Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:7 - ಕನ್ನಡ ಸತ್ಯವೇದವು C.L. Bible (BSI)

7 ಅವನ ಬಿರುಸಾದ ಹೆಜ್ಜೆಗಳು ಜಡವಾಗುವುವು ಅವನು ಹಾಕಿದ ಯೋಜನೆಗಳು ಅವನನ್ನೆ ಕೆಡವಿಹಾಕುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನ ಬಲವುಳ್ಳ ಹೆಜ್ಜೆಗಳು ಇಕ್ಕಟ್ಟಾಗುವುದು, ಅವನ ಆಲೋಚನೆಯೇ ಅವನನ್ನು ಕೆಡವಿಹಾಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನ ಬಲವುಳ್ಳ ಹೆಜ್ಜೆಗಳಿಗೆ ಇಕ್ಕಟ್ಟಾಗುವದು, ಅವನ ಆಲೋಚನೆಯೇ ಅವನನ್ನು ಕೆಡವಿಹಾಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವನ ಹೆಜ್ಜೆಗಳಲ್ಲಿ ಬಲವಿರುವುದಿಲ್ಲ; ಅವನ ದುಷ್ಟ ಯೋಜನೆಗಳೇ ಅವನನ್ನು ಬೀಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನ ಬಲವುಳ್ಳ ಹೆಜ್ಜೆಗಳು ದುರ್ಬಲಗೊಳ್ಳುವುದು; ಅವನ ಯೋಜನೆಗಳೇ ಅವನನ್ನು ಕೆಡವಿಹಾಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:7
15 ತಿಳಿವುಗಳ ಹೋಲಿಕೆ  

ನಡೆಯುವಾಗ ನಿನ್ನ ಹೆಜ್ಜೆಗೆ ತಡೆಯಾಗದು, ನೀ ಓಡುವಾಗ ಮುಗ್ಗರಿಸಿ ಬೀಳಲಾಗದು.


ನೀನಿತ್ತೆ ನನ್ನ ಪಾದಗಳಿಗೆ ವಿಶಾಲಸ್ಥಳ I ನನ್ನ ಹೆಜ್ಜೆಗಳು ಕದಲವು ಈ ನಿಮಿತ್ತ II


ಇಹಲೋಕಪ ಜಾಣತನವು ದೇವರ ದೃಷ್ಟಿಯಲ್ಲಿ ಹುಚ್ಚುತನವೇ ಸರಿ. “ದೇವರು ಜ್ಞಾನಿಗಳನ್ನು ಅವರ ಜಾಲದಲ್ಲಿಯೇ ಸಿಕ್ಕಿಸುವರು” ಎಂದೂ


ಆ ವಿಗ್ರಹವನ್ನು ಅಸ್ಸೀರಿಯದ ಜಗಳಗಂಟಿ ರಾಜನಿಗೆ ಕಾಣಿಕೆಯಾಗಿ ಕೊಡಲಾಗುವುದು. ಎಫ್ರಯಿಮಿಗೆ ಅವಮಾನವಾಗುವುದು. ಇಸ್ರಯೇಲ್ ತಾನು ಕೆತ್ತಿಸಿಕೊಂಡ ವಿಗ್ರಹಕ್ಕಾಗಿ ನಾಚಿಕೆಗೀಡಾಗುವುದು.


ವ್ಯರ್ಥವಾಗಿಪನು ಪ್ರಭು ರಾಷ್ಟ್ರಯೋಜನೆಗಳನು I ನಿರರ್ಥಕವಾಗಿಪನು ಜನರ ದುಷ್ಟಸಂಕಲ್ಪಗಳನು II


ಅಂತೆಯೆ, ಕಷ್ಟದಿಂದ ನಿನ್ನನ್ನು ತಪ್ಪಿಸಬೇಕೆಂಬುದು ಇಕ್ಕಟ್ಟಿಲ್ಲದ ಬಯಲಿಗೆ ನಿನ್ನನ್ನು ತರಬೇಕೆಂಬುದು ನಿನ್ನ ಊಟದ ಮೇಜು ಸಮೃದ್ಧಿಯಾಗಿರಬೇಕೆಂಬುದು ದೇವರ ಉದ್ದೇಶವಾಗಿರುವುದು.


ಸಮೃದ್ಧಿಯಿಂದಿರುವಾಗಲೇ ಕೊರತೆ ಅವನನ್ನು ಕಾಡುವುದು ಶ್ರಮಜೀವಿಗಳೆಲ್ಲರ ಕೈ ಅವನ ಮೇಲೆ ಎರಗುವುದು.


ನಾನಲ್ಲ, ನಿನ್ನ ಬಾಯೇ, ನಿನ್ನನು ಅಪರಾಧಿಯನ್ನಾಗಿಸುತ್ತಿದೆ ನಿನ್ನ ತುಟಿಗಳೇ ನಿನಗೆ ವಿರುದ್ಧ ಸಾಕ್ಷಿಕೊಡುತ್ತಿವೆ.


ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲ ಇಸ್ರಯೇಲರೂ, “ಅರ್ಕಿಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೆಯದಾಗಿದೆ,” ಎಂದರು. ಹೀಗೆ ಸರ್ವೇಶ್ವರ ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು, ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದರು.


ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು, “ಸರ್ವೇಶ್ವರಾ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು,” ಎಂದು ಪ್ರಾರ್ಥಿಸಿದನು.


ಈ ಕಾರಣ ಸಿರಿಯಾದ ಅರಸನು ಕಳವಳಗೊಂಡು, ತನ್ನ ಸೇನಾಪತಿಗಳನ್ನು ಕರೆದು, “ನಮ್ಮವರಲ್ಲಿ ಇಸ್ರಯೇಲರ ಅರಸನ ಪಕ್ಷದವರು ಯಾರೋ ಇದ್ದಾರೆ; ನನಗೆ ನೀವು ಯಾರೂ ತಿಳಿಸುವುದಿಲ್ಲವೇ?’ ಎಂದು ಕೇಳಿದನು.


ನಿರ್ದೋಷಿಯ ಮಾರ್ಗ ಸರಾಗ; ದುಷ್ಟತನದಿಂದ ದುರುಳನ ಪತನ.


ಕೆಟ್ಟವನು ತನ್ನ ಪಾಪಪಾಶದಲ್ಲೆ ಸಿಕ್ಕಿಬೀಳುವನು; ಒಳ್ಳೆಯವನು ಉಲ್ಲಾಸದಿಂದ ಹಾಡಿ ಹರ್ಷಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು