Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:3 - ಕನ್ನಡ ಸತ್ಯವೇದವು C.L. Bible (BSI)

3 ಈವರೆಗೆ ನನಗೆ ಕೇಡು ಮಾಡಿದ್ದಕ್ಕೆ ಹತ್ತಾರು ಸಾರಿ ನನ್ನನ್ನು ಅವಮಾನಿಸಿದ್ದಕ್ಕೆ ನಿಮಗಾಗುವುದಿಲ್ಲವೆ ನಾಚಿಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಈವರೆಗೆ ಹತ್ತಾರು ಸಾರಿ ನನ್ನನ್ನು ಅವಮಾನಪಡಿಸಿ ನನಗೆ ಕೇಡುಮಾಡುತ್ತಿರುವುದಕ್ಕೆ ನಿಮಗೆ ನಾಚಿಕೆಯಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಈವರೆಗೆ ಹತ್ತಾರು ಸಾರಿ ನನ್ನನ್ನು ಅವಮಾನಪಡಿಸಿ ನನಗೆ ಕೇಡುಮಾಡುತ್ತಿರುವದಕ್ಕೆ ನಿಮಗೆ ನಾಚಿಕೆಯಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇದುವರೆಗೆ ನೀವು ನನ್ನನ್ನು ಹತ್ತಾರು ಸಲ ಅವಮಾನ ಮಾಡಿರುವಿರಿ. ನೀವು ನಾಚಿಕೆಯಿಲ್ಲದೆ ನನ್ನನ್ನು ಎದುರಿಸುತ್ತೀರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಈಗ ಹತ್ತು ಸಾರಿ ನನ್ನನ್ನು ನಿಂದಿಸಿದ್ದೀರಿ; ನಾಚಿಕೆಯಿಲ್ಲದೆ ನೀವು ನನ್ನ ಮೇಲೆ ಆಕ್ರಮಣ ಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:3
19 ತಿಳಿವುಗಳ ಹೋಲಿಕೆ  

ನಿಮ್ಮ ತಂದೆಯಾದರೋ ನನಗೆ ಮೋಸಮಾಡಿ ಹತ್ತು ಸಾರಿ ನನ್ನ ಸಂಬಳವನ್ನು ಬದಲಾಯಿಸಿದ್ದಾರೆ. ಅವರಿಂದ ನನಗೆ ಕೇಡಾಗದಂತೆ ದೇವರೇ ನೋಡಿಕೊಂಡರು.


ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಎಲ್ಲ ವಿಷಯಗಳಲ್ಲಿ ಅವರನ್ನು ವಿಚಾರಮಾಡಿದಾಗ ಸಮಸ್ತರಾಜ್ಯದಲ್ಲಿನ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.


ನನ್ನವರಿಗೇ ನಾನನ್ಯನಾದೆನಯ್ಯಾ I ಒಡ ಹುಟ್ಟಿದವರಿಗೇ ಹೊರಗಿನವನಾದೆನಯ್ಯಾ II


ನನ್ನುಸಿರು ನನ್ನ ಧರ್ಮಪತ್ನಿಗೆ ಅಸಹ್ಯವಾಗಿದೆ ನನ್ನ ಹೊಟ್ಟೆಯಲ್ಲಿ ಹುಟ್ಟಿದ ಮಕ್ಕಳಿಗೇ ಹೇಸಿಕೆಯಾದೆ.


ಅವರ ನೆರೆಯೂರುಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರು ಬಂದು, “ನೀವು ಯಾವ ಕಡೆಗೆ ತಿರುಗಿಕೊಂಡರೂ ಆ ಎಲ್ಲಾ ಕಡೆಗಳಿಂದ ನಮಗೆ ವಿರೋಧವಾಗಿ ಯುದ್ಧಕ್ಕೆ ಬರುತ್ತಾರೆ,” ಎಂದು ಪದೇ ಪದೇ ತಿಳಿಸುತ್ತಿದ್ದರು.


ನಿನ್ನ ಕೈಯಿಂದ ದೂರವಿರಲಿ ಅಕ್ರಮ ನಿನ್ನ ಗುಡಾರದಲಿ ನೆಲಸದಿರಲಿ ಅನ್ಯಾಯ.


ನಿನ್ನ ವಾಕ್ ಚಮತ್ಕಾರಕ್ಕೆ ಜನ ಬಾಯಿಮುಚ್ಚಿಕೊಳ್ಳಬೇಕೆ? ನಿನ್ನ ಕುಚೋದ್ಯಕ್ಕೆ ನಿನಗಾಗಬೇಡವೆ ನಾಚಿಕೆ?


ಈಜಿಪ್ಟ್ ದೇಶದಲ್ಲೂ ಮರುಭೂಮಿಯಲ್ಲೂ ನಾನು ಮಾಡಿದ ಮಹತ್ಕಾರ್ಯಗಳನ್ನು ಹಾಗೂ ನನ್ನ ಅಸ್ತಿತ್ವದ ತೇಜಸ್ಸನ್ನು ಈ ಮಾನವರೆಲ್ಲರೂ ನೋಡಿದ್ದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ. ಬದಲಿಗೆ ನನ್ನನ್ನು ಪದೇ ಪದೇ ಪರೀಕ್ಷಿಸಿದ್ದಾರೆ.


ನಿಮ್ಮ ನಿಮ್ಮ ಜೀವನಾಧಾರವನ್ನು ನಾನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು, ಅದನ್ನು ಪಡಿ ಪ್ರಕಾರ ಹಂಚಿಕೊಡುವರು. ನೀವು ಅದನ್ನು ತಿಂದರೂ ತೃಪ್ತಿಯಾಗದು.


ಜೋಸೆಫನು ಅವರನ್ನು ನೋಡಿದಕೂಡಲೆ ಗುರುತುಹಿಡಿದನು. ಆದರೂ ಅವರ ಪರಿಚಯ ಇಲ್ಲದವನಂತೆ ಬಿರುಬುಡಿಯಿಂದ, “ನೀವು ಎಲ್ಲಿಯವರು?” ಎಂದು ಕೇಳಿದನು. ಅವರು, “ನಾವು ಧಾನ್ಯ ಕೊಂಡುಕೊಳ್ಳುವುದಕ್ಕಾಗಿ ಕಾನಾನ್ ನಾಡಿನಿಂದ ಬಂದವರು,” ಎಂದು ಹೇಳಿದರು.


“ಇನ್ನೆಷ್ಟರವರೆಗೆ ನೀವು ನನ್ನನ್ನು ನೋಯಿಸುವಿರಿ? ನಿಮ್ಮ ಮಾತುಗಳಿಂದ ನನ್ನನು ನಸುಕುತ್ತಿರುವಿರಿ?


ನಿಶ್ಚಯವಾಗಿ ನಾನು ತಪ್ಪುಳ್ಳವನಾದರೆ ಅದರಿಂದ ನಿಮಗೇನು? ಆ ತಪ್ಪು ನನ್ನದೆ.


ನನಗೆ ಅವಮಾನ ತರುವ ನಿನ್ನ ಖಂಡನೆಯನು ಕೇಳಿದ್ದೇನೆ ನನ್ನ ಮನ ತನ್ನ ವಿವೇಚನೆ ಕಲಿಸಿದ ಉತ್ತರವನು ತಿಳಿಸುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು