Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 16:16 - ಕನ್ನಡ ಸತ್ಯವೇದವು C.L. Bible (BSI)

16 ಕಣ್ಣೀರು ಸುರಿಸಿ ನನ್ನ ಮುಖ ಕೆಂಪೇರಿದೆ ನನ್ನ ಕಣ್ಣುಗಳಿಗೆ ಕಾರಿರುಳು ಕವಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕಣ್ಣೀರು ಸುರಿಯುವುದರಿಂದ ನನ್ನ ಮುಖವು ಕೆಂಪಾಗಿ ಹೋಗಿದೆ. ರೆಪ್ಪೆಯ ಮೇಲೆ ಮರಣಾಂಧಕಾರವು ಕವಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕಣ್ಣೀರು ಸುರಿಯುವದರಿಂದ ನನ್ನ ಮುಖವು ಕೆಂಪಾಗಿಹೋಗಿದೆ. ರೆಪ್ಪೆಯ ಮೇಲೆ ಮರಣಾಂಧಕಾರವು ಕವಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅತ್ತತ್ತು ನನ್ನ ಮುಖವು ಕೆಂಪಾಗಿದೆ, ನನ್ನ ಕಣ್ಣುಗಳ ಸುತ್ತಲೂ ಸುಕ್ಕುಗಟ್ಟಿ ಕಡುಕಪ್ಪಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನನ್ನ ಮುಖವು ಅಳುವುದರಿಂದ ಕೆಂಪಾಯಿತು; ನನ್ನ ರೆಪ್ಪೆಗಳ ಮೇಲೆ ಮರಣದ ಅಂಧಕಾರವು ಕವಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 16:16
14 ತಿಳಿವುಗಳ ಹೋಲಿಕೆ  

ಅಲ್ಲಿ ಅತೀವ ದುಃಖದಿಂದ ಚಿಂತಾಕ್ರಾಂತರಾಗಿ, “ನನ್ನ ಮನೋವೇದನೆ ಪ್ರಾಣಹಿಂಡುವಷ್ಟು ತೀವ್ರವಾಗಿದೆ; ನೀವು ಇಲ್ಲೇ ಇದ್ದು ಎಚ್ಚರವಾಗಿರಿ,” ಎಂದರು.


“ಗೋಳಾಡುತ್ತಿರುವೆನು ಈ ವಿಪತ್ತುಗಳಿಂದ; ಸಂತೈಸಿ ಸುಧಾರಿಸುವವನು ಬಲುದೂರವಿರುವುದರಿಂದ ಹರಿಯುತ್ತಿದೆ ಕಂಬನಿ ಧಾರೆಧಾರೆಯಾಗಿ ಕಣ್ಗಳಿಂದ; ವೈರಿಗಳು ಗೆದ್ದು, ನನ್ನ ಕುವರರು ಬಿದ್ದುಹೋಗಿರುವುದರಿಂದ.


ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ರೂಪಕ್ಕಿಂತ ವಿಕಾರಗೊಂಡಿದೆ ನಿಜ; ಆದರೆ ಹಲವರು ನೋಡಿ ಆದರು ಚಕಿತ.


ಬೂದಿಯೇ ನನಗೆ ಆಹಾರವಾಯಿತು I ಪಾನದಲಿ ಕಣ್ಣೀರು ಮಿಶ್ರವಾಯಿತು II


ಕಾಯ್ದು ಕಾಯ್ದು ಕಣ್ಣು ಗುಳಿಬಿದ್ದಿದೆ ದೇವಾ, ನಿನಗಾಗಿ I ಗಂಟಲು ಒಣಗಿದೆ, ಜೀವ ಸೊರಗಿದೆ, ನಿನ್ನ ಕೂಗಿ ಕೂಗಿ II


ಪಾಪ ನಿವೇದನೆ ಮಾಡದೆ ನಾ ಮೌನದಿಂದಿರಲು I ದಿನವೆಲ್ಲ ನರಳಿ ಸವೆದುಹೋದವು ನನ್ನೆಲುಬುಗಳು II


ಸಂಕಟದಲಿ ನಾ ಸಿಲುಕಿಕೊಂಡಿರುವೆ I ಕಣ್ಣುಗುಡ್ಡೆಗಳಿದೋ ಸೇದಿಹೋಗಿವೆ I ದೇಹಾತ್ಮಗಳೆರಡು ಕುಗ್ಗಿಹೋಗಿವೆ II


ನನ್ನ ಕಣ್ಣು ದುಃಖದಿಂದ ಮೊಬ್ಬಾಗಿವೆ ಅಂಗಗಳೆಲ್ಲ ನೆರಳಂತೆ ನಿಸ್ಸಾರವಾಗಿವೆ.


ಸುತ್ತುಕೊಂಡಿದ್ದವೆನ್ನನು ಮೃತ್ಯುಪಾಶಗಳು I ಬಿಗಿಹಿಡಿದಿದ್ದವು ಪಾತಾಳ ವೇದನೆಗಳು I ಬಂದೊದಗಿದ್ದವೆನಗೆ ಕಷ್ಟಸಂಕಟಗಳು II


ಗೆಳೆಯರು ನನ್ನನ್ನು ಹೀಗಳೆಯುತ್ತಿರುವರು ನಾನೋ ಸುರಿಸುತ್ತಿರುವೆ ದೇವರ ಮುಂದೆ ಕಣ್ಣೀರು.


ಅಂಥವರಿಗೆ ಕಾರ್ಗತ್ತಲೇ ಬೆಳಗಿನ ಜಾವ ಕಾರ್ಗತ್ತಲಿನ ಅಪಾಯಗಳೇ ಅವರಿಗೆ ಪರಿಚಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು