Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:13 - ಕನ್ನಡ ಸತ್ಯವೇದವು C.L. Bible (BSI)

13 ಸೋದರನನ್ನೂ ನನ್ನಿಂದ ದೇವರು ದೂರವಾಗಿರಿಸಿದ್ದಾನೆ ಪರಿಚಿತರೆಲ್ಲರು ನನ್ನನು ತೊರೆದುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ಸಹೋದರರನ್ನು ನನ್ನಿಂದ ಅಗಲಿಸಿದ್ದಾನೆ, ನನ್ನ ಪರಿಚಿತರು ನನ್ನನ್ನು ಸಂಪೂರ್ಣವಾಗಿ ತೊರೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನ ಸಹೋದರರನ್ನು ನನ್ನಿಂದ ಅಗಲಿಸಿದ್ದಾನೆ, ನನ್ನ ಪರಿಚಿತರು ನನ್ನನ್ನು ಸಂಪೂರ್ಣವಾಗಿ ತೊರೆದಿದ್ದಾರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನನ್ನ ಸಹೋದರರು ನನ್ನನ್ನು ತೊರೆದುಬಿಡುವಂತೆ ದೇವರು ಮಾಡಿದ್ದಾನೆ. ನಾನು ನನ್ನ ಸ್ನೇಹಿತರಿಗೆಲ್ಲಾ ಅಪರಿಚಿತನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ದೇವರು ನನ್ನ ಕುಟುಂಬದವರನ್ನು ನನ್ನಿಂದ ಅಗಲಿಸಿದ್ದಾರೆ; ನನ್ನ ಪರಿಚಿತರೆಲ್ಲರೂ ನನ್ನನ್ನು ತೊರೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:13
20 ತಿಳಿವುಗಳ ಹೋಲಿಕೆ  

ಆಪ್ತರೂ ಹೇಸಿ ದೂರಸರಿವಂತೆ ಮಾಡಿರುವೆ I ಬಂಧಿತನಾದ ನಾನು ಬಿಡಿಸಿಕೊಳ್ಳಲಾಗದಿರುವೆ II


ಬಂಧುಮಿತ್ರರನು ನನ್ನಿಂದ ದೂರ ಮಾಡಿರುವೆ I ಅಂಧಕಾರದೊಡನೆ ಸಂಗಾತಿಯನ್ನಾಗಿಸಿರುವೆ II


ನನ್ನವರಿಗೇ ನಾನನ್ಯನಾದೆನಯ್ಯಾ I ಒಡ ಹುಟ್ಟಿದವರಿಗೇ ಹೊರಗಿನವನಾದೆನಯ್ಯಾ II


ಶತ್ರುಗಳ ದೂಷಣೆಗೆ ಗುರಿಯಾದೆ, ನೆರೆಯವರಿಗೆ ನಿಂದಾಸ್ಪದನಾದೆ I ಮಿತ್ರರೂ ಬೆದರುವಂತಾದೆ; ದಾರಿಹೋಕರು ದೂರವಾಗುವಂತಾದೆ II


ನಾನು ಮೊದಲನೆಯ ಸಾರಿ ವಿಚಾರಣೆಗೆ ಒಳಗಾಗಿ ಪ್ರತಿವಾದಿಸುತ್ತಿದ್ದಾಗ ಯಾರೂ ನನ್ನ ಪರವಾಗಿ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ದೇವರು ಅವರನ್ನು ಕ್ಷಮಿಸಲಿ.


ಆದರೆ ಪವಿತ್ರಗ್ರಂಥದ ಪ್ರವಾದನೆಗಳು ಈಡೇರಲೆಂದೇ ಇದೆಲ್ಲಾ ಜರುಗಿದೆ,” ಎಂದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ತೊರೆದು ಪಲಾಯನಮಾಡಿದರು.


ನಿಂದೆಯಿಂದ ಮನನೊಂದು ಹತಾಶನಾಗಿರುವೆನಯ್ಯಾ I ಹಾತೊರೆದರೂ ದಯೆತೋರುವನಾರೂ ಸಿಗಲಿಲ್ಲ I ಅರಸಿದರೂ ಸಾಂತ್ವನನೀಡುವವನು ದೊರಕಲಿಲ್ಲ II


ನನ್ನ ಜಾಡ್ಯ ನೋಡಿ ದೂರ ಸರಿದರು ನೆಂಟರಿಷ್ಟರು I ಬಳಿಬಾರದೆ ಅಲ್ಲೇ ನಿಂತರು ಬಂಧು ಬಳಗದವರು II


ದೇವರೇ, ದುಃಖದಿಂದ ನೀ ನನ್ನನ್ನು ಸವೆಸಿರುವೆ ನನ್ನ ಬಂಧುಬಳಗದವರನ್ನು ಸದೆಬಡಿದಿರುವೆ.


ಗೆಳೆಯರು ನನ್ನನ್ನು ಹೀಗಳೆಯುತ್ತಿರುವರು ನಾನೋ ಸುರಿಸುತ್ತಿರುವೆ ದೇವರ ಮುಂದೆ ಕಣ್ಣೀರು.


ಅವನ ಎಲ್ಲಾ ಅಣ್ಣತಮ್ಮಂದಿರು, ಅಕ್ಕತಂಗಿಯರು, ಹಿಂದಿನ ಪರಿಚಿತರು ಅವನನ್ನು ಕಾಣಬಂದು ಔತಣದಲ್ಲಿ ಭಾಗವಹಿಸಿದರು. ಅವನಿಗೆ ಸರ್ವೇಶ್ವರನಿಂದ ಒದಗಿದ್ದ ಆಪತ್ತಿಗಾಗಿ ಅನುತಾಪ ವ್ಯಕ್ತಪಡಿಸಿ, ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.


ನನ್ನಾಪ್ತಮಿತ್ರನು, ನನ್ನ ನಂಬಿಕೆಗೆ ಪಾತ್ರನು I ನನ್ನೊಡನೆ ಉಂಡವನು, ನನಗೆರಡು ಬಗೆದಿಹನು II


ಇರುಳೆಲ್ಲ ಅತ್ತಳು ಬಿಕ್ಕಿಬಿಕ್ಕಿ ಕೆನ್ನೆ ಮೇಲೆ ನೋಡಿ, ಕಣ್ಣೀರ ಕೋಡಿ ! ಆಕೆಯ ಹಲವಾರು ಪ್ರಿಯರಲ್ಲಿ ಸಂತೈಸುವವರೇ ಇಲ್ಲ ಮಿತ್ರರಾಗಿದ್ದವರೇ ದ್ರೋಹವೆಸಗಿ ಶತ್ರುಗಳಾಗಿರುವರಲ್ಲಾ !


“ನನ್ನ ಪ್ರಿಯರನ್ನು ಕರೆದೆ; ಅವರೇ ಮೋಸಮಾಡಿದರೆನಗೆ. ನನ್ನ ಯಾಜಕರೂ ಪ್ರಮುಖರೂ ಪಟ್ಟಣದಲ್ಲೇ ಪ್ರಾಣತೆತ್ತರು, ಉಸಿರನ್ನು ಉಳಿಸಿಕೊಳ್ಳಲು ಊಟವನ್ನು ಹುಡುಕುತ್ತಿರಲು.


ಹರಿದು ಓಡುವ ತೊರೆಯಂತೆ ಉಕ್ಕಿ ಹರಿಯುವ ಪ್ರವಾಹದಂತೆ ದ್ರೋಹವೆಸಗಿದ್ದಾರೆ ಸೋದರರು ನನಗೆ.


ಆಶಿಸಿದಷ್ಟೂ ಆಶಾಭಂಗಪಡುತ್ತಾರೆ ಆ ಪ್ರಯಾಣಿಕರು ನಂಬಿದಷ್ಟೂ ನಿರೀಕ್ಷೆಗೆಡುತ್ತಾರೆ ಆ ವರ್ತಕರು.


ನುಚ್ಚುನೂರಾದೆ, ಮಡಕೆಚಿಪ್ಪಿನಂತಾದೆ I ಸತ್ತವರಂತಾದೆ: ನೆನಪಿಗೆ ಬಾರದಾದೆ II


ಉರಲನೊಡ್ಡಿಹರು ನನ್ನ ಪ್ರಾಣಹಂತಕರು I ನಿರ್ಧರಿಸಿಹರು ವಿನಾಶವನ್ನು ಕೇಡು ಬಗೆವವರು I ಕುತಂತ್ರವ ಮಾಡುವರು ಸತತ ಮೋಸಗಾರರು II


ಅಗ್ನಿಯಂತೆನ್ನ ದಹಿಸುತ್ತಿದೆ ನಿನ್ನಾಲಯದಭಿಮಾನ I ಎನ್ನ ಮೇಲೆರಗಿದೆ ನಿನ್ನ ಕಡುದ್ರೋಹಿಗಳ ದೂಷಣ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು