Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:6 - ಕನ್ನಡ ಸತ್ಯವೇದವು C.L. Bible (BSI)

6 ನನಗೆ ಅನ್ಯಾಯವಾಗಿರುವುದು ದೇವರಿಂದಲೇ ನನ್ನ ಸುತ್ತಲು ಬಲೆಯೊಡ್ಡಿರುವವನು ಆತನೇ! ನಾನು ಹೇಳುವ ಈ ಮಾತು ತಿಳಿದಿರಲಿ ನಿಮಗೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗಾದರೆ ನನ್ನ ನ್ಯಾಯವನ್ನು ತಿರುಗಿಸಿಬಿಟ್ಟು ನನ್ನ ಸುತ್ತಲೂ ತನ್ನ ಬಲೆಯನ್ನೊಡ್ಡಿದವನು ದೇವರೇ ಎಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗಾದರೆ ನನ್ನ ನ್ಯಾಯವನ್ನು ತಿರುಗಿಸಿಬಿಟ್ಟು ನನ್ನ ಸುತ್ತಲೂ ತನ್ನ ಬಲೆಯನ್ನೊಡ್ಡಿದವನು ದೇವರೇ ಎಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ನನ್ನನ್ನು ದೋಷಿಯೋ ಎಂಬಂತೆ ಮಾಡಿದಾತನು ದೇವರೇ. ಆತನು ನನಗೆ ವಿರೋಧವಾಗಿ ಬಲೆಯನ್ನು ಒಡ್ಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರಿಂದಲೇ ನನಗೆ ಅನ್ಯಾಯವಾಗಿದೆ; ದೇವರು ತಮ್ಮ ಬಲೆಯನ್ನು ನನ್ನ ಮೇಲೆ ಬೀಸಿದ್ದಾರೆಂದು ನಿಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:6
18 ತಿಳಿವುಗಳ ಹೋಲಿಕೆ  

ಅವರು ಹೋಗುವಾಗ ನನ್ನ ಬಲೆಯನ್ನು ಅವರ ಮೇಲೆ ಬೀಸುವೆನು. ಆಕಾಶದ ಪಕ್ಷಿಗಳಂತೆ ಅವರನ್ನು ಕೆಳಕ್ಕೆ ಎಳೆದುಬಿಡುವೆನು. ಅವರ ದುಷ್ಕೃತ್ಯಗಳಿಗನುಸಾರ ಅವರನ್ನು ದಂಡಿಸುವೆನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಗುಂಪಾಗಿ ಕೂಡಿದ ಬಹುಜನಾಂಗಗಳ ಕೈಯಿಂದ, ನಾ ನಿನ್ನ ಮೇಲೆ ಬೀಸುವೆ ಬಲೆಯೊಂದ.


ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು: ಬಾಬಿಲೋನಿಯಾ ದೇಶದ ಬಾಬಿಲೋನ್ ನಗರಕ್ಕೆ ಅವನನ್ನು ಒಯ್ಯುವೆನು; ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡನು.


“ನನಗೆ ನ್ಯಾಯ ದೊರಕಿಸದ ಜೀವಂತ ದೇವರಾಣೆ, ನನ್ನ ಮನಸ್ಸನು ಕಹಿಯಾಗಿಸಿದ ಸರ್ವಶಕ್ತನಾಣೆ.


ನರಮಾನವರ ಮೇಲೆ ಬೆಂಗಾವಲಿರುವವನೇ, ಭಾರವಾಗಿರುವೆನು ನನಗೆ ನಾನೇ. ನಾನು ಪಾಪಮಾಡಿದ್ದಾದರೂ ನಿನಗೇನು ಮಾಡಿದೆ? ನನ್ನನ್ನೇಕೆ ನಿನ್ನ ಹೊಡೆತಕ್ಕೆ ಗುರಿಪಡಿಸಿದೆ?


“ಜೆರುಸಲೇಮ್ ಪಟ್ಟಣವನ್ನು ಸೈನ್ಯಗಳು ಸುತ್ತುಗಟ್ಟುತ್ತಿರುವುದನ್ನು ನೀವು ಕಾಣುವಾಗ ಅದರ ವಿನಾಶ ಸಮೀಪಿಸಿತೆಂದು ತಿಳಿದುಕೊಳ್ಳಿ.


ಬೆಳಕು ಏತಕೆ ದಾರಿ ಮುಚ್ಚಿರುವವನಿಗೆ? ತನ್ನ ಸುತ್ತಲೂ ದೇವರೆ ಬೇಲಿಹಾಕಿರುವವನಿಗೆ?


ದಯಮಾಡಿ ಮತ್ತೆ ಆಲೋಚಿಸಿರಿ ಅನ್ಯಾಯವಾಗದಂತೆ ಮರಳಿ ವಿಮರ್ಶಿಸಿರಿ ನನ್ನ ಸತ್ಯತೆ ತಿಳಿಯುವಂತೆ.


ದುರುಳರ ಯೋಜನೆಯನು ನೀನು ಪುರಸ್ಕರಿಸಬಹುದೆ? ನಿನ್ನ ಕೈಕೃತಿಯಾದ ನನ್ನನು ತಿರಸ್ಕರಿಸಿ ಬಾಧಿಸುವುದು ಸರಿಯೆ?


ದೇವರಂತೆ ನೀವೂ ನನ್ನನು ದಂಡಿಸುವುದೇಕೆ? ನನ್ನನ್ನು ಛಿನ್ನಪನ್ನವಾಗಿಸಿದ್ದೀರಿ, ಇದು ಸಾಲದೆ ನಿಮಗೆ?


ನನಗೆ ನೀನು ಕ್ರೂರನಾಗಿಬಿಟ್ಟಿರುವೆ ನಿನ್ನ ಭುಜಬಲದಿಂದ ಹಿಂಸಿಸುತ್ತಿರುವೆ.


ಏನು, ನನ್ನ ನಿರ್ಣಯವನ್ನು ನೀನು ಖಂಡಿಸುತ್ತೀಯೋ? ನೀನು ನಿರ್ದೋಷಿಯೆನಿಸಿಕೊಳ್ಳಲು ನನ್ನನ್ನು ದೋಷಿಯನ್ನಾಗಿಸುತ್ತೀಯೋ?


ಅನ್ಯಾಯವಾದ ತೀರ್ಪನು ಕೊಡುತ್ತಾನೆಯೆ ದೇವರು? ಸತ್ಯವನ್ನು ಡೊಂಕುಮಾಡುತ್ತಾನೆಯೆ ಸರ್ವಶಕ್ತನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು