Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:8 - ಕನ್ನಡ ಸತ್ಯವೇದವು C.L. Bible (BSI)

8 ನಾನು ಮುಂದೆ ಹೋಗದಂತೆ ದೇವರು ಅಡ್ಡಗೋಡೆ ಹಾಕಿದ್ದಾನೆ ನನ್ನ ಹಾದಿಗೆ ಕತ್ತಲೆ ಕವಿಯುವಂತೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಮುಂದೆ ಹೋಗದ ಹಾಗೆ ಆತನು ನನ್ನ ದಾರಿಗೆ ಅಡ್ಡಗೋಡೆ ಹಾಕಿ, ನನ್ನ ಹಾದಿಗಳನ್ನು ಕತ್ತಲು ಕವಿಯುವಂತೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಮುಂದೆ ಹೋಗದ ಹಾಗೆ ಆತನು ನನ್ನ ದಾರಿಗೆ ಅಡ್ಡಗೋಡೆ ಹಾಕಿ ನನ್ನ ಹಾದಿಗಳನ್ನು ಕತ್ತಲು ಕವಿಯುವಂತೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರು ನನ್ನ ಮಾರ್ಗವನ್ನು ಮುಚ್ಚಿಬಿಟ್ಟಿದ್ದಾನೆ; ಆದ್ದರಿಂದ ನಾನು ಮುಂದೆ ಹೋಗಲಾರೆ. ಆತನು ನನ್ನ ಮಾರ್ಗವನ್ನು ಕತ್ತಲೆಯಲ್ಲಿ ಮರೆಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಮುಂದೆ ಹೋಗದಂತೆ ದೇವರು ನನ್ನ ದಾರಿಗೆ ಬೇಲಿ ಹಾಕಿದ್ದಾರೆ; ನನ್ನ ಹಾದಿಗಳನ್ನು ಕತ್ತಲು ಕವಿಯುವಂತೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:8
16 ತಿಳಿವುಗಳ ಹೋಲಿಕೆ  

ಬೆಳಕು ಏತಕೆ ದಾರಿ ಮುಚ್ಚಿರುವವನಿಗೆ? ತನ್ನ ಸುತ್ತಲೂ ದೇವರೆ ಬೇಲಿಹಾಕಿರುವವನಿಗೆ?


ನಾನು ಹೊರಗಡೆ ಹೋಗದಂತೆ ಗೋಡೆಯೆಬ್ಬಿಸಿರುವನು, ಭಾರವಾದ ಬೇಡಿಗಳನ್ನು ನನಗೆ ತೊಡಿಸಿರುವನು.


ನನ್ನ ದಾರಿಗೆ ಅಡ್ಡವಾಗಿ ನೆಟ್ಟಿರುವನು ಮೊನಚು ಕಲ್ಲುಗಳನ್ನು, ಡೊಂಕು ಡೊಂಕು ಮಾಡಿರುವನು ನನ್ನ ಹಾದಿಯನ್ನು.


ಆಪ್ತರೂ ಹೇಸಿ ದೂರಸರಿವಂತೆ ಮಾಡಿರುವೆ I ಬಂಧಿತನಾದ ನಾನು ಬಿಡಿಸಿಕೊಳ್ಳಲಾಗದಿರುವೆ II


ಆದುದರಿಂದ ನಾನು ಅವಳ ದಾರಿಗೆ ಮುಳ್ಳುಬೇಲಿಹಾಕುವೆನು. ಇಷ್ಟಬಂದ ದಾರಿಯನ್ನು ಹಿಡಿಯದಂತೆ ಅವಳ ಮುಂದೆ ಅಡ್ಡಗೋಡೆಯನ್ನು ಎಬ್ಬಿಸುವೆನು.


ದುರ್ಜನರ ಮಾರ್ಗ ಕಗ್ಗತ್ತಲಿನ ಹಾಗೆ, ಎಡವಿಬಿದ್ದ ಸ್ಥಳವೇ ತಿಳಿಯದು ಅವರಿಗೆ.


ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ಕತ್ತಲೊಳು ಜಾರಿಬೀಳುವ ಇಳುಮೇಡು ಅವರ ಮಾರ್ಗ ತಳ್ಳಲ್ಪಡುವರು, ಅಂಧಕಾರದೊಳು ಬಿದ್ದುಹೋಗುವರು ಕೇಡನ್ನು ಅವರ ಮೇಲೆ ಬರಮಾಡುವೆನು ವಿಚಾರಣೆ ವರುಷದ ಕೇಡನ್ನು ಬರಮಾಡುವೆನು ಸರ್ವೇಶ್ವರನ ನುಡಿ ಇದು.”


ನಿಮ್ಮ ದೇವರಾದ ಸರ್ವೇಶ್ವರನಿಗೆ ಸಲ್ಲಿಸಿ ಗೌರವವನ್ನು ಇಲ್ಲವಾದರೆ ಆತ ಬರಮಾಡುವನು ಸ್ವಲ್ಪಕಾಲದಲ್ಲೇ ಕತ್ತಲನ್ನು. ನಿಮ್ಮ ಕಾಲುಗಳು ಮುಗ್ಗರಿಸುವುವು ಮಬ್ಬಿನ ಗುಡ್ಡಗಳ ನಡುವೆ.


ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.


ನಾನು ಒಳಿತನು ನಿರೀಕ್ಷಿಸಿದಾಗ ಕೇಡು ಬಂದೊದಗಿತು ಬೆಳಕನು ಎದುರು ನೋಡುವಾಗ ಕತ್ತಲು ಕವಿಯಿತು.


ಆಗ ನಿಮ್ಮ ಪೂರ್ವಜರು ನನಗೆ ಮೊರೆಯಿಟ್ಟರು. ನಾನು ಅವರಿಗೂ ಈಜಿಪ್ಟಿನವರಿಗೂ ಮಧ್ಯೆ ಕಾರ್ಗತ್ತಲೆಯನ್ನು ಉಂಟುಮಾಡಿದೆ. ಇದಲ್ಲದೆ ಈಜಿಪ್ಟಿನವರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಳುಗಿಸಿಬಿಟ್ಟೆ. ನಾನು ಈಜಿಪ್ಟಿನಲ್ಲಿ ಏನೇನು ಮಾಡಿದೆನೆಂಬುದಕ್ಕೆ ನೀವೇ ಸಾಕ್ಷಿಗಳು.


ನನ್ನ ವಿನಾಶಕ್ಕೆ ಈ ಅಂಧಕಾರವು ನಿಮಿತ್ತವಲ್ಲ ನನ್ನ ಮುಖಕ್ಕೆ ಕವಿದಿರುವ ಈ ಕಾರ್ಗತ್ತಲು ಕಾರಣವಲ್ಲ.


ನನ್ನನ್ನು ಹಿಡಿದು ಬಂದಿಸಿರುವನು ದಿಬ್ಬಗಳ ಮಧ್ಯೆ ಸುತ್ತುಗಟ್ಟಿರುವನು ಕಷ್ಟಸಂಕಟಗಳ ನಡುವೆ.


ಆಗ ಜನರು ಹೀಗೆನ್ನುತ್ತಾರೆ : ಈ ಕಾರಣದಿಂದಲೇ ನ್ಯಾಯನಿರ್ಣಯವು ನಮ್ಮಿಂದ ದೂರವಾಗಿದೆ, ಸದ್ಧರ್ಮವು ನಮಗೆ ದೊರಕದೆ ಇದೆ. ಬೆಳಕಿಗಾಗಿ ಕಾದಿರುವ ನಮ್ಮನ್ನು ಕತ್ತಲು ಆವರಿಸಿದೆ. ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಮ್ಮನ್ನು ಅಂಧಕಾರವೇ ಬೆನ್ನಟ್ಟುತ್ತಿದೆ.


ಅವಳಿಗೆ ದವಸಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಕೊಟ್ಟವನು ನಾನೇ ಎಂಬುದನ್ನು ಅರಿತುಕೊಳ್ಳದೆಹೋದಳು. ನಾನು ಧಾರಾಳವಾಗಿ ಕೊಟ್ಟ ಬೆಳ್ಳಿಬಂಗಾರಗಳನ್ನು ಬಾಳನ ಪೂಜೆಗೆ ಉಪಯೋಗಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು