Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:1 - ಕನ್ನಡ ಸತ್ಯವೇದವು C.L. Bible (BSI)

1 ಸ್ವರ್ಗನಿವಾಸಿಗಳು ಇನ್ನೊಂದು ದಿನ ಸರ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಓಲಗಿಸಿದ್ದರು. ಸೈತಾನನು ಅವರ ಮಧ್ಯೆ ಕಾಣಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವದೂತರು ಇನ್ನೊಂದು ದಿನ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳುವುದಕ್ಕೆ ಬಂದಾಗ, ಸೈತಾನನೂ ಅವರ ಸಂಗಡ ಬಂದು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವದೂತರು ಇನ್ನೊಂದು ದಿವಸ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳುವದಕ್ಕೆ ಬಂದಾಗ ಸೈತಾನನೂ ಅವರ ಸಂಗಡ ಬಂದು ಸನ್ನಿಧಿಯಲ್ಲಿ ಕಾಣಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮತ್ತೊಂದು ದಿನ ಯೆಹೋವನನ್ನು ಭೇಟಿಯಾಗಲು ದೇವದೂತರು ಬಂದರು. ಸೈತಾನನು ಸಹ ಯೆಹೋವನನ್ನು ಭೇಟಿಯಾಗಲು ಅವರೊಂದಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇನ್ನೊಂದು ದಿನ, ದೇವದೂತರು ಯೆಹೋವ ದೇವರ ಮುಂದೆ ಒಟ್ಟಾಗಿ ಸೇರಿ ಬಂದಿದ್ದರು. ಸೈತಾನನು ಸಹ ಅವರೊಂದಿಗೆ ಯೆಹೋವ ದೇವರ ಮುಂದೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:1
9 ತಿಳಿವುಗಳ ಹೋಲಿಕೆ  

ಒಮ್ಮೆ ಸ್ವರ್ಗನಿವಾಸಿಗಳು ಸರ್ವೇಶ್ವರಸ್ವಾಮಿಯ ಸನ್ನಿಧಿಯಲ್ಲಿ ಓಲಗಿಸಿದ್ದರು. ಸೈತಾನನೂ ಅಲ್ಲಿಗೆ ಬಂದನು.


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ಆಗ ದೇವದೂತನು, “ನಾನು ದೇವರ ಸನ್ನಿಧಿಯಲ್ಲಿ ಸೇವೆಮಾಡುವ ಗಬ್ರಿಯೇಲನು; ಈ ಶುಭಸಮಾಚಾರವನ್ನು ನಿನಗೆ ತಿಳಿಸುವುದಕ್ಕಾಗಿ ದೇವರ ಅಪ್ಪಣೆಯ ಪ್ರಕಾರ ಬಂದವನು.


“ಸಿಮೋನನೇ, ಸಿಮೋನನೇ, ಕೇಳು: ಗೋದಿಯನ್ನು ತೂರುವಂತೆ ಸೈತಾನನು ನಿಮ್ಮೆಲ್ಲರನ್ನೂ ಶೋಧಿಸಲು ಅಪ್ಪಣೆ ಕೇಳಿಕೊಂಡಿದ್ದಾನೆ.


ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳು; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.


“ಎಲ್ಲಿಂದ ಬಂದೆ?” ಎಂದು ಸರ್ವೇಶ್ವರನು ಅವನನ್ನು ಕೇಳಿದರು. “ಭೂಲೋಕದಲ್ಲೆಲ್ಲಾ ಗಸ್ತು ತಿರುಗಿ ಬಂದಿದ್ದೇನೆ,” ಎಂದು ಅವನು ಉತ್ತರಕೊಟ್ಟನು.


ಆಗ ಸರ್ವೇಶ್ವರ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ಆತನಿಗೆ ಸರಿಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಗನು,” ಎಂದು ಹೇಳಿದರು.


ಭೂಮಿಗೆ ಮೂಲೆಗಲ್ಲನು ಹಾಕಿದವನಾರು? ಅದರ ಅಡಿಗಲ್ಲು ಯಾವುದರ ಮೇಲೆ ನಿಂತಿದೆ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು