Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 16:8 - ಕನ್ನಡ ಸತ್ಯವೇದವು C.L. Bible (BSI)

8 ನನ್ನ ಮುಖವೆಲ್ಲ ಸುಕ್ಕುಹಿಡಿದಿದೆ ನನ್ನ ಸಣಕಲುತನವೆ ನನಗೆ ವಿರುದ್ಧ ಸಾಕ್ಷಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀನು ನನ್ನನ್ನು ಹಿಡಿದಿರುವುದು ನನಗೆ ಪ್ರತಿಸಾಕ್ಷಿಯಾಗಿದೆ, ನನ್ನ ಬಲಹೀನವು ನನ್ನ ವಿರುದ್ಧವಾಗಿ ನನ್ನ ಮುಖದ ಮುಂದೆ ಸಾಕ್ಷಿಕೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀನು ನನ್ನನ್ನು ಹಿಡಿದಿರುವದು ನನಗೆ ಪ್ರತಿಸಾಕ್ಷಿಯಾಗಿದೆ, ನನ್ನ ಕ್ಷೀಣತ್ವವು ನನಗೆ ವಿರುದ್ಧವಾಗಿ ಎದ್ದು ನನ್ನ ಮುಖದ ಮುಂದೆ ಸಾಕ್ಷಿಕೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ನನ್ನನ್ನು ಮುದುಡಿಹಾಕಿರುವುದು ಎಲ್ಲರಿಗೂ ಕಾಣುತ್ತಿದೆ, ನನ್ನ ದೇಹ ರೋಗಗ್ರಸ್ತವಾಗಿದೆ; ನಾನು ವಿಕಾರವಾಗಿ ಕಾಣುತ್ತಿರುವೆ; ಜನರು ನನ್ನನ್ನು ಅಪರಾಧಿಯೆಂದು ಭಾವಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವು ನನ್ನ ಮುಖವೆಲ್ಲಾ ಸುಕ್ಕುಗಳಿಂದ ತುಂಬಿಸಿದ್ದೀರಿ; ನನ್ನ ಬಿಕ್ಕಟ್ಟೇ ನನಗೆ ವಿರೋಧವಾಗಿ ಎದ್ದು ಸಾಕ್ಷಿ ಕೊಡುತ್ತವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 16:8
10 ತಿಳಿವುಗಳ ಹೋಲಿಕೆ  

ನನಗೆ ವಿರುದ್ಧ ಹೊಸ ಹೊಸ ಸಾಕ್ಷಿಗಳನ್ನು ಬರಮಾಡುವೆ ನನ್ನ ಮೇಲೆ ಹೆಚ್ಚುಹೆಚ್ಚಾಗಿ ಸಿಟ್ಟುಗೊಳ್ಳುವೆ ಅಲೆಅಲೆಯಾಗಿ ಹಗೆಗಳನ್ನು ನನ್ನ ಮೇಲೆ ಧಾಳಿಮಾಡ ಬಿಡುವೆ.


ಕೇವಲ ಎಲುಬೂ ತೊಗಲೂ ಆಗಿಬಿಟ್ಟಿದ್ದೇನೆ ಮೃತ್ಯುವಿನ ದವಡೆಗೆ ಸಿಕ್ಕಿಕೊಂಡಿದ್ದೇನೆ.


ಸಿರಿವಂತಳಾಗಿ ಇಲ್ಲಿಂದ ಹೋದೆ. ಗತಿಹೀನಳನ್ನಾಗಿ ಸರ್ವೇಶ್ವರ ನನ್ನನ್ನು ಹಿಂದಕ್ಕೆ ಕರೆತಂದಿದ್ದಾರೆ. ಹೀಗೆ ಸರ್ವಶಕ್ತ ದೇವರು ನನಗೆ ವಿರೋಧವಾಗಿ ನನ್ನನ್ನು ಬಾಧಿಸಿರುವಾಗ ನೀವು ನನ್ನನ್ನು ನವೊಮಿ ಎಂದು ಕರೆಯುವುದು ಸರಿಯೇ?’ ಎಂದು ಉತ್ತರಕೊಟ್ಟಳು.


ಧರ್ಮಸಭೆ ಕಳಂಕಕಲ್ಮಷವಾಗಲಿ, ಸುಕ್ಕುಬೊಕ್ಕೆಯಾಗಲಿ ಇಲ್ಲದ ಸೌಂದರ್ಯವತಿಯಾಗಿ ತಮಗೆ ಅರ್ಪಿಸಿಕೊಳ್ಳುವಂತೆ ಹೀಗೆ ಮಾಡಿದರು.


ಜಗದ ಕಟ್ಟಕಡೆಯಿಂದ ಕೇಳಿಬರುತಿದೆ, ‘ಸತ್ಯಸ್ವರೂಪನಿಗೆ ಸ್ತೋತ್ರ’ ಎಂಬ ಗೀತೆ. ಆದರೆ ನಶಿಸಿಹೋಗುತ್ತಿರುವೆನು ನಾನು, ಹೌದು, ನಶಿಸಿ ನಾಶವಾಗುತ್ತಿರುವೆನು, ಏನೆಂದು ಹೇಳಲಿ ನನ್ನ ಗತಿಯನು. ಇದೋ, ಬಾಧಿಸುತ್ತಿಹರು ದ್ರೋಹಿಗಳು, ದ್ರೋಹದ ಮೇಲೆ ದ್ರೋಹವೆಸಗುತಿಹರು.


ಆದಕಾರಣ, ಒಡೆಯರಾದ ಸೇನಾಧೀಶ್ವರ ಸರ್ವೇಶ್ವರ ಅಸ್ಸೀರಿಯಾದ ಕೊಬ್ಬಿದ ಯೋಧರಿಗೆ ಕ್ಷಯರೋಗವನ್ನು ಬರಮಾಡುವರು. ಅವರ ದೇಹಕ್ಕೆ ಬೆಂಕಿಯಂತೆ ಉರಿಯುವ ಜ್ವರವನ್ನು ಉಂಟುಮಾಡುವರು.


ಬಡಕಲಾಯಿತೆನ್ನ ದೇಹ ಬರಡಿಲ್ಲದೆ I ನಡುಕ ಹುಟ್ಟಿತು ಕಾಲಿಗೆ ತ್ರಾಣವಿಲ್ಲದೆ II


ಪೂರೈಸಿದನಾತ ಅವರ ಕೋರಿಕೆಯನು I ಕಳುಹಿಸಿದನಾದರೆ ಭೀಕರ ರೋಗವನು II


ನನ್ನ ಕಣ್ಣು ದುಃಖದಿಂದ ಮೊಬ್ಬಾಗಿವೆ ಅಂಗಗಳೆಲ್ಲ ನೆರಳಂತೆ ನಿಸ್ಸಾರವಾಗಿವೆ.


ಅವನ ಮಾಂಸಖಂಡ ಕರಗಿಹೋಗುವುದು ಅವನ ಅಸ್ಥಿಪಂಜರ ಎದ್ದು ಕಾಣುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು