Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:6 - ಕನ್ನಡ ಸತ್ಯವೇದವು C.L. Bible (BSI)

6 ಅವನ ಗುಡಾರದ ಬೆಳಕು ಕತ್ತಲಾಗುವುದು ಅವನ ಮೇಲಣ ಸೊಡರು ನಂದಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವುದು, ಅವನ ಮೇಲಣ ತೂಗು ದೀವಿಗೆಯು ನಂದಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವದು, ಅವನ ಮೇಲಣ [ತೂಗು] ದೀವಿಗೆಯು ನಂದುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವನ ಗುಡಾರದಲ್ಲಿರುವ ಬೆಳಕು ಕತ್ತಲಾಗುವುದು; ಅವನ ಪಕ್ಕದಲ್ಲಿರುವ ದೀಪವು ಆರಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವುದು; ಅವನ ಮೇಲಣ ತೂಗು ದೀಪವು ಆರಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:6
11 ತಿಳಿವುಗಳ ಹೋಲಿಕೆ  

“ಉರಿಯುವ ದೀಪದ ಬೆಳಕು ಹೊಳೆಯದು ನಿನ್ನಲ್ಲಿ, ವಧುವರರ ಇನಿದನಿ ಕೇಳದು ನಿನ್ನಲ್ಲಿ. ಇದ್ದರು ನಿನ್ನ ವರ್ತಕರು ಇಳೆಗೆ ಧನವಂತರಾಗಿ ಬಿದ್ದವು ರಾಷ್ಟ್ರಗಳು ನಿನ್ನ ಜಾಲಕೆ ವಂಚಿತರಾಗಿ.


ಹೊತ್ತಿಸುವೆ ಪ್ರಭು, ನೀನೆನ್ನ ಬಾಳಿನ ದೀಪವನು I ಕತ್ತಲನು ನೀಗಿಸಿ ಜ್ಯೋತಿ ಬೆಳಗುವನಾ ದೇವನು II


ಆ ದುರುಳರ ದೀಪ ಆರಿಹೋದದ್ದು ಎಷ್ಟುಸಾರಿ? ಅವರಿಗೆ ವಿಪತ್ತು ಸಂಭವಿಸಿದ್ದು ಎಷ್ಟುಸಾರಿ? ಅವರ ಕೋಪ ಅವರಿಗೆ ಸಂಕಟ ತಂದದ್ದು ಎಷ್ಟುಬಾರಿ?


ಅಂಥವರು ಕತ್ತಲೊಳು ತಡಕಾಡುವರು ಬೆಳಕಿಲ್ಲದೆ ತಡವರಿಸುವರು ಕುಡಿದು ಅಮಲೇರಿದವರಂತೆ.”


ನೆಮ್ಮದಿಯ ಗುಡಾರದಿಂದ ಅವನನ್ನು ಎಳೆದು ಹಾಕುವುದು ಹೊರಗೆ ಸಾಗಿಸಿಕೊಂಡು ಹೋಗುವುದವನನ್ನು ಅತಿಭಯಂಕರ ರಾಜನೆಡೆಗೆ.


ಆಗ ಬೆಳಗುತ್ತಿತ್ತು ಆತನ ದೀಪ ತಲೆಯ ಮೇಲೆ ಇರುಳಲ್ಲೂ ಸಂಚರಿಸುತ್ತಿದ್ದೆ ಆತನ ಬೆಳಕಿನಲೇ.


ದುರ್ಜನರ ಮಾರ್ಗ ಕಗ್ಗತ್ತಲಿನ ಹಾಗೆ, ಎಡವಿಬಿದ್ದ ಸ್ಥಳವೇ ತಿಳಿಯದು ಅವರಿಗೆ.


ಕೆಟ್ಟವನಿಗೆ ಶುಭಕಾಲ ಬಾರದು, ದುಷ್ಟರ ದೀಪ ಆರಿಹೋಗುವುದು.


ನಿನ್ನ ಬೆಳಕನು ನಾ ನಂದಿಸಿ ಕತ್ತಲಾಗಿಸುವಾಗ, ಮುಚ್ಚುವೆನು ಸೂರ್ಯಚಂದ್ರ ನಕ್ಷತ್ರಗಳನು ಮೋಡಮುಸುಕಿನಿಂದ.


ಇಂಥವನು ಸಿರಿವಂತನಾಗಿ ಉಳಿಯನು ಅವನ ಆಸ್ತಿ ಸ್ಥಿರವಾಗಿ ನಿಲ್ಲದು ಅವನು ಧರೆಯಲ್ಲಿ ಬೇರೂರಿ ಬೆಳೆಯನು.


ಗರ್ವದ ನೋಟ, ಉಬ್ಬಿದ ಎದೆ, ಇವು ದುರುಳರೊಳು ಕಾಣುವ ಪಾಪದ ಕಿಡಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು