Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 17:10 - ಕನ್ನಡ ಸತ್ಯವೇದವು C.L. Bible (BSI)

10 ನೀವೆಲ್ಲರೂ ಮತ್ತೆ ಬನ್ನಿ ವಾದಕ್ಕೆ ನಿಮ್ಮಲ್ಲಿ ಜ್ಞಾನಿಯೊಬ್ಬನನ್ನೂ ನಾ ಕಾಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ನೀವೆಲ್ಲರೂ ಮತ್ತೆ ವಾದಕ್ಕೆ ಬನ್ನಿರಿ, ನಿಮ್ಮಲ್ಲಿ ಒಬ್ಬ ಜ್ಞಾನಿಯನ್ನಾದರೂ ಕಾಣೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ನೀವೆಲ್ಲರೂ ಮತ್ತೆ ವಿವಾದಕ್ಕೆ ಬನ್ನಿರಿ, ನಿಮ್ಮಲ್ಲಿ ಒಬ್ಬ ಜ್ಞಾನಿಯನ್ನಾದರೂ ಕಾಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಆದರೆ ನೀವೆಲ್ಲರೂ ಬನ್ನಿರಿ, ನನ್ನ ತಪ್ಪನ್ನು ತೋರಿಸಿರಿ. ನಿಮ್ಮಲ್ಲಿ ಒಬ್ಬ ಜ್ಞಾನಿಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಆದರೆ ನೀವೆಲ್ಲರೂ ಬಂದು ಮತ್ತೆ ವಾದ ಮಾಡಲು ಪ್ರಯತ್ನಿಸಿರಿ! ನಿಮ್ಮಲ್ಲಿ ನಾನು ಒಬ್ಬ ಜ್ಞಾನಿಯನ್ನು ಸಹ ಕಂಡುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 17:10
11 ತಿಳಿವುಗಳ ಹೋಲಿಕೆ  

ಸರ್ವೇಶ್ವರಸ್ವಾಮಿ ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನಿಗೆ, “ನಿನ್ನ ಮೇಲೂ ನಿನ್ನ ಗೆಳೆಯರಿಬ್ಬರ ಮೇಲೂ ನನಗೆ ಕೋಪವಿದೆ! ನನ್ನ ದಾಸ ಯೋಬನಂತೆ ನೀವು ನನ್ನ ವಿಷಯವಾಗಿ ಸರಿಯಾದುದನ್ನು ಆಡಲಿಲ್ಲ.


ದಯಮಾಡಿ ಮತ್ತೆ ಆಲೋಚಿಸಿರಿ ಅನ್ಯಾಯವಾಗದಂತೆ ಮರಳಿ ವಿಮರ್ಶಿಸಿರಿ ನನ್ನ ಸತ್ಯತೆ ತಿಳಿಯುವಂತೆ.


ಇದು ನಿಮಗೆ ನಾಚಿಕೆಗೇಡು! ಸಹೋದರರ ವ್ಯಾಜ್ಯವನ್ನು ತೀರ್ಮಾನಿಸಬಲ್ಲ ಜಾಣನು ನಿಮ್ಮಲ್ಲಿ ಒಬ್ಬನೂ ಇಲ್ಲವೇ?


ಹೀಗಿರುವಾಗ ಜ್ಞಾನಿಯೆಲ್ಲಿ? ಶಾಸ್ತ್ರಜ್ಞನೆಲ್ಲಿ? ಜಗತ್ತಿನ ತರ್ಕನಿಪುಣನೆಲ್ಲಿ? ಪ್ರಪಂಚದ ಜ್ಞಾನವನ್ನು ದೇವರು ಹುಚ್ಚುತನವಾಗಿಸಿಲ್ಲವೇ?


ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.


ವಯೋವೃದ್ಧರು ಮಾತ್ರ ಜ್ಞಾನಿಗಳಲ್ಲ ಮುದುಕರು ಮಾತ್ರ ನ್ಯಾಯಬಲ್ಲವರಲ್ಲ.


ಜ್ಞಾನ ಪ್ರವೇಶಿಸದಂತೆ ನೀ ಅವರ ಮನಸ್ಸನು ಮುಚ್ಚಿರುವೆ ಹೀಗೆ ಅವರು ಜಯಶೀಲರಾಗದಂತೆ ತಡೆದಿರುವೆ.


ನಮಗೆ ತಿಳಿಯದಿರುವುದು ನಿನಗೆ ತಿಳಿದಿದೆಯೆ? ನಮಗೆ ಅರ್ಥವಾಗದಿರುವುದು ನಿನಗೆ ಅರ್ಥವಾಗಿದೆಯೆ?


:ಹೌದ್ಹೌದು ನೀವೇ ಮಹಾಜನ, ನಿಮ್ಮೊಡನೆಯೇ ಸಾಯುವುದು ಸುಜ್ಞಾನ!


ಮುಗಿದುಹೋದವು ನನ್ನ ದಿನಗಳು ಭಂಗವಾದವು ನನ್ನ ಗುರಿಧ್ಯೇಯಗಳು.


ನಮ್ಮನ್ನು ಮೃಗಗಳೆಂದು ಎಣಿಸಿರುವೆಯಾ? ನಿನ್ನ ದೃಷ್ಟಿಯಲಿ ನಾವೇನು ಅಷ್ಟು ದಡ್ಡರೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು