Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:14 - ಕನ್ನಡ ಸತ್ಯವೇದವು C.L. Bible (BSI)

14 ನನ್ನನು ಬಂಧುಬಳಗದವರು ಕೈಬಿಟ್ಟಿದ್ದಾರೆ ಆಪ್ತಮಿತ್ರರೂ ನನ್ನನು ಮರೆತುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನನ್ನ ಬಂಧುಗಳು ನನ್ನನ್ನು ಬಿಟ್ಟುಬಿಟ್ಟಿದ್ದಾರೆ, ನನಗೆ ಪರಿಚಯವಿದ್ದವರು ನನ್ನನ್ನು ಮರೆತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನನ್ನ ಬಂಧುಗಳು ನನ್ನನ್ನು ಬಿಟ್ಟುಬಿಟ್ಟಿದ್ದಾರೆ, ನನಗೆ ಪರಿಚಯವಿದ್ದವರು ನನ್ನನ್ನು ಮರೆತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನನ್ನ ಸಂಬಂಧಿಕರು ನನ್ನನ್ನು ತೊರೆದುಬಿಟ್ಟರು. ನನ್ನ ಸ್ನೇಹಿತರು ನನ್ನನ್ನು ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನ ಬಂಧುಗಳು ನನ್ನನ್ನು ಕೈಬಿಟ್ಟಿದ್ದಾರೆ; ನನ್ನ ಆಪ್ತ ಸ್ನೇಹಿತರು ನನ್ನನ್ನು ಮರೆತುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:14
14 ತಿಳಿವುಗಳ ಹೋಲಿಕೆ  

ನನ್ನ ಜಾಡ್ಯ ನೋಡಿ ದೂರ ಸರಿದರು ನೆಂಟರಿಷ್ಟರು I ಬಳಿಬಾರದೆ ಅಲ್ಲೇ ನಿಂತರು ಬಂಧು ಬಳಗದವರು II


“ನಾನು ನಿಮ್ಮೆಲ್ಲರನ್ನೂ ಕುರಿತು ಹೀಗೆ ಹೇಳುತ್ತಾ ಇಲ್ಲ. ಯಾರನ್ನು ನಾನು ಆರಿಸಿಕೊಂಡಿದ್ದೇನೆಂಬುದು ನನಗೆ ಗೊತ್ತು. ಆದರೆ ‘ನನ್ನೊಡನೆ ಉಂಡವನೇ ನನಗೆ ದ್ರೋಹ ಬಗೆದನು’ ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿದೆ. ಆ ಮಾತು ಈಡೇರಬೇಕಾಗಿದೆ.


ಸಹೋದರನು ಸಹೋದರನನ್ನೇ ತಂದೆಯು ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.


ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ.


ಗೆಳೆಯರಂತೆ ನಟಿಸಿ ನಾಶಗೊಳಿಸುವವರು ಅನೇಕರುಂಟು; ಸಹೋದರನಿಗಿಂತ ಪ್ರಿಯನಾದ ಸ್ನೇಹಿತನೂ ಉಂಟು.


ಆ ದಿನಗಳಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿಗಿರುವಷ್ಟೇ ಬೆಲೆಯಿತ್ತು. ದಾವೀದನೂ ಅಬ್ಷಾಲೋಮನೂ ಅವನ ಸಲಹೆಗಳನ್ನು ಮಾನ್ಯಮಾಡುತ್ತಿದ್ದರು.


ಆದರೆ ಮುಖ್ಯ ಪಾನಸೇವಕನು ಜೋಸೆಫನನ್ನು ನೆನಪಿಗೆ ತಂದುಕೊಳ್ಳಲಿಲ್ಲ, ಅವನನ್ನು ಮರೆತೇಬಿಟ್ಟ.


ಮನೆಯ ದಾಸದಾಸಿಯರಿಗೇ ನಾನು ಅನ್ಯನಾದೆ ಅವರ ಕಣ್ಣಿಗೇ ನಾನು ಪರದೇಶಿಯನಾದೆ.


ನನ್ನ ನೋಡಿ ಆಪ್ತಮಿತ್ರರೆಲ್ಲರು ಹೇಸಿಕೊಳ್ಳುತ್ತಾರೆ ನನ್ನ ಮೇಲೆ ನನ್ನ ಪ್ರೀತಿಪಾತ್ರರೂ ತಿರುಗಿಬಿದ್ದಿದ್ದಾರೆ.


ಇರುಳೆಲ್ಲ ಅತ್ತಳು ಬಿಕ್ಕಿಬಿಕ್ಕಿ ಕೆನ್ನೆ ಮೇಲೆ ನೋಡಿ, ಕಣ್ಣೀರ ಕೋಡಿ ! ಆಕೆಯ ಹಲವಾರು ಪ್ರಿಯರಲ್ಲಿ ಸಂತೈಸುವವರೇ ಇಲ್ಲ ಮಿತ್ರರಾಗಿದ್ದವರೇ ದ್ರೋಹವೆಸಗಿ ಶತ್ರುಗಳಾಗಿರುವರಲ್ಲಾ !


ಅವನ ಎಲ್ಲಾ ಅಣ್ಣತಮ್ಮಂದಿರು, ಅಕ್ಕತಂಗಿಯರು, ಹಿಂದಿನ ಪರಿಚಿತರು ಅವನನ್ನು ಕಾಣಬಂದು ಔತಣದಲ್ಲಿ ಭಾಗವಹಿಸಿದರು. ಅವನಿಗೆ ಸರ್ವೇಶ್ವರನಿಂದ ಒದಗಿದ್ದ ಆಪತ್ತಿಗಾಗಿ ಅನುತಾಪ ವ್ಯಕ್ತಪಡಿಸಿ, ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.


ನುಚ್ಚುನೂರಾದೆ, ಮಡಕೆಚಿಪ್ಪಿನಂತಾದೆ I ಸತ್ತವರಂತಾದೆ: ನೆನಪಿಗೆ ಬಾರದಾದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು