Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 17:6 - ಕನ್ನಡ ಸತ್ಯವೇದವು C.L. Bible (BSI)

6 ದೇವರು ನನ್ನನು ಈಡಾಗಿಸಿದ್ದಾನೆ ಅನ್ಯರ ಕಟ್ಟುಗಾದೆಗೆ ನನ್ನ ಮುಖ ಗುರಿಯಾಗಿದೆ ಜನರ ಉಗುಳಾಟಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ನನ್ನನ್ನು ಅನ್ಯದೇಶದವರ ವ್ಯರ್ಥ ಆಪಾದನೆಗಳಿಗೆ ಗುರಿ ಮಾಡಿದ್ದಾನೆ, ಜನರ ಉಗುಳಿಗೆ ನನ್ನ ಮುಖ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ನನ್ನನ್ನು ಅನ್ಯದೇಶದವರ ಕಟ್ಟುಗಾದೆಗೆ ಆಸ್ಪದ ಮಾಡಿದ್ದಾನೆ, ಜನರ ಉಗುಳಾಟಕ್ಕೆ ನನ್ನ ಮುಖವು ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ನನ್ನ ಹೆಸರನ್ನು ಪ್ರತಿಯೊಬ್ಬರಿಗೂ ಕೆಟ್ಟಪದವನ್ನಾಗಿ ಮಾಡಿದ್ದಾನೆ. ಜನರು ನನ್ನ ಮುಖಕ್ಕೆ ಉಗುಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ದೇವರು ನನ್ನನ್ನು ಜನರ ಕಟ್ಟುಗಾದೆಗೆ ಆಸ್ಪದ ಮಾಡಿದ್ದಾರೆ; ನನ್ನನ್ನು ಕಾಣುವವರು ನನ್ನ ಮುಖಕ್ಕೆ ಉಗುಳುವಂತೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 17:6
11 ತಿಳಿವುಗಳ ಹೋಲಿಕೆ  

ಅನ್ಯಜನ ನಮ್ಮನಣಕಿಸಿ ತಲೆಯಾಡಿಸುವಂತೆ ಮಾಡಿರುವೆ I ಅನ್ಯಾಯಕ್ಕೆ ಅಡ್ಡಹೆಸರಾಗುವಂತೆ ನಮ್ಮನು ಬಿಟ್ಟಿರುವೆ II


ಅಂಥವರ ಲಾವಣಿಗೆ ನಾನೀಗ ಗುರಿಯಾದೆ ಅವರ ಕಟ್ಟುಕತೆಗಳಿಗೆ ಅಡ್ಡಹೆಸರಾದೆ.


ಕಿನ್ನರಿ, ವೀಣೆ, ತಬಲ, ಕೊಳಲು, ಮದ್ಯಪಾನ ಇವೇ ಅವರ ದುಂದೌತಣದ ಸೊಬಗು. ಸ್ವಾಮಿಯ ಕಾರ್ಯಗಳನ್ನು ಅವರು ಲಕ್ಷಿಸರು. ಸ್ವಾಮಿಯ ಕೃತಿಗಳನ್ನವರು ಧ್ಯಾನಿಸರು.


ನಾನು ಕೊಟ್ಟ ನಾಡಿನಿಂದ ಇಸ್ರಯೇಲರನ್ನು ತೆಗೆದುಹಾಕುವೆನು; ನನ್ನ ಹೆಸರಿಗಾಗಿ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ಇಸ್ರಯೇಲರು ಎಲ್ಲಾ ಜನಾಂಗಗಳವರ ಲಾವಣಿಗೂ ನಿಂದೆಪರಿಹಾಸ್ಯಕ್ಕೂ ಗುರಿಯಾಗುವರು.


ನನಗೆ ಏನೂ ಹೇಳದೆ ವಂಚಿಸಿ ಏಕೆ ಓಡಿಬಂದೆ? ನನಗೆ ತಿಳಿಸಿದ್ದರೆ ಸಂಗೀತ ಸಂಭ್ರಮದೊಂದಿಗೆ, ತಾಳಮೇಳ ವಾದ್ಯಗಳೊಂದಿಗೆ ನಿನ್ನನ್ನು ಸಾಗಕಳುಹಿಸುತ್ತಿದ್ದೆ.


ಅದಕ್ಕೆ ಸರ್ವೇಶ್ವರ, “ಅವಳ ತಂದೆ ಅವಳ ಮುಖದ ಮೇಲೆ ಉಗುಳಿದ್ದರೆ ಏಳು ದಿವಸ ಅವಳು ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೆ? ಅಂತೆಯೇ ಅವಳು ಏಳು ದಿವಸ ಪಾಳೆಯದಿಂದ ಹೊರಗಿರಲಿ. ಅನಂತರ ಅವಳನ್ನು ನೀನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟರು.


ನೀತಿವಂತನೂ ನಿರ್ದೋಷಿಯೂ ಆದ ನಾನು ದೇವರನ್ನು ಪ್ರಾರ್ಥಿಸಿ ಪ್ರತ್ಯುತ್ತರಕ್ಕಾಗಿ ಕಾದಿರಲು ಗೆಳೆಯರ ಗೇಲಿಪರಿಹಾಸ್ಯಕೆ ಗುರಿಯಾದೆನು.


ಚೇಷ್ಟೆಗಾರರಿದ್ದಾರೆ ನನ್ನ ಸುತ್ತಮುತ್ತ ನನ್ನ ಕಣ್ಮುಂದಿದೆ ಸದಾ ಅವರ ಕೆಣಕಾಟ.


ನನಗೆ ಅಸಹ್ಯಪಟ್ಟು ದೂರಸರಿಯುತ್ತಾರೆ ನನ್ನ ಮೇಲೆ ಉಗುಳುವುದಕ್ಕೂ ಹಿಂಜರಿಯದಿದ್ದಾರೆ.


ಗೋಣಿತಟ್ಟನು ನಾನುಟ್ಟುಕೊಂಡೆನಯ್ಯಾ I ಅಣಕ ಅವಹೇಳನಕೆ ಗುರಿಯಾದೆನಯ್ಯಾ II


ನನ್ನ ಕಣ್ಮುಂದಿದೆ ಈ ಅವಮಾನ ದಿನವೆಲ್ಲ I ಲಜ್ಜೆಯಿಂದ ನಾ ಮುಖ ಮುಚ್ಚಿಕೊಳ್ಳುವಂತಾಗಿದೆಯಲ್ಲಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು