Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:21 - ಕನ್ನಡ ಸತ್ಯವೇದವು C.L. Bible (BSI)

21 ಕರುಣೆ ತೋರಿ ಗೆಳೆಯರೇ, ಕರುಣೆ ತೋರಿ ನನಗೆ! ಏಕೆಂದರೆ ದೇವರ ಕೈ ನನ್ನನು ದಂಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನ್ನ ಮಿತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ! ದೇವರ ಕೈ ನನ್ನನ್ನು ಹೊಡೆಯಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನನ್ನ ವಿುತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ! ದೇವರ ಕೈ ನನ್ನನ್ನು ಹೊಡೆಯಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನನ್ನ ಸ್ನೇಹಿತರೇ, ಕರುಣಿಸಿರಿ, ನೀವಾದರೂ ನನ್ನನ್ನು ಕರುಣಿಸಿರಿ. ದೇವರ ಹಸ್ತವು ನನ್ನನ್ನು ಹೊಡೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಕನಿಕರಿಸಿರಿ, ನನ್ನ ಸ್ನೇಹಿತರೇ, ನನ್ನನ್ನು ಕನಿಕರಿಸಿರಿ, ಏಕೆಂದರೆ ದೇವರ ಕೈ ನನ್ನನ್ನು ದಂಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:21
13 ತಿಳಿವುಗಳ ಹೋಲಿಕೆ  

ಆದರೆ ನೀವು ಕೈಹಾಕಿ ಆತನ ಸೊತ್ತನ್ನೆಲ್ಲಾ ಅಳಿಸಿಬಿಡಿ. ಆಗ ಆತನು ನಿಮ್ಮನ್ನು ಮುಖಾಮುಖಿಯಾಗಿ ನಿಂದಿಸುತ್ತಾನೋ ಇಲ್ಲವೋ ಎಂದು ನೋಡುವಿರಂತೆ!” ಎಂದನು.


ನಿನ್ನ ಬಾಣಗಳು ನಾಟಿವೆ ನನ್ನೊಳಗೆ I ನಿನ್ನ ಹಸ್ತವು ಎರಗಿದೆ ನನ್ನ ಮೇಲೆ II


ಸೆರೆಯಲ್ಲಿರುವವರನ್ನು ಸ್ಮರಿಸಿಕೊಳ್ಳಿ. ಅವರ ಸಂಗಡ ನೀವೂ ಸೆರೆಯಲ್ಲಿರುವಂತೆ ಭಾವಿಸಿಕೊಳ್ಳಿ. ಅನ್ಯಾಯಕ್ಕೆ ಒಳಗಾಗಿರುವವರನ್ನು ಜ್ಞಾಪಕದಲ್ಲಿಟ್ಟುಕೊಳ್ಳಿ. ಅನ್ಯಾಯಕ್ಕೆ ಒಳಗಾಗಬಲ್ಲ ದೇಹವೊಂದು ನಿಮಗೂ ಸಹ ಇದೆಯಲ್ಲವೇ?


ಒಂದು ಅಂಗಕ್ಕೆ ನೋವಾದರೆ, ಎಲ್ಲಾ ಅಂಗಗಳೂ ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ನಲಿವಾದರೆ, ಮಿಕ್ಕೆಲ್ಲಾ ಅಂಗಗಳು ಅದರೊಡನೆ ಸೇರಿ ನಲಿದಾಡುತ್ತವೆ.


ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ.


ಸಂಕಟದಲ್ಲಿ ಆಗದಾ ನೆಂಟನಿಗೆ ಸರ್ವಶಕ್ತನಲ್ಲಿ ಭಯಭಕ್ತಿ ಇರುವುದುಂಟೆ?


ನನ್ನ ಮನದೊಳು ಸರ್ವಶಕ್ತನ ಬಾಣಗಳು ನಾಟಿವೆ ನನ್ನ ಅಂತರಂಗದೊಳು ಅವುಗಳ ವಿಷ ಹೀರಲಾಗುತ್ತಿದೆ ದೇವರಿಂದ ಬಂದ ಆತಂಕಗಳು ನನ್ನನು ಸುತ್ತುವರೆದಿವೆ.


ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ. ದೇವರಿಂದ ನಾವು ಸುಖಪಡೆಯಬಹುದು, ದುಃಖವನ್ನು ಮಾತ್ರ ಪಡೆಯಬಾರದೊ?” ಎಂದು ಉತ್ತರಕೊಟ್ಟ. ಇಂಥ ಪರಿಸ್ಥಿತಿಯಲ್ಲೂ ಪಾಪದ ಮಾತೊಂದೂ ಅವನ ಬಾಯಿಂದ ಬರಲಿಲ್ಲ.


ನೀವೀಗ ಕೈಚಾಚಿ ಯೋಬನ ಮೂಳೆಮಾಂಸಗಳನ್ನು ಮುಟ್ಟಿನೋಡಿ; ಅವನು ನಿಮ್ಮ ಮುಖದೆದುರಿಗೇ ನಿಮ್ಮನ್ನು ದೂಷಿಸುತ್ತಾನೋ ಇಲ್ಲವೋ ನೀವೇ ನೋಡುವಿರಂತೆ,” ಎಂದನು.


ನೀನು ಬೆಳಕನ್ನು ಕಾಣದೆ ಕೆಲವು ಕಾಲ ಕುರುಡನಾಗಿರುವೆ,” ಎಂದನು. ಆ ಕ್ಷಣವೇ ಎಲಿಮನ ಕಣ್ಣು ಮಬ್ಬಾಯಿತು; ಕತ್ತಲೆ ಕವಿದಂತಾಯಿತು; ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸಲಾರಂಭಿಸಿದನು.


ಅವರು ಬೆಳೆದು ದೊಡ್ಡವರಾಗುವವರೆಗೂ ಮದುವೆಯಾಗದೆ ಇರುವಿರೋ? ಬೇಡ, ಮಕ್ಕಳೇ, ಸರ್ವೇಶ್ವರ ನನ್ನ ಕೈ ಬಿಟ್ಟಿದ್ದಾರೆ, ನಿಮಗಾಗಿ ನಾನು ಬಹಳ ವಿಷಾದಿಸುತ್ತೇನೆ,” ಎಂದು ಸಮಾಧಾನ ಹೇಳಿದಳು.


ಈಗಲಾದರೂ ಆ ದುರಿತಗಳಿಂದ ನೀನೇ ಧೃತಿಗೆಟ್ಟಿರುವೆ ಅವು ನಿನಗೆ ತಗಲಿ ನೀನೇ ತಲ್ಲಣಗೊಂಡಿರುವೆ!


ಹೌದು ದಿನವಿಡೀ, ಪದೇ ಪದೇ ಕೈಮಾಡುತ್ತಾ ಬಂದಿಹನು ನನ್ನ ಮೇಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು