Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:2 - ಕನ್ನಡ ಸತ್ಯವೇದವು C.L. Bible (BSI)

2 “ಇನ್ನೆಷ್ಟರವರೆಗೆ ನೀವು ನನ್ನನ್ನು ನೋಯಿಸುವಿರಿ? ನಿಮ್ಮ ಮಾತುಗಳಿಂದ ನನ್ನನು ನಸುಕುತ್ತಿರುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಎಷ್ಟರವರೆಗೆ ನನ್ನ ಆತ್ಮವನ್ನು ನೋಯಿಸಿ, ಮಾತುಗಳಿಂದ ನನ್ನನ್ನು ಜಜ್ಜುತ್ತಿರುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಎಷ್ಟರವರೆಗೆ ನನ್ನ ಆತ್ಮವನ್ನು ನೋಯಿಸಿ ಮಾತುಗಳಿಂದ ನನ್ನನ್ನು ಜಜ್ಜುತ್ತಿರುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇನ್ನೆಷ್ಟರವರೆಗೆ ನೀವು ನನ್ನನ್ನು ನೋಯಿಸುವಿರಿ? ನಿಮ್ಮ ಮಾತುಗಳಿಂದ ನನ್ನನ್ನು ಜಜ್ಜುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಎಷ್ಟರವರೆಗೆ ನನ್ನ ನೋಯಿಸಿ, ನನ್ನನ್ನು ಮಾತುಗಳಿಂದ ಜಜ್ಜುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:2
18 ತಿಳಿವುಗಳ ಹೋಲಿಕೆ  

ಅವರು ಆರ್ತಧ್ವನಿಯಿಂದ, ‘ಸರ್ವಶಕ್ತ ಪ್ರಭುವೇ, ಸತ್ಯವಂತರೇ, ಪರಿಶುದ್ಧರೇ, ನಮ್ಮನ್ನು ಕೊಲೆಮಾಡಿದ ಭೂನಿವಾಸಿಗಳಿಗೆ ಇನ್ನೆಷ್ಟುಕಾಲ ನ್ಯಾಯವಿಚಾರಣೆ ಮಾಡದೆ, ಸೇಡನ್ನು ತೀರಿಸಿಕೊಳ್ಳದೆ ಇರುತ್ತೀರಿ?” ಎಂದು ಕೇಳಿದರು.


ಜನನ ಮರಣಗಳ ಶಕ್ತಿ ನಾಲಿಗೆಗಿದೆ; ವಚನ ಪ್ರಿಯರು ಅದರ ಫಲವನ್ನು ರುಚಿಸುವರು.


ಕತ್ತಿ ಇರಿತದಂತೆ ದುಡುಕನ ಮಾತು; ಹುಣ್ಣಿಗೆ ಮದ್ದುಹಾಕಿದಂತೆ ಜ್ಞಾನಿಗಳ ಮಾತು.


ನಾಲಗೆಯೆಂಬ ಅಲಗನವರು ಮಸೆದಿಹರು I ನಂಜುಮಾತೆಂಬ ಅಂಬನು ಹೂಡಿಹರು II


ಅವರ ಬಾಯಿ ಬೊಗಳುವ ಮಾತುಗಳನು ಕೇಳು I ಅವರ ತುಟಿಗಳು ಹರಿತ ಕತ್ತಿಕಠಾರಿಗಳು I ನಮಗಾರು ಕಿವಿಗೊಡರೆಂಬುದೆ ಅವರ ಗೋಳು II


ಅವನ ಬಾಯಿ ಬೆಣ್ಣೆಗಿಂತ ನಯ, ಆದರೆ ಹೃದಯ ಕಲಹಭರಿತ I ನುಡಿ ಎಣ್ಣೆಗಿಂತ ನುಣುಪು, ಆದರೆ ಬಿಚ್ಚುಗತ್ತಿಗಿಂತ ಹರಿತ II


“ನಿನ್ನ ದೇವನೆಲ್ಲಿ?” ಎಂದು ವಿರೋಧಿಗಳು ಸತತ ಹಂಗಿಸುವಾಗ I ನನ್ನೆಲುಬುಗಳು ಮುರಿದಂತಾಗುತ್ತದೆ ಆ ಜರೆಯ ಕೇಳಿದಾಗ II


ಎಷ್ಟುಕಾಲ ಪ್ರಭು, ನೀ ಎನ್ನ ಪೂರ್ತಿ ಮರೆತಿರುವೆ? I ಇನ್ನೆಷ್ಟರ ತನಕ ನೀನೆನಗೆ ವಿಮುಖನಾಗಿರುವೆ? II


“ನನಗೆ ನ್ಯಾಯ ದೊರಕಿಸದ ಜೀವಂತ ದೇವರಾಣೆ, ನನ್ನ ಮನಸ್ಸನು ಕಹಿಯಾಗಿಸಿದ ಸರ್ವಶಕ್ತನಾಣೆ.


“ಯೋಬನೇ, ಇನ್ನೆಷ್ಟರವರೆಗೆ ಮಾತುಗಳಿಗಾಗಿ ಹೊಂಚುಹಾಕುತ್ತಿರುವೆ? ಮೊದಲು ಆಲೋಚಿಸಿನೋಡು, ಆಮೇಲೆ ಬಾ ಮಾತುಕತೆಗೆ.


“ಇನ್ನೆಷ್ಟರವರೆಗೆ ಹೀಗೆ ನುಡಿಯುತ್ತಿರುವೆ? ಬಿರುಗಾಳಿಯಂಥ ಮಾತುಗಳನ್ನಾಡುತ್ತಿರುವೆ?


ಇದಲ್ಲದೆ, ಅವಳು ಅವನನ್ನು ದಿನದಿನವೂ ಮಾತಿನಿಂದ ಪೀಡಿಸುತ್ತಿದ್ದುದರಿಂದ ಅವನಿಗೆ ಸಾಯುವುದೇ ಒಳ್ಳೆಯದೆನ್ನುವಷ್ಟು ಬೇಸರ ಆಯಿತು.


ಆಗ ಯೋಬನು ಮತ್ತೆ ಹೀಗೆಂದನು:


ಈವರೆಗೆ ನನಗೆ ಕೇಡು ಮಾಡಿದ್ದಕ್ಕೆ ಹತ್ತಾರು ಸಾರಿ ನನ್ನನ್ನು ಅವಮಾನಿಸಿದ್ದಕ್ಕೆ ನಿಮಗಾಗುವುದಿಲ್ಲವೆ ನಾಚಿಕೆ?


ಇಗೋ, ನೀವೆಲ್ಲರೂ ಇದನು ನೋಡಿದ್ದೀರಿ ಖುದ್ದಾಗಿ ಮತ್ತೆ ಏಕೆ ವಾದಿಸುತ್ತೀರಿ ವ್ಯರ್ಥವಾಗಿ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು