಾನೆ ಕಾರಣವಿಲ್ಲದೆ ಗಾಯದ ಮೇಲೆ ಗಾಯ ಮಾಡುತ್ತಾನೆ.


ನಾನೇನು ಕಡಲೋ? ಕಡಲಿನ ಘಟಸರ್ಪವೋ? ನೀವು ನನ್ನ ಮೇಲೆ ಕಾವಲಿಡುವುದು ಸರಿಯೋ?


ಸಿಂಹಗರ್ಜನೆ, ಭೀಕರ ಸಿಂಹದಾರ್ಭಟಗಳು ಅಡಗುವವು ಯುವಸಿಂಹದ ಕೋರೆಗಳು ಮುರಿದುಹೋಗುವವು.


ನನಗಿಲ್ಲ ಶಾಂತಿ, ವಿಶ್ರಾಂತಿ, ಉಪಶಮನ ನನಗಿರುವುದೆಂದರೆ ನಿರಂತರ ಯಾತನ.”


ದೇವರು ನನ್ನನ್ನೊಪ್ಪಿಸಿಬಿಟ್ಟಿದ್ದಾನೆ ತುಂಟರಿಗೆ ನನ್ನನ್ನು ಎಸೆದುಬಿಟ್ಟಿದ್ದಾನೆ ದುಷ್ಟರ ಕೈಗೆ.


ನನ್ನ ಮನದೊಳು ಸರ್ವಶಕ್ತನ ಬಾಣಗಳು ನಾಟಿವೆ ನನ್ನ ಅಂತರಂಗದೊಳು ಅವುಗಳ ವಿಷ ಹೀರಲಾಗುತ್ತಿದೆ ದೇವರಿಂದ ಬಂದ ಆತಂಕಗಳು ನನ್ನನು ಸುತ್ತುವರೆದಿವೆ.


ದೇವರೇ ನನ್ನ ಶಕ್ತಿಯನು ಕುಂದಿಸಿಹನು ಸರ್ವಶಕ್ತ ನನ್ನನು ಆತಂಕಗೊಳಿಸಿಹನು.


ಹೌದು ದಿನವಿಡೀ, ಪದೇ ಪದೇ ಕೈಮಾಡುತ್ತಾ ಬಂದಿಹನು ನನ್ನ ಮೇಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು