Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:5 - ಕನ್ನಡ ಸತ್ಯವೇದವು C.L. Bible (BSI)

5 ಹೌದು, ದುರುಳನ ದೀಪ ಆರಿಹೋಗುವುದು ಅವನ ಒಲೆಯು ಉರಿಯದೆ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೇಗಾದರೂ ದುಷ್ಟನ ದೀಪವು ಆರುವುದು, ಅವನ ಒಲೆಯು ಉರಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೇಗಾದರೂ ದುಷ್ಟನ ದೀಪವು ಆರುವದು, ಅವನ ಒಲೆಯು ಉರಿಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಹೌದು, ದುಷ್ಟನ ದೀಪವು ಆರಿಹೋಗುವುದು; ಅವನ ಬೆಂಕಿಯು ಉರಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿಹೋಗುವುದು; ಅವನ ಬಾಳಿನ ಬೆಂಕಿಯ ಜ್ವಾಲೆಯು ಉರಿಯದೆ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:5
12 ತಿಳಿವುಗಳ ಹೋಲಿಕೆ  

ಸಜ್ಜನರ ಬೆಳಕು ಪ್ರಜ್ವಲಿಸುವುದು; ದುರ್ಜನರ ದೀಪವು ಆರಿಹೋಗುವುದು.


ಕೆಟ್ಟವನಿಗೆ ಶುಭಕಾಲ ಬಾರದು, ದುಷ್ಟರ ದೀಪ ಆರಿಹೋಗುವುದು.


ಹೆತ್ತವರನ್ನು ಶಪಿಸುವವನ ದೀಪ ಕಾರಿರುಳಲ್ಲೆ ಆರಿಹೋಗುವುದು ಖಚಿತ.


ಆ ದುರುಳರ ದೀಪ ಆರಿಹೋದದ್ದು ಎಷ್ಟುಸಾರಿ? ಅವರಿಗೆ ವಿಪತ್ತು ಸಂಭವಿಸಿದ್ದು ಎಷ್ಟುಸಾರಿ? ಅವರ ಕೋಪ ಅವರಿಗೆ ಸಂಕಟ ತಂದದ್ದು ಎಷ್ಟುಬಾರಿ?


ಬೆಂಕಿಯಿಕ್ಕಿ ಸುತ್ತಲು ಕೊಳ್ಳಿಗಳನು ಹತ್ತಿಸಿಕೊಂಡಿರುವ ಎಲೈ ಜನರೇ, ನಡೆಯಿರಿ ನಿಮ್ಮಾ ಬೆಂಕಿಯ ಬೆಳಕಿನಲಿ ನೀವು ಹತ್ತಿಸಿದ ಆ ಕೊಳ್ಳಿಗಳ ನಡುವೆಯೆ ನಡೆಯಿರಿ : ಇಗೋ, ಒದಗುವುದು ದುರ್ಗತಿ ನನ್ನ ಹಸ್ತದಿಂದ, ಸಾಯುವಿರಿ ನೀವು ಬಾಧೆಯಿಂದ.


ದುರ್ಜನರ ಮಾರ್ಗ ಕಗ್ಗತ್ತಲಿನ ಹಾಗೆ, ಎಡವಿಬಿದ್ದ ಸ್ಥಳವೇ ತಿಳಿಯದು ಅವರಿಗೆ.


ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.


ಸಿಟ್ಟಿನಿಂದ ನಿನ್ನನ್ನೆ ಸೀಳಿಕೊಳ್ಳುತ್ತಿರುವವನೇ, ನಿನ್ನ ನಿಮಿತ್ತ ಇಡೀಲೋಕ ಬಿಕೋ ಎನ್ನಬೇಕೆ? ಬೆಟ್ಟಗುಡ್ಡಗಳು ಸ್ಥಳಬಿಟ್ಟು ಜರುಗಬೇಕೆ?


“ಆದರೆ, ದುರುಳರು ಅಲ್ಲೋಲಕಲ್ಲೋಲವಾದ ಸಮುದ್ರದಂತೆ ಇದ್ದಾರೆ. ಅದು ಸುಮ್ಮನಿರದು - ಅದರ ಅಲೆಗಳು ಕೆಸರನ್ನೂ ಕೊಳಚೆಯನ್ನೂ ಕಕ್ಕುತ್ತಾ ಇರುತ್ತದೆ.


ನಿನ್ನ ಬೆಳಕನು ನಾ ನಂದಿಸಿ ಕತ್ತಲಾಗಿಸುವಾಗ, ಮುಚ್ಚುವೆನು ಸೂರ್ಯಚಂದ್ರ ನಕ್ಷತ್ರಗಳನು ಮೋಡಮುಸುಕಿನಿಂದ.


ಕತ್ತಲೊಳಗಿಂದ ಪಾರಾಗನವನು ಸುಡುವುದು ಕಿಚ್ಚು ಅವನ ಕೊಂಬೆಯನು ಬಡಿದೊಯ್ಯುವುದು ಗಾಳಿ ಅದರ ಫಲವನು.


ಗರ್ವದ ನೋಟ, ಉಬ್ಬಿದ ಎದೆ, ಇವು ದುರುಳರೊಳು ಕಾಣುವ ಪಾಪದ ಕಿಡಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು