Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:26 - ಕನ್ನಡ ಸತ್ಯವೇದವು C.L. Bible (BSI)

26 ನನ್ನ ಚರ್ಮ ಹೀಗೆ ಬಿರಿದು ಹಾಳಾದರೂ ದೇಹಧಾರಿಯಾಗಿಯೇ ನಾನು ನೋಡುವೆನು ದೇವರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ, ದೇಹಧಾರಿಯಾಗಿ ದೇವರನ್ನು ನೋಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ ನಿರ್ದೇಹನಾಗಿ ದೇವರನ್ನು ನೋಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನನ್ನ ಚರ್ಮವು ನಾಶವಾದ ಮೇಲೆಯೂ ನಾನು ಈ ದೇಹದಲ್ಲಿ ದೇವರನ್ನು ನೋಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನನ್ನ ಚರ್ಮವು ಬಿರಿದು ಹಾಳಾದ ಬಳಿಕವೂ, ನಾನು ದೇಹದಾರಿಯಾಗಿಯೇ ದೇವರನ್ನು ನೋಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:26
9 ತಿಳಿವುಗಳ ಹೋಲಿಕೆ  

ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು.


ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ.


ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು I ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು II


ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ.


ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II


ಅವರು ಸಮಸ್ತವನ್ನು ಸ್ವಾಧೀನಪಡಿಸಿಕೊಳ್ಳುವರು; ನಶ್ವರವಾದ ನಮ್ಮ ದೀನದೇಹಗಳನ್ನು ತಮ್ಮ ಶಕ್ತಿಯಿಂದ ರೂಪಾಂತರಗೊಳಿಸಿ ತಮ್ಮ ತೇಜೋಮಯ ಶರೀರದಂತೆ ಮಾಡುವರು.


ಏಕೆಂದರೆ, ಅಳಿದುಹೋಗುವ ಶರೀರ ಅಮರತ್ವವನ್ನು ಧರಿಸಲೇಬೇಕು. ಮರ್ತ್ಯವಾದ ಶರೀರ ಅಮರತ್ವವನ್ನು ಧರಿಸಲೇಬೇಕು.


ಇದು ಕಾರಣ ಹರ್ಷದಿಂದಿದೆ ಎನ್ನಯ ಹೃದಯ I ಆನಂದಗೊಂಡಿದೆ ಮನ, ಸುರಕ್ಷಿತವಿದೆ ಕಾಯ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು