Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:10 - ಕನ್ನಡ ಸತ್ಯವೇದವು C.L. Bible (BSI)

10 ನಾಲ್ದೆಸೆಯಿಂದ ಧಾಳಿಮಾಡಿ ನಾಶಮಾಡಿದ್ದಾನೆ ಮರ ಕೀಳುವ ಪ್ರಕಾರ ನನ್ನ ನಿರೀಕ್ಷೆಯನು ಕಿತ್ತುಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆತನು ನನ್ನನ್ನು ಸುತ್ತುಮುತ್ತಲೂ ಕೆಡವಿದ್ದರಿಂದ ಇಲ್ಲದೆ ಹೋದೆನು. ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆತನು ನನ್ನನ್ನು ಸುತ್ತುಮುತ್ತಲೂ ಕೆಡವಿದ್ದರಿಂದ ಇಲ್ಲದೆ ಹೋದೆನು. ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ಸಾಯುವ ತನಕ ದೇವರು ನನ್ನನ್ನು ಎಲ್ಲಾ ಕಡೆಗಳಿಂದಲೂ ಅಪ್ಪಳಿಸಿ ಕೆಡುವುತ್ತಿದ್ದಾನೆ. ಬೇರುಗಳ ಸಹಿತ ಕೀಳಲ್ಪಟ್ಟ ಮರದ ಹಾಗೆ ಆತನು ನನ್ನ ನಿರೀಕ್ಷೆಯನ್ನು ತೆಗೆದುಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ಸುತ್ತಲೂ ದಾಳಿಯಾಗಿದ್ದರಿಂದ, ನಾನು ಕ್ಷಯಿಸುತ್ತಿದ್ದೇನೆ; ಮರವನ್ನು ಕೀಳುವ ಹಾಗೆ ದೇವರು ನನ್ನ ನಿರೀಕ್ಷೆಯನ್ನು ಕಿತ್ತುಹಾಕಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:10
15 ತಿಳಿವುಗಳ ಹೋಲಿಕೆ  

ಹೆತ್ತಕರುಳೇ ಅವನನು ಮರೆತುಬಿಡುವುದು ಹುಳು ಅವನ ಹೆಣವನು ಆಸೆಯಿಂದ ಕಬಳಿಸುವುದು. ಇನ್ನು ಅವನ ನೆನಪು ಯಾರಿಗೂ ಇರದು ಅಕ್ರಮವು ಮುರಿದುಬಿದ್ದ ಮರದಂತಾಗುವುದು.


ಆತ ಕೆಡವಿದ್ದನ್ನು ಯಾರಿಂದಲೂ ಕಟ್ಟಲಾಗದು ಆತ ಸೆರೆಹಿಡಿದವರನ್ನು ಯಾರಿಂದಲೂ ಬಿಡಿಸಲಾಗದು.


ನನ್ನ ಬಾಳು ಬೈಗಿನ ನೆರಳಂತೆ I ನಾನಿರುವೆ ಬಾಡಿದ ಹುಲ್ಲಿನಂತೆ II


ನನ್ನ ನಂಬಿಕೆ-ನಿರೀಕ್ಷೆ ಎಲ್ಲಿಯದು? ನನ್ನ ಭಾಗ್ಯವನ್ನು ಯಾರು ನೋಡಿಯಾರು?


ಮುಗಿದುಹೋದವು ನನ್ನ ದಿನಗಳು ಭಂಗವಾದವು ನನ್ನ ಗುರಿಧ್ಯೇಯಗಳು.


ನನ್ನ ದಿನಗಳು ಮಗ್ಗದ ಲಾಳಕ್ಕಿಂತ ತ್ವರಿತ ಅವುಗಳಿಗಿದೋ ನಿರೀಕ್ಷೆಯಿಲ್ಲದ ಮುಕ್ತಾಯ.


ನಾನು ನಿರೀಕ್ಷೆಯಿಂದಿರಲು ನನಗಾಧಾರವೇನು? ನಾನು ತಾಳ್ಮೆಯಿಂದಿರಲು ನನ್ನ ಅಂತ್ಯಸ್ಥಿತಿಯೇನು?


ಸೈತಾನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ಹೊರಟುಬಂದ. ಯೋಬನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಕೆಟ್ಟಕುರುಗಳು ಹುಟ್ಟುವಂತೆ ಮಾಡಿ ಆತನನ್ನು ಬಾಧಿಸಿದ.


ಕಲ್ಲುಗಳನ್ನು ನೀರು ಸವೆಸುವಂತೆ ನೆಲದ ಮಣ್ಣನು ಪ್ರವಾಹ ಕೊಚ್ಚುವಂತೆ ಭಂಗವಾಗುವುದು ಮಾನವನ ನಿರೀಕ್ಷೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು