Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:22 - ಕನ್ನಡ ಸತ್ಯವೇದವು C.L. Bible (BSI)

22 ದೇವರಂತೆ ನೀವೂ ನನ್ನನು ದಂಡಿಸುವುದೇಕೆ? ನನ್ನನ್ನು ಛಿನ್ನಪನ್ನವಾಗಿಸಿದ್ದೀರಿ, ಇದು ಸಾಲದೆ ನಿಮಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದೇವರ ಹಾಗೆ ನೀವೂ ನನ್ನನ್ನು ಏಕೆ ಹಿಂಸಿಸುತ್ತೀರಿ? ನನ್ನನ್ನು ಹಿಂಸಿಸಿ ನಿಮಗೆ ಸಾಕಾಗಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದೇವರ ಹಾಗೆ ನೀವೂ ನನ್ನನ್ನು ಏಕೆ ಹಿಂಸಿಸುತ್ತೀರಿ? ನನ್ನನ್ನು ತಿಂದು ತಿಂದು ನಿಮಗೆ ಸಾಕಾಗಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರು ಹಿಂಸಿಸುವಂತೆ ನೀವೂ ನನ್ನನ್ನು ಯಾಕೆ ಹಿಂಸಿಸುತ್ತೀರಿ? ನೀವು ಹಿಂಸೆಪಡಿಸಿದ್ದು ಸಾಕಾಗಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ದೇವರಂತೆ ನೀವು ನನ್ನನ್ನು ಏಕೆ ಹಿಂಸಿಸುತ್ತೀರಿ? ನನಗೆ ತೊಂದರೆಪಡಿಸಿದ್ದು ಸಾಲದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:22
14 ತಿಳಿವುಗಳ ಹೋಲಿಕೆ  

ನೀ ಗಾಯಪಡಿಸಿದವರನು ಪೀಡಿಸುತಿಹರು I ಗಾಯದ ಮೇಲೆ ಬರೆಯೆಳೆಯುತಿಹರು II


ನನ್ನ ಪ್ರಜೆಯ ಮೈ ಚರ್ಮವನ್ನು ಸುಲಿಯುವುದಲ್ಲದೆ ಅವರ ಎಲುಬುಗಳನ್ನು ಮುರಿದುಹಾಕುತ್ತೀರಿ. ಹಂಡೆಯಲ್ಲಿನ ತುಂಡುಗಳಂತೆ, ಆವಿಗೆಯಲ್ಲಿನ ಮಾಂಸದ ಚೂರುಗಳಂತೆ ನನ್ನ ಪ್ರಜೆಯನ್ನು ಚೂರುಚೂರಾಗಿ ಕತ್ತರಿಸಿಹಾಕಿದ್ದೀರಿ.


ಕೊಡುವೆ ಆ ಕೋಪದ ಕೊಡವನು ನಿನ್ನನು ಶೋಷಿಸಿದವರಿಗೆ ‘ನಾವು ತುಳಿದು ಹಾದುಹೋಗುವಂತೆ ನೆಲಕಚ್ಚಿ ಬೀಳು ಕೆಳಗೆ’ ಎಂದು ನಿಮ್ಮ ಬೆನ್ನನೆ ನೆಲವಾಗಿಸಿ, ಬೀದಿಕಸವನ್ನಾಗಿಸಿದವರಿಗೆ.”


‘ಆತ ಬಡಿಸಿದ ಭೋಜನದಿಂದ ತೃಪ್ತರಾಗದವರು ಎಲ್ಲಾದರೂ ಉಂಟೆ?’ ಎಂದು ನನ್ನ ಗುಡಾರದ ಆಳುಗಳೇ ಹೇಳಿಕೊಳ್ಳುತ್ತಿದ್ದರಲ್ಲವೆ?


ದೇವರು ನನ್ನನ್ನೊಪ್ಪಿಸಿಬಿಟ್ಟಿದ್ದಾನೆ ತುಂಟರಿಗೆ ನನ್ನನ್ನು ಎಸೆದುಬಿಟ್ಟಿದ್ದಾನೆ ದುಷ್ಟರ ಕೈಗೆ.


ಗಾಳಿಗೆ ತೂರುವ ತರಗೆಲೆಯನ್ನು ಬೆದರಿಸುವೆಯಾ? ಒಣಗಿದ ಹೊಟ್ಟನ್ನು ಬೆನ್ನಟ್ಟಿಹೋಗುವೆಯಾ?


ನಾನು ತಲೆಯೆತ್ತಿದರೆ ಬೇಟೆಯಾಡುವೆ ನನ್ನನ್ನು ಸಿಂಹದಂತೆ ಮತ್ತೆ ನಿನ್ನ ಶಕ್ತಿ ಸಾಮರ್ಥ್ಯವನ್ನು ನನ್ನ ಮೇಲೆ ಪ್ರಯೋಗಿಸುವೆ.


ನೀವೀಗ ಕೈಚಾಚಿ ಯೋಬನ ಮೂಳೆಮಾಂಸಗಳನ್ನು ಮುಟ್ಟಿನೋಡಿ; ಅವನು ನಿಮ್ಮ ಮುಖದೆದುರಿಗೇ ನಿಮ್ಮನ್ನು ದೂಷಿಸುತ್ತಾನೋ ಇಲ್ಲವೋ ನೀವೇ ನೋಡುವಿರಂತೆ,” ಎಂದನು.


ನೀನೇಕೆ ನನಗೆ ವಿಮುಖನಾಗಿರುವೆ? ನನ್ನನ್ನೇಕೆ ಶತ್ರು ಎಂದೆಣಿಸುವೆ?


ನನಗೆ ಅನ್ಯಾಯವಾಗಿರುವುದು ದೇವರಿಂದಲೇ ನನ್ನ ಸುತ್ತಲು ಬಲೆಯೊಡ್ಡಿರುವವನು ಆತನೇ! ನಾನು ಹೇಳುವ ಈ ಮಾತು ತಿಳಿದಿರಲಿ ನಿಮಗೆ:


‘ಅವನನ್ನು ಆದಷ್ಟೂ ಹಿಂಸೆಮಾಡೋಣ ಅವನ ದುರ್ಗತಿಗೆ ಮೂಲಕಾರಣ ಹುಡುಕೋಣ’ ಎಂದು ನೀವು ಆಡಿಕೊಳ್ಳುವ ಕಾರಣ.


ನನಗೆ ನೀನು ಕ್ರೂರನಾಗಿಬಿಟ್ಟಿರುವೆ ನಿನ್ನ ಭುಜಬಲದಿಂದ ಹಿಂಸಿಸುತ್ತಿರುವೆ.


ದಂಡನೆ ಮೇಲೆ ದಂಡನೆಯನು ಅವರಿಗೆ ವಿಧಿಸು I ಅವರು ನಿರಪರಾಧಿಗಳೆಂಬುದನು ತಪ್ಪಿಸು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು