Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:20 - ಕನ್ನಡ ಸತ್ಯವೇದವು C.L. Bible (BSI)

20 ಕೇವಲ ಎಲುಬೂ ತೊಗಲೂ ಆಗಿಬಿಟ್ಟಿದ್ದೇನೆ ಮೃತ್ಯುವಿನ ದವಡೆಗೆ ಸಿಕ್ಕಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನನ್ನ ಎಲುಬು ಚರ್ಮಕ್ಕೂ, ಮಾಂಸಕ್ಕೂ ಅಂಟಿಹೋಗಿದೆ, ಹಲ್ಲಿನ ಪರೆಯನ್ನು ಮಾತ್ರ ಉಳಿಸಿಕೊಂಡು (ಮರಣಕ್ಕೆ) ಓರೆಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನನ್ನ ಎಲುಬು ಚರ್ಮಕ್ಕೂ ಮಾಂಸಕ್ಕೂ ಅಂಟಿಹೋಗಿದೆ, ಹಲ್ಲಿನ ಪರೆಯನ್ನು ಮಾತ್ರ ಉಳಿಸಿಕೊಂಡು [ಮರಣಕ್ಕೆ] ಓರೆಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ನನ್ನ ಶಕ್ತಿಯೆಲ್ಲಾ ಕಳೆದುಹೋಗಿದೆ; ನಾನು ಅಸ್ಥಿಪಂಜರದಂತೆ ಆಗಿರುವೆ. ನನ್ನಲ್ಲಿ ಸ್ವಲ್ಪ ಜೀವ ಮಾತ್ರ ಉಳಿದುಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾನು ಕೇವಲ ಎಲುಬೂ ತೊಗಲೂ ಆಗಿಬಿಟ್ಟಿದ್ದೇನೆ; ನಾನು ನನ್ನ ಹಲ್ಲು ಚರ್ಮದಿಂದಲೇ ತಪ್ಪಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:20
15 ತಿಳಿವುಗಳ ಹೋಲಿಕೆ  

ಕೂಗಿ ನಾ ನಿಟ್ಟುಸಿರಿಟ್ಟೆ I ಎಲುಬು ತೊಗಲು ಆಗಿಬಿಟ್ಟೆ II


ಈಗ ಅವರ ಮುಖ ಕಾರ್ಮೋಡಕ್ಕಿಂತ ಕಪ್ಪು ಬೀದಿಗಳಲ್ಲಿ ನೋಡುತ್ತಿದ್ದವರಿಗೆ ಅವರ ಗುರುತೂ ಸಿಗದು. ಅವರ ಚರ್ಮ ಎಲುಬುಗಳಿಗೆ ಅಂಟಿಕೊಂಡಿದೆ ಅದಕ್ಕೆ ಸುಕ್ಕು ಹಿಡಿದಿದೆ; ಒಣಗಿ ಕಟ್ಟಿಗೆಯಾಗಿದೆ.


ಒಲೆಯಂತೆ ಸುಡುತ್ತಿದೆ ನಮ್ಮ ಚರ್ಮ ಕ್ಷಾಮಕಾಲದ ಭೀಕರ ಜ್ವರದ ನಿಮಿತ್ತ.


ಸವೆಸಿರುವನು ನನ್ನ ಮಾಂಸಚರ್ಮಗಳನ್ನು ಮುರಿದಿರುವನು ನನ್ನ ಎಲುಬುಗಳನ್ನು.


ಮಾಯವಾಗುತ್ತಿದೆ ನನ್ನೀ ಜೀವಮಾನ ಹೊಗೆಯಂತೆ I ಉರಿಯುತ್ತಿವೆ ಎನ್ನೆಲುಬುಗಳು ಒಲೆಯಲ್ಲಿಟ್ಟ ಕೊರಡಿನಂತೆ II


ನನ್ನ ದೇಹದಲ್ಲಿಲ್ಲ ಸೌಖ್ಯ ನಿನ್ನ ಕೋಪದ ನಿಮಿತ್ತ I ನನ್ನೆಲುಬಿನಲ್ಲಿಲ್ಲ ಕ್ಷೇಮ ನನ್ನ ಪಾಪದ ಪ್ರಯುಕ್ತ II


ನನ್ನ ಚರ್ಮ ಉದುರುತ್ತಿದೆ ಕರ್ರಗಾಗಿ ನನ್ನೆಲುಬು ಉರಿಯುತ್ತಿದೆ ತಾಪಕ್ಕೊಳಗಾಗಿ.


ನನ್ನ ಮಾಂಸ ಮುಸುಕಿದೆ ಹುಳುಹುಪ್ಪಟೆಗಳಿಂದ ನನ್ನ ಚರ್ಮ ಬಿರಿದಿದೆ ಕಜ್ಜಿಕಡಿತಗಳಿಂದ.


‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮಗೆ ವಿರುದ್ಧವಾಗಿ ಒದರಿಬಿಡುತ್ತೇವೆ. ಆದರೂ ದೇವರ ಸಾಮ್ರಾಜ್ಯ ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ,’ ಎಂದು ತಿಳಿಸಿರಿ.


ನನ್ನ ಮುಖವೆಲ್ಲ ಸುಕ್ಕುಹಿಡಿದಿದೆ ನನ್ನ ಸಣಕಲುತನವೆ ನನಗೆ ವಿರುದ್ಧ ಸಾಕ್ಷಿಯಾಗಿದೆ.


ಅಡವಿಯ ರಣಹದ್ದಿಗೆ ಸಮನಾದೆ I ಹಾಳುರಿನ ಗೂಗೆಯ ಹಾಗಾದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು