Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:7 - ಕನ್ನಡ ಸತ್ಯವೇದವು C.L. Bible (BSI)

7 ‘ಇದೋ ಹಿಂಸಾಚಾರ’ ಎಂದು ನಾನು ಕೂಗಿಕೊಂಡರೂ ಕೇಳುವವರಿಲ್ಲ ನಾನು ಮೊರೆಯಿಟ್ಟರೂ ನನಗೆ ನ್ಯಾಯ ದೊರಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಗೋ, ಬಲಾತ್ಕಾರವೆಂದು ನಾನು ಕೂಗಿಕೊಂಡರೂ, ಯಾವ ಉತ್ತರವೂ ಇಲ್ಲ. ನಾನು ಮೊರೆಯಿಟ್ಟರೂ, ನ್ಯಾಯವು ನೆರವೇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಗೋ, ಬಲಾತ್ಕಾರವೆಂದು ನಾನು ಕೂಗಿಕೊಂಡರೂ ಯಾವ ಉತ್ತರವೂ ಇಲ್ಲ. ನಾನು ಮೊರೆಯಿಟ್ಟರೂ ನ್ಯಾಯವು ನೆರವೇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ‘ನನಗೆ ಹಿಂಸೆಯಾಗುತ್ತಿದೆ’ ಎಂದು ಕೂಗಿಕೊಂಡರೂ ನನಗೆ ಯಾರೂ ಉತ್ತರ ಕೊಡುತ್ತಿಲ್ಲ. ನಾನು ಸಹಾಯಕ್ಕಾಗಿ ಗಟ್ಟಿಯಾಗಿ ಕೂಗಿಕೊಂಡರೂ ನ್ಯಾಯ ದೊರೆಯುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ ‘ಹಿಂಸೆ,’ ಎಂದು ನಾನು ಕೂಗಿಕೊಂಡರೂ ನನಗೆ ಉತ್ತರ ಕೊಡುವವರಿಲ್ಲ; ಗಟ್ಟಿಯಾಗಿ ಮೊರೆಯಿಟ್ಟರೂ ನ್ಯಾಯ ದೊರಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:7
20 ತಿಳಿವುಗಳ ಹೋಲಿಕೆ  

ಎಷ್ಟೋ ಮೊರೆಯಿಟ್ಟು ಕೂಗಿಕೊಂಡೆ. ಕಿವಿಗೊಡಲಿಲ್ಲ ಆತ ನನ್ನ ಮೊರೆಗೆ.


ಏನು, ನನ್ನ ನಿರ್ಣಯವನ್ನು ನೀನು ಖಂಡಿಸುತ್ತೀಯೋ? ನೀನು ನಿರ್ದೋಷಿಯೆನಿಸಿಕೊಳ್ಳಲು ನನ್ನನ್ನು ದೋಷಿಯನ್ನಾಗಿಸುತ್ತೀಯೋ?


ಇಂತಿದೆ ಯೋಬನ ವಾದ - ‘ನಾನು ಸತ್ಯವಂತ ನನಗೆ ದೇವರಿಂದ ನ್ಯಾಯ ದೊರೆತಿಲ್ಲ.


ದೇವರೇ, ನಾನು ಮೊರೆಯಿಟ್ಟರೂ ಉತ್ತರಕೊಡದಿರುವೆ ನಾನೆದ್ದು ನಿಂತರೂ ನೀನು ಸುಮ್ಮನೆ ನೋಡುತ್ತಿರುವೆ.


ಕೇಳಿ, ನಿಮ್ಮ ಆಲೋಚನೆಗಳನು ನಾನು ಬಲ್ಲೆ ನನಗೆ ವಿರುದ್ಧ ನೀವು ಮಾಡುವ ಕುಯುಕ್ತಿ ನನಗೆ ತಿಳಿದಿದೆ.


ನನ್ನ ಮಾತೆಲ್ಲ ಅರಚಾಟ ‘ಹಿಂಸಾಚಾರ, ಕೊಳ್ಳೆ’ ಇವೇ ನನ್ನ ಕೂಗಾಟ. ಸರ್ವೇಶ್ವರನ ವಾಕ್ಯವನ್ನು ನಾನು ಸಾರಿದೆ ಜನರ ನಿಂದೆ ಪರಿಹಾಸ್ಯಕ್ಕೆ ಗುರಿಯಾದೆ.


ಹಗಲೆಲ್ಲ ಕೂಗಿಕೊಂಡರೂ ನೀ ಬರಲಿಲ್ಲವಲ್ಲಾ I ಇರುಳೆಲ್ಲಾ ಮೊರೆಯಿಟ್ಟರೂ ನೆಮ್ಮದಿಯಿಲ್ಲವಲ್ಲಾ II


ಇದು ನನಗೆ ನ್ಯಾಯ ದೊರಕಿಸಲಿ, ದೇವರ ಮುಂದೆ ತನ್ನ ಮಿತ್ರನಿಗಾಗಿ ಒಬ್ಬನು ವಾದಿಸುವಂತೆ.


ದುರುಳರ ಯೋಜನೆಯನು ನೀನು ಪುರಸ್ಕರಿಸಬಹುದೆ? ನಿನ್ನ ಕೈಕೃತಿಯಾದ ನನ್ನನು ತಿರಸ್ಕರಿಸಿ ಬಾಧಿಸುವುದು ಸರಿಯೆ?


ದೇವರು ನನ್ನಂಥ ನರನಲ್ಲ, ನಾನಾತನಿಗೆ ಉತ್ತರಿಸಲು ನಾವಿಬ್ಬರೂ ನ್ಯಾಯಾಲಯದಲ್ಲಿ ಕೂಡಿ ವಾದಿಸಲು.


ದೇಶವು ದುರುಳರ ಕೈವಶವಾಗಿದ್ದರೂ ನ್ಯಾಯಾಧೀಶರ ಮುಖಕ್ಕೆ ಮುಸುಕುಹಾಕುತ್ತಾನೆ. ಇದನ್ನು ಮಾಡುವವರು ದೇವರಲ್ಲದೆ ಮತ್ತೆ ಯಾರು?


ಆದರೂ ಕೇಡಿಗೆ ಈಡಾದವನು ಕೈಚಾಚುವುದಿಲ್ಲವೆ ಸಹಾಯಕ್ಕಾಗಿ? ಆಪತ್ತಿಗೆ ಗುರಿಯಾದವನು ಕೂಗಿಕೊಳ್ಳುವುದಿಲ್ಲವೆ ನೆರವಿಗಾಗಿ?


ಸಂತೈಸುವ ಸೂರ್ಯನಿಲ್ಲದೆ ಅಲೆಯುತ್ತಿರುವೆ ಮಂಕು ಕವಿದು ಅಂಗಲಾಚುತ್ತಿರುವೆ ಸಭೆಯ ಮಧ್ಯೆ ನಿಂತು.


ಆದರೂ ದೇವಾ, ನೀನಂತು ಪರಮಪೂಜ್ಯನು I ಇಸ್ರಯೇಲರ ಸ್ತುತ್ಯ ಸಿಂಹಾಸನದಲಿ ಆಸೀನನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು