Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 16:5 - ಕನ್ನಡ ಸತ್ಯವೇದವು C.L. Bible (BSI)

5 ನಾನು ನಿಮಗೆ ಬಾಯಿಮಾತಿನಿಂದ ಧೈರ್ಯ ಹೇಳಬಹುದಿತ್ತು ತುಟಿಮಾತುಗಳಿಂದ ಆದರಿಸಿ ಸಾಂತ್ವನ ನೀಡಬಹುದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನೂ ಬಾಯಿಮಾತಿಗಾಗಿ ನಿಮ್ಮನ್ನು ಧೈರ್ಯಗೊಳಿಸಿ, ತುಟಿಗಳ ಆದರಣೆಯಿಂದ ನಿಮ್ಮ ದುಃಖವನ್ನು ಶಮನಪಡಿಸಬಹುದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನೂ ಬಾಯಿಂದ ನಿಮ್ಮನ್ನು ಧೈರ್ಯಗೊಳಿಸಿ ತುಟಿಗಳ ಆದರಣೆಯಿಂದ [ನಿಮ್ಮ ದುಃಖವನ್ನು] ಶಮನಪಡಿಸಬಹುದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ನಾನು ನಿಮ್ಮನ್ನು ನನ್ನ ಮಾತುಗಳಿಂದ ಪ್ರೋತ್ಸಾಹಿಸಿ ನಿಮ್ಮಲ್ಲಿ ನಿರೀಕ್ಷೆಯನ್ನು ಹುಟ್ಟಿಸಬಹುದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ, ನಾನು ನನ್ನ ಬಾಯಿಮಾತಿನಿಂದ ನಿಮ್ಮನ್ನು ಪ್ರೋತ್ಸಾಹಿಸುವೆನು; ನನ್ನ ಆದರಣೆಯ ಮಾತುಗಳು ನಿಮಗೆ ಉಪಶಮನ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 16:5
11 ತಿಳಿವುಗಳ ಹೋಲಿಕೆ  

ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.


ಕಬ್ಬಿಣ ಕಬ್ಬಿಣವನ್ನು ಹರಿತ ಮಾಡುವಂತೆ ಮಿತ್ರನು ಮಿತ್ರನ ಬುದ್ಧಿಯನ್ನು ಹರಿತಮಾಡಬಲ್ಲ.


ತೈಲ, ಸುಗಂಧ ದ್ರವ್ಯಗಳು ಮನೋಹರ, ಮಿತ್ರನ ಆದರಣೆ, ಸಲಹೆ ಅತಿ ಮಧುರ.


ಪ್ರಭುವನು ಎದುರುನೋಡುತ್ತಿರು ಮನವೇ I ಧೈರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ II


ನಾನು ಅವರಿಗೆ ಮಾರ್ಗದರ್ಶಕನಾಗಿದ್ದೆ ಸೇನೆಗಳ ಮಧ್ಯೆ ರಾಜನಂತೆ ಮಂಡಿಸಿದ್ದೆ ದುಃಖಿತರನು ಸುಧಾರಕನಂತೆ ಸಂತೈಸುತ್ತಿದ್ದೆ.


ಸಂಕಟದಲ್ಲಿ ಆಗದಾ ನೆಂಟನಿಗೆ ಸರ್ವಶಕ್ತನಲ್ಲಿ ಭಯಭಕ್ತಿ ಇರುವುದುಂಟೆ?


ನನ್ನ ಸ್ಥಿತಿಯಲ್ಲಿ ನೀವಿದ್ದಿದ್ದರೆ ನಾನೂ ಮಾತಾಡಬಹುದಿತ್ತು ನಿಮ್ಮಂತೆ. ನಿಮಗೆ ವಿರುದ್ಧ ನಾನೂ ಮಾತೂ ಬೆಳೆಸಬಹುದಿತ್ತು ನಿಮ್ಮ ವಿಷಯದಲ್ಲಿ ನಾನೂ ತಲೆಯಾಡಿಸಬಹುದಿತ್ತು.


ನಾನು ಮಾತಾಡಿದರೆ ನನ್ನ ನೋವು ನಿವಾರಣೆಯಾಗದು ನಾನು ಸುಮ್ಮನಿದ್ದರೆ ನನ್ನ ಕಷ್ಟ ಪರಿಹಾರವಾಗದು.


ನ್ಯಾಯವಾದ ಮಾತು ಎಷ್ಟೋ ಶಕ್ತಿಯುತ ನಿಮ್ಮ ತರ್ಕವಾದರೋ ನಿರರ್ಥಕ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು