Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 16:4 - ಕನ್ನಡ ಸತ್ಯವೇದವು C.L. Bible (BSI)

4 ನನ್ನ ಸ್ಥಿತಿಯಲ್ಲಿ ನೀವಿದ್ದಿದ್ದರೆ ನಾನೂ ಮಾತಾಡಬಹುದಿತ್ತು ನಿಮ್ಮಂತೆ. ನಿಮಗೆ ವಿರುದ್ಧ ನಾನೂ ಮಾತೂ ಬೆಳೆಸಬಹುದಿತ್ತು ನಿಮ್ಮ ವಿಷಯದಲ್ಲಿ ನಾನೂ ತಲೆಯಾಡಿಸಬಹುದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನೂ ನಿಮ್ಮ ಹಾಗೆ ಮಾತನಾಡಬಲ್ಲೆನು; ನಾನು ನಿಮ್ಮಂತೆ ಇದ್ದಿದ್ದರೆ, ನಾನು ನಿಮ್ಮ ವಿರುದ್ಧವಾಗಿ ಮಾತುಗಳನ್ನು ಹೆಣೆದು ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನೂ ನಿಮ್ಮ ಹಾಗೆ ಮಾತಾಡಬಲ್ಲೆನು; ನೀವು ನನ್ನ ಸ್ಥಿತಿಯಲ್ಲಿ ಇದ್ದಿದ್ದರೆ ನಾನು ನಿಮಗೆ ವಿರುದ್ಧವಾಗಿ ಮಾತುಗಳನ್ನು ಹೊಸೆದು ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿಮಗೆ ನನ್ನ ಸ್ಥಿತಿಯು ಬಂದಿದ್ದರೆ ನೀವು ಹೇಳಿದ್ದನ್ನೇ ನಾನು ಹೇಳಬಹುದಾಗಿತ್ತು. ನಿಮಗೆ ವಿರುದ್ಧವಾಗಿ ಜ್ಞಾನದ ಮಾತುಗಳನ್ನು ಹೇಳಿ ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀವು ನನ್ನ ಸ್ಥಿತಿಯಲ್ಲಿ ಇದ್ದಿದ್ದರೆ, ನಾನು ಸಹ ನಿಮ್ಮ ಹಾಗೆ ಮಾತಾಡುತ್ತಿದ್ದೆ; ನಾನು ನಿಮ್ಮ ವಿರುದ್ಧ ಪದಪ್ರಯೋಗಿಸಿ ಮಾತಾಡಬಹುದಾಗಿತ್ತು; ಹೌದು, ನಿಮ್ಮ ವಿಷಯದಲ್ಲಿ ಗೇಲಿ ಮಾಡುತ್ತಾ, ನಾನು ನನ್ನ ತಲೆಯಾಡಿಸಬಹುದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 16:4
21 ತಿಳಿವುಗಳ ಹೋಲಿಕೆ  

ಗುರಿಯಾಗಿರುವೆನು ನಾ ಜನರ ಅಪಹಾಸ್ಯಕ್ಕೆ I ನೋಡುವವರು ತಲೆಯಾಡಿಸಿ ಮಾಡುವ ನಿಂದೆಗೆ II


ನೋಡುವವರೆಲ್ಲಾ ಎನ್ನನಣಕಿಸುತಿಹರು I ತುಟಿಯೋರೆ ಮಾಡಿ ತಲೆಯಾಡಿಸುತಿಹರು II


ಹಾದುಹೋಗುವವರೆಲ್ಲ ಕೈ ತಟ್ಟುತ್ತಾರಲ್ಲಾ ನಿನ್ನನ್ನು ನೋಡಿ ಜೆರುಸಲೇಮ್ ನಗರಿಯಾದ ನಿನ್ನನ್ನು ಗುರುತಿಸಿ ! “ಆಹಾ, ನೀನೇನೋ ಸರ್ವಾಂಗ ಸುಂದರಿ, ವಿಶ್ವಾನಂದದಾಯಕಿ !” ಎಂದು ಮೂದಲಿಸುತ್ತಾರಲ್ಲಾ ತಲೆಯಾಡಿಸಿ, ಸಿಳ್ಳುಹಾಕಿ !


ಆದ್ದರಿಂದ ನಾಡನ್ನು ಭಯಾನಕವಾಗಿಸುವರು ಹಾದು ಹೋಗುವವರೆಲ್ಲ ಬೆಬ್ಬೆರಗಾಗಿ ತಲೆದೂಗುವರು, ಸಿಳ್ಳು ಹಾಕಿ ಅದನ್ನು ಪರಿಹಾಸ್ಯ ಮಾಡುವರು.


‘ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು; ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು.


ಒಂದು ಅಂಗಕ್ಕೆ ನೋವಾದರೆ, ಎಲ್ಲಾ ಅಂಗಗಳೂ ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ನಲಿವಾದರೆ, ಮಿಕ್ಕೆಲ್ಲಾ ಅಂಗಗಳು ಅದರೊಡನೆ ಸೇರಿ ನಲಿದಾಡುತ್ತವೆ.


ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ.


“ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ, ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇದೇ.”


“ಇರುವ ನಗರ ನಾನೇ, ನನ್ನ ಹೊರತು ಇನ್ನಾರೂ ಇಲ್ಲ” ಎಂದು ಕೊಚ್ಚಿಕೊಂಡು ಯಾವ ಚಿಂತೆಯೂ ಇಲ್ಲದೆ, ನೆಮ್ಮದಿಯಿಂದ ಇದ್ದ ನಿನೆವೆಯ ಗತಿ ನೋಡಿ, ಎಂಥ ಹಾಳುಬಿದ್ದ ಊರಾಗಿದೆ! ಕಾಡುಮೃಗಗಳ ಬೀಡಾಗಿದೆ! ಹಾದುಹೋಗುವವರೆಲ್ಲ ಸಿಳ್ಳುಹಾಕಿ ಕೈತೋರಿಸಿ ಪರಿಹಾಸ್ಯಮಾಡುವಷ್ಟು ಕೀಳಾಗಿದೆ!


ಅಜ್ಞಾನಿ ಮಾತಿನ ಮಲ್ಲ. ಭವಿಷ್ಯತ್ತನ್ನು ಮಾನವ ತಿಳಿಯನು; ತಾನು ಕಾಲವಾದ ಮೇಲೆ ಏನಾಗುವುದೆಂದು ಅವನು ಯಾರಿಂದ ತಿಳಿಯಬಲ್ಲನು?


ವಾಚಾಳಿಗೆ ಪಾಪ ತಪ್ಪದು; ಮೌನಿಗೆ ಜ್ಞಾನ ಕೆಡದು.


ಅನ್ಯಜನ ನಮ್ಮನಣಕಿಸಿ ತಲೆಯಾಡಿಸುವಂತೆ ಮಾಡಿರುವೆ I ಅನ್ಯಾಯಕ್ಕೆ ಅಡ್ಡಹೆಸರಾಗುವಂತೆ ನಮ್ಮನು ಬಿಟ್ಟಿರುವೆ II


ಎಂದು ಹೇಳುತ್ತಾ ಯೋಬನು ಬಾಯಿತೆರೆಯುತ್ತಾನೆ ವ್ಯರ್ಥವಾಗಿ ತಿಳುವಳಿಕೆಯಿಲ್ಲದೆ ಮಾತಾಡುತ್ತಾನೆ ಬಹಳವಾಗಿ.”


“ಇಷ್ಟೆಲ್ಲ ಮಾತುಗಳಿಗೆ ತಕ್ಕ ಉತ್ತರ ಬೇಡವೆ? ಮಾತಿನಮಲ್ಲನು ನೀತಿವಂತ ಎನಿಸಿಕೊಳ್ಳುವನೆ?


ಸಂಕಟದಲ್ಲಿ ಆಗದಾ ನೆಂಟನಿಗೆ ಸರ್ವಶಕ್ತನಲ್ಲಿ ಭಯಭಕ್ತಿ ಇರುವುದುಂಟೆ?


ನಾನು ನಿಮಗೆ ಬಾಯಿಮಾತಿನಿಂದ ಧೈರ್ಯ ಹೇಳಬಹುದಿತ್ತು ತುಟಿಮಾತುಗಳಿಂದ ಆದರಿಸಿ ಸಾಂತ್ವನ ನೀಡಬಹುದಿತ್ತು.


“ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು, ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು.


ಮೋವಾಬೇ, ನೀನು ಇಸ್ರಯೇಲನ್ನು ಕುರಿತು ಗೇಲಿಮಾಡುತ್ತಿದ್ದೆಯಲ್ಲವೆ? ಕಳ್ಳರ ಗುಂಪಿಗೆ ಸೇರಿ ಅದು ಸಿಕ್ಕಿಕೊಂಡಂತೆ ನಿನಗೆ ಕಾಣುತ್ತಿತ್ತೇ? ಇಸ್ರಯೇಲಿನ ಪ್ರಸ್ತಾಪ ಎತ್ತಿದಾಗಲೆಲ್ಲ ನೀನು ತಲೆಯಾಡಿಸಿ ಹಿಯ್ಯಾಳಿಸುತ್ತಿಯಲ್ಲವೆ?


“ಇತ್ತನಿವನು ಭರವಸೆ, ಪ್ರಭುವೆ ತನ್ನುದ್ಧಾರಕನೆಂದು I ಆತನಿಗಿವನು ಮೆಚ್ಚುಗೆಯಾದರೆ ರಕ್ಷಿಸಲಿ” - ಇಂತೆಂದು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು