Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 16:13 - ಕನ್ನಡ ಸತ್ಯವೇದವು C.L. Bible (BSI)

13 ಮುತ್ತಿಕೊಂಡಿವೆ ನನ್ನನು ಆತನ ಬಾಣಗಳು ನಿರ್ದಯೆಯಿಂದ ಅಂತರಂಗವನ್ನು ಇರಿಯುತ್ತಿಹನು ನೆಲದ ಮೇಲೆ ನನ್ನ ಪಿತ್ತವನು ಸುರಿಸುತ್ತಿಹನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನ ಬಾಣಗಳು ನನ್ನನ್ನು ಮುತ್ತಿಕೊಂಡಿವೆ. ಆತನು ಕರುಣೆಯಿಲ್ಲದೆ ನನ್ನ ಅಂತರಂಗವನ್ನು ಇರಿದು, ಭೂಮಿಯ ಮೇಲೆ ನನ್ನ ಪಿತ್ತವನ್ನು ಸುರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನ ಬಾಣಗಳು ನನ್ನನ್ನು ಮುತ್ತಿಕೊಂಡಿವೆ. ಆತನು ಕರುಣವಿಲ್ಲದೆ ನನ್ನ ಅಂತರಂಗಗಳನ್ನು ಇರಿದು ಭೂವಿುಯ ಮೇಲೆ ನನ್ನ ಪಿತ್ತವನ್ನು ಸುರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆತನ ಬಿಲ್ಲುಗಾರರು ನನ್ನ ಸುತ್ತಲೆಲ್ಲಾ ಇದ್ದಾರೆ. ಆತನು ನಿಷ್ಕರುಣೆಯಿಂದ ನನ್ನ ಅಂತರಂಗಗಳಿಗೆ ಬಾಣವನ್ನು ಎಸೆಯುತ್ತಾನೆ; ನೆಲದ ಮೇಲೆ ನನ್ನ ಪಿತ್ತವನ್ನು ಸುರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇವರ ಬಾಣಗಳು ನನ್ನನ್ನು ಸುತ್ತುವರಿದಿವೆ; ನಾನು ಕರುಣೆಯಿಲ್ಲದೆ ನೆಲದ ಮೇಲೆ ಪಿತ್ತವನ್ನು ಸುರಿದು ಬಿದ್ದವನಂತೆ ಇದ್ದೇನೆ. ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 16:13
16 ತಿಳಿವುಗಳ ಹೋಲಿಕೆ  

ಆ ಬಾಣವನು ಕೀಳಲು ಅದು ಹೊರಬಂತು ಅವನ ಬೆನ್ನಿನಿಂದ ಅದರ ಮಿಂಚುಮೊನೆ ಆಚೆಬಂತು ಅವನ ಪಿತ್ತಕೋಶದಿಂದ ಅವನನು ಆವರಿಸಿಕೊಂಡಿತು ಭಯಭ್ರಾಂತ.


ನನ್ನ ಮನದೊಳು ಸರ್ವಶಕ್ತನ ಬಾಣಗಳು ನಾಟಿವೆ ನನ್ನ ಅಂತರಂಗದೊಳು ಅವುಗಳ ವಿಷ ಹೀರಲಾಗುತ್ತಿದೆ ದೇವರಿಂದ ಬಂದ ಆತಂಕಗಳು ನನ್ನನು ಸುತ್ತುವರೆದಿವೆ.


ಕಂಬನಿಗರೆದು ಇಂಗಿಹೋಗಿದೆ ಕಣ್ಣು ಕುದಿಯುತ್ತಿದೆ ನನ್ನೊಳಗೆ ಕರುಳು ! ನನ್ನ ಜನತೆಯೆಂಬ ಯುವತಿ ಹಾಳಾಗಿ ಮಕ್ಕಳು ಹಾದಿಬೀದಿಗಳಲ್ಲಿ ಮೂರ್ಛೆಹೋಗಿ ನನ್ನ ಕರುಳು ಕರಗಿಹೋಗಿದೆ ನೀರಾಗಿ.


ಪುರಾತನ ಕಾಲದ ಜನರನ್ನೂ ಸಹ ದೇವರು ದಂಡಿಸದೆ ಬಿಡಲಿಲ್ಲ. ನೀತಿಮಾರ್ಗವನ್ನು ಸಾರಿದ ನೋವನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಕಾಪಾಡಿ, ದುರ್ಜನರಿಂದ ಕೂಡಿದ್ದ ಜಗತ್ತಿನ ಮೇಲೆ ಜಲಪ್ರಳಯವನ್ನು ಬರಮಾಡಿದರು.


ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು?


“ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷಮಿಸೆನು.


ತನ್ನ ಬತ್ತಳಿಕೆಯ ಅಂಬುಗಳಿಂದ ಇರಿದಿದ್ದಾನೆ ನನ್ನ ಅಂತರಂಗವನ್ನು.


ಕಣ್ಣಾರೆ ಆತನನ್ನು ಕಾಣುವೆನು ಮತ್ತೊಬ್ಬನಾಗಲ್ಲ, ನಾನಾಗೇ ನೋಡುವೆನು. ಹಂಬಲಿಕೆಯಿಂದ ಕುಂದಿದೆ ನನ್ನ ಅಂತರಂಗವು.


ಆಗ ನಾನು ಸಾಂತ್ವನ ಪಡೆಯುತ್ತಿದ್ದೆ ಮಿತಿಯಿಲ್ಲದ ಯಾತನೆಯಲ್ಲೂ ಆದರ ಹೊಂದುತ್ತಿದ್ದೆ. ಪರಮಪಾವನನ ಮಾತನು ಬಿಡದೆ ಅನುಸರಿಸಿದೆನಲ್ಲವೆ?


ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.


ಬಿಲ್ಲುಗಾರರೆಸಗಿದರು ಅವನ ಮೇಲೆ ಆಕ್ರಮಣ ಸುತ್ತುವರೆದರವನನು ಎಸೆದು ಬಿರುಸುಬಾಣ.


ಮುನ್ನುಗ್ಗಿ ಬಂದಿದೆ ಆತನ ಸೇನೆ ಒಟ್ಟಿಗೆ ದಿಬ್ಬಹಾಕಿಕೊಂಡಿದೆ ಅದು ನನ್ನೆದುರಿಗೆ ನನ್ನ ಗುಡಾರದ ಎಲ್ಲಾ ಕಡೆಗೆ ದಂಡು ಇಳಿದಿದೆ.


ಲೆಕ್ಕವಿದೆಯೇ ಆತನ ಸೇನೆಗಳಿಗೆ? ಆತನ ತೇಜಸ್ಸು ಮೂಡದಿರುವುದು ಯಾರಿಗೆ?


ಬಿಲ್ಲುಹಿಡಿದು ಬಂದ ಆತ ವೈರಿಯಂತೆ ಬಲಗೈಯೆತ್ತಿ ನಿಂತ ವಿರೋಧಿಯಂತೆ, ಸಂಹರಿಸಿಬಿಟ್ಟ ಸುಂದರ ಪ್ರಜೆಯೆಲ್ಲರನ್ನು ರೋಷಾಗ್ನಿ ಸುರಿಸಿ ಭಸ್ಮಮಾಡಿದ ಸಿಯೋನ್ ಗುಡಾರವನ್ನು.


ಆತ ನನಗೆ ದಾರಿ ತಪ್ಪಿಸಿರುವನು ತುಂಡರಿಸಿ ದಿಕ್ಕಿಲ್ಲದವನಂತೆ ಮಾಡಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು