Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:2 - ಕನ್ನಡ ಸತ್ಯವೇದವು C.L. Bible (BSI)

2 “ಯೋಬನೇ, ಇನ್ನೆಷ್ಟರವರೆಗೆ ಮಾತುಗಳಿಗಾಗಿ ಹೊಂಚುಹಾಕುತ್ತಿರುವೆ? ಮೊದಲು ಆಲೋಚಿಸಿನೋಡು, ಆಮೇಲೆ ಬಾ ಮಾತುಕತೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಇನ್ನೆಷ್ಟರವರೆಗೆ ಮಾತುಗಳನ್ನು ಹಿಡಿಯುವುದಕ್ಕೆ ಹೊಂಚು ಹಾಕುತ್ತಿರುವೆ? ಮೊದಲು ನೀನು ಆಲೋಚಿಸು, ಆ ಮೇಲೆ ಮಾತನಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇನ್ನೆಷ್ಟರವರೆಗೆ ಮಾತುಗಳನ್ನು ಹಿಡಿಯುವದಕ್ಕೆ ಉರ್ಲೊಡ್ಡುತ್ತಿರುವಿ? ನೀನು ಆಲೋಚಿಸು, ಆಮೇಲೆ ಮಾತಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಈ ಮಾತುಗಳನ್ನೆಲ್ಲಾ ಯಾವಾಗ ನಿಲ್ಲಿಸುವೆ? ಪ್ರಜ್ಞೆವುಳ್ಳವನಾಗು, ಆಗ ನಾವು ಮಾತಾಡಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಯೋಬನೇ, ಈ ಮಾತುಗಳನ್ನು ನೀನು ಯಾವಾಗ ಕೊನೆಗೊಳಿಸುತ್ತೀ? ವಿವೇಕಿಯಾಗು, ಆಮೇಲೆ ಮಾತನಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:2
12 ತಿಳಿವುಗಳ ಹೋಲಿಕೆ  

ಸಹೋದರರೇ, ಇದನ್ನು ನೆನಪಿನಲ್ಲಿಡಿ; ನಿಮ್ಮಲ್ಲಿ ಪ್ರತಿಯೊಬ್ಬನು ಆಲಿಸುವುದರಲ್ಲಿ ಚುರುಕಾಗಿ, ಮಾತನಾಡುವುದರಲ್ಲಿ ದುಡುಕದೆ, ಸಿಟ್ಟುಗೊಳ್ಳುವುದರಲ್ಲಿ ಸಾವಧಾನವಾಗಿ ಇರಲಿ.


ಕೇಳಿಸಿಕೊಳ್ಳದೆ ಉತ್ತರಕೊಡುವವನು ಹುಚ್ಚ; ನಿಂದೆ ಅವಮಾನಕ್ಕೆ ಅವನು ಯೋಗ್ಯ.


“ಇಂತಿರಲು, ಯೋಬನೇ, ನನ್ನ ಮಾತುಗಳಿಗೆ ಕಿವಿಗೊಡು: ನಾನು ಹೇಳುವುದನ್ನೆಲ್ಲಾ ಗಮನವಿಟ್ಟು ಕೇಳು.


“ಗಮನಕೊಡಿ ನನ್ನ ಮಾತುಗಳಿಗೆ ನಾನು ನಿಮ್ಮಿಂದ ಬಯಸುವ ಉಪಶಮನ ಇದುವೆ:


“ಇಷ್ಟೆಲ್ಲ ಮಾತುಗಳಿಗೆ ತಕ್ಕ ಉತ್ತರ ಬೇಡವೆ? ಮಾತಿನಮಲ್ಲನು ನೀತಿವಂತ ಎನಿಸಿಕೊಳ್ಳುವನೆ?


“ಇನ್ನೆಷ್ಟರವರೆಗೆ ಹೀಗೆ ನುಡಿಯುತ್ತಿರುವೆ? ಬಿರುಗಾಳಿಯಂಥ ಮಾತುಗಳನ್ನಾಡುತ್ತಿರುವೆ?


ದಣಿದವರಿಗೆ ದೊರಕುವುದು ಆ ಕೂಪದಲಿ ವಿಶ್ರಾಂತಿ ಅಣಗುವುದಲ್ಲಿ ದುರುಳರು ಕೊಡುವ ಹಾವಳಿ.


ಆಗ ಶೂಹ್ಯನಾದ ಬಿಲ್ದದನು ಹೀಗೆಂದು ಉತ್ತರಿಸಿದ:


ನಮ್ಮನ್ನು ಮೃಗಗಳೆಂದು ಎಣಿಸಿರುವೆಯಾ? ನಿನ್ನ ದೃಷ್ಟಿಯಲಿ ನಾವೇನು ಅಷ್ಟು ದಡ್ಡರೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು