Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:10 - ಕನ್ನಡ ಸತ್ಯವೇದವು C.L. Bible (BSI)

10 ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ. ದೇವರಿಂದ ನಾವು ಸುಖಪಡೆಯಬಹುದು, ದುಃಖವನ್ನು ಮಾತ್ರ ಪಡೆಯಬಾರದೊ?” ಎಂದು ಉತ್ತರಕೊಟ್ಟ. ಇಂಥ ಪರಿಸ್ಥಿತಿಯಲ್ಲೂ ಪಾಪದ ಮಾತೊಂದೂ ಅವನ ಬಾಯಿಂದ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಯೋಬನು ಆಕೆಗೆ, “ಮೂರ್ಖಳು ಮಾತನಾಡಿದಂತೆ ನೀನು ಮಾತನಾಡುತ್ತಿ. ದೇವರ ಹಸ್ತದಿಂದ ನಾವು ಒಳ್ಳೆಯದನ್ನು ಹೊಂದುವಾಗ ಕೆಟ್ಟದ್ದನ್ನು ಹೊಂದಬಾರದೋ?” ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತು ಅವನ ತುಟಿಗಳಿಂದ ಹೊರಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಯೋಬನು ಆಕೆಗೆ - ಮೂರ್ಖಳು ಮಾತಾಡಿದಂತೆ ನೀನು ಮಾತಾಡುತ್ತೀ; ದೇವರ ಹಸ್ತದಿಂದ ನಾವು ಒಳ್ಳೇದನ್ನು ಹೊಂದುತ್ತೇವಷ್ಟೆ; ಕೆಟ್ಟದ್ದನ್ನು ಹೊಂದಬಾರದೋ ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತೊಂದೂ ಅವನ ತುಟಿಗಳಿಂದ ಹೊರಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೋಬನು ತನ್ನ ಹೆಂಡತಿಗೆ, “ನೀನು ಮೂರ್ಖಳಂತೆ ಮಾತಾಡುತ್ತಿರುವೆ! ದೇವರು ಒಳ್ಳೆಯವುಗಳನ್ನು ಕೊಡುವಾಗ ನಾವು ಅವುಗಳನ್ನು ಸ್ವೀಕರಿಸಿಕೊಳ್ಳುತ್ತೇವೆ. ಆತನು ಕೆಟ್ಟದ್ದನ್ನು ಕೊಡುವಾಗ ನಾವು ಸ್ವೀಕರಿಸಿಕೊಳ್ಳಬಾರದೋ?” ಎಂದು ಉತ್ತರಕೊಟ್ಟನು. ಈ ಸಂಕಟದಲ್ಲಿಯೂ ಯೋಬನು ಪಾಪ ಮಾಡಲಿಲ್ಲ ಹಾಗೂ ದೇವರ ವಿರುದ್ಧ ಯಾವ ಮಾತನ್ನು ಆಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ? ನಾವು ದೇವರಿಂದ ಒಳ್ಳೆಯದನ್ನು ಹೊಂದಿದ್ದೇವೆ, ಕಷ್ಟವನ್ನು ಹೊಂದಬಾರದೋ?” ಎಂದನು. ಇವೆಲ್ಲವುಗಳಲ್ಲಿಯೂ ಪಾಪದ ಮಾತೊಂದೂ ಯೋಬನ ಬಾಯಿಂದ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:10
30 ತಿಳಿವುಗಳ ಹೋಲಿಕೆ  

ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.


ನಂಬಿಕೆ ನಿರೀಕ್ಷೆಯನ್ನು ಹೊಂದಿರುವ ನೀವು ಉಲ್ಲಾಸದಿಂದಿರಿ. ಸಂಕಟ ಬಂದಾಗ ಸಹನೆಯಿಂದಿರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.


ಆದರೆ ಯೇಸು ಪೇತ್ರನತ್ತ ತಿರುಗಿ, “ಸೈತಾನನೇ, ತೊಲಗಿಲ್ಲಿಂದ; ನೀನು ನನಗೆ ಅಡೆತಡೆ; ನಿನ್ನ ಈ ಆಲೋಚನೆ ಮನುಷ್ಯರದ್ದೇ ಹೊರತು, ದೇವರದಲ್ಲ,” ಎಂದರು.


ಆಗ ಯೇಸು ಪೇತ್ರನಿಗೆ, “ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು, ನನ್ನ ಪಿತನೇ ಕೊಟ್ಟಿರುವ ಕಷ್ಟದ ಕೊಡವಿದು; ಇದರಲ್ಲಿರುವುದನ್ನು ನಾನು ಕುಡಿಯದೆಹೋದರೆ ಹೇಗೆ?” ಎಂದು ನುಡಿದರು.


ಜನರ ಎಣಿಕೆ ಮಾಡಿಸಿದ ನಂತರ ದಾವೀದನನ್ನು ಮನಸ್ಸಾಕ್ಷಿ ಕಾಡತೊಡಗಿತು. ಆದುದರಿಂದ ಅವನು, “ಸರ್ವೇಶ್ವರಾ, ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ಪ್ರಾರ್ಥಿಸಿದನು.


ನಾ ಇಂತೆಂದುಕೊಂಡೆ : “ಜಾಗರೂಕನಾಗಿರುವೆ ಜಿಹ್ವೆ ಪಾಪಕ್ಕೆಳೆಯದಂತೆ I ಬಾಯಿಗೆ ಕುಕ್ಕೆ ಹಾಕಿಕೊಂಡಿರುವೆ ದುರ್ಜನರ ಮುಂದೆ” II


ನಾವೆಲ್ಲರೂ ಎಷ್ಟೋ ವಿಷಯಗಳಲ್ಲಿ ತಪ್ಪುಮಾಡುವುದುಂಟು. ತನ್ನ ಮಾತಿನಲ್ಲಿ ತಪ್ಪುಮಾಡದೆ ಪೂರ್ತಿಯಾಗಿ ತನ್ನನ್ನೇ ಸ್ವಾಧೀನದಲ್ಲಿ ಇಟ್ಟುಕೊಳ್ಳುವ ವ್ಯಕ್ತಿ ಸಿದ್ಧಪುರುಷನೇ ಹೌದು.


ಇಂಥ ಹುಚ್ಚುತನ ಬೇಡ, ಈ ಅವಮಾನವನ್ನು ಮರೆಮಾಡುವುದು ಹೇಗೆ? ನಿನಗಂತೂ ಇಸ್ರಯೇಲರಲ್ಲಿ ನೀಚನೆಂಬ ಹೆಸರು ತಪ್ಪದು. ಆದುದರಿಂದ ದಯವಿಟ್ಟು ಅರಸನ ಸಂಗಡ ಮಾತಾಡು. ಅವನು ನನ್ನನ್ನು ನಿನಗೆ ಕೊಡದಿರಲಾರನು,” ಎಂದಳು.


ಅನಂತರ ಆದಾಮನಿಗೆ: “ತಿನ್ನಬಾರದೆಂದು ನಾ ವಿಧಿಸಿದ ಮರದ ಹಣ್ಣನ್ನು ತಿಂದೆ ನೀನು, ಕೇಳಿ ನಿನ್ನಾ ಮಡದಿಯ ಮಾತನ್ನು. ಇದಕಾರಣ ಹಾಕಿರುವೆನು ಶಾಪ ಹೊಲನೆಲಕ್ಕೆ ದುಡಿವೆ ನೀನು ಜೀವಮಾನವಿಡೀ ಅದರ ಕೃಷಿಗೆ.


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


ಅವರಲ್ಲಿ ಐವರು ವಿವೇಕಿಗಳು, ಐವರು ಅವಿವೇಕಿಗಳು.


ಪಾಪವಿದೆ ಬಾಯಲಿ, ದೋಷವಿದೆ ತುಟಿಯಲಿ I ಸುಳ್ಳಿದೆ ಮಾತಲಿ, ಶಾಪವಿದೆ ನುಡಿಯಲಿ I ಅವರ ಸೊಕ್ಕಿನಲಿ ಅವರೇ ಸಿಕ್ಕಬೀಳಲಿ II


ನನ್ನ ತಂದೆಯ ಮನೆಯವರೆಲ್ಲರೂ ಅರಸರಾದ ನನ್ನ ಒಡೆಯರ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ತಮ್ಮ ಸೇವಕನಾದ ನನ್ನನ್ನು ಭೋಜನಕ್ಕೆ ತಮ್ಮ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡಿರಿ. ಅರಸರಿಗೆ ಹೆಚ್ಚಾಗಿ ಮೊರೆ ಇಡುವುದಕ್ಕೆ ನಾನು ಯೋಗ್ಯನಲ್ಲ,” ಎಂದು ಉತ್ತರಕೊಟ್ಟನು.


ಅದಕ್ಕೆ ದಾವೀದನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ನೀವು ಈ ದಿನ ನನ್ನನ್ನು ಆ ಕೃತ್ಯಕ್ಕೆ ಪ್ರೇರಿಸುವವರಾಗಿದ್ದೀರಿ. ಇಂಥ ದಿನದಲ್ಲಿ ಇಸ್ರಯೇಲರಲ್ಲಿ ಒಬ್ಬನಿಗೆ ಮರಣದಂಡನೆ ಆಗುವುದು ಸರಿಯೇ? ನಾನು ಇಸ್ರಯೇಲರ ಅರಸನೆಂಬುವುದು ಈ ದಿನ ಸ್ಪಷ್ಟವಾಗಿ ಗೊತ್ತಾಯಿತು,” ಎಂದು ನುಡಿದನು.


ಅಜ್ಞಾನವೆಂಬುವಳಾದರೊ ಕೂಗಾಟಗಾರ್ತಿ, ಏನೂ ತಿಳಿಯದ ಮೂಢ ಸ್ತ್ರೀ.


ಮೂಢರೇ, ನಿಮ್ಮ ಮೂಢತ್ವವನ್ನು ಬಿಟ್ಟುಬಾಳಿರಿ, ವಿವೇಕ ಮಾರ್ಗದಲ್ಲಿ ನೆಟ್ಟಗೆ ನಡೆಯಿರಿ,” ಎಂದು ಪ್ರಬೋಧಿಸುತ್ತಾಳೆ.


ನೀವು ಆತನಿಗೂ ಆತನ ಎಲ್ಲ ಆಸ್ತಿಪಾಸ್ತಿಗೂ ಬೇಲಿ ಹಾಕಿ ಭದ್ರಪಡಿಸಿದ್ದೀರಲ್ಲವೇ? ಆತನು ಕೈ ಹಾಕಿದ ಕೆಲಸ ಸಫಲವಾಗುವಂತೆ ಮಾಡಿದ್ದೀರಲ್ಲವೆ? ಎಂದೇ ಆತನ ಸಿರಿಸಂಪತ್ತು ಈ ನಾಡಿನಲ್ಲಿ ಬೆಳೆಯುತ್ತಾ ಬಂದಿದೆ.


ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನೂ ತಿಳಿಸಿದನು. ಏಲಿ ಅದನ್ನು ಕೇಳಿ, “ಅವರೇ ಸರ್ವೇಶ್ವರ. ತಮಗೆ ಸರಿಕಂಡಂತೆ ಮಾಡಲಿ,” ಎಂದನು.


ಆತನ ಹೆಂಡತಿ, “ನಿನ್ನ ಸತ್ಯಸಂಧತೆಯನ್ನು ಇನ್ನೂ ಬಿಡಲಿಲ್ಲವೇ? ದೇವರನ್ನು ದೂಷಿಸಿ ಸಾಯಬಾರದೇ?” ಎಂದು ಹೀಗಳೆದಳು.


ಮೌನದಿಂದಿರುವೆ, ಬಾಯ್ದೆರೆಯದಿರುವೆ I ನನಗೊದಗಿರುವುದು ನಿನ್ನಿಂದಲ್ಲವೆ? II


ಸುಖದಿನದಲ್ಲಿ ಸಂತೋಷದಿಂದಿರು, ದುಃಖದಿನದಲ್ಲಿ ಆಲೋಚಿಸಿನೋಡು; ಮನುಷ್ಯನು ತನ್ನ ಆಯುಸ್ಸು ಕಳೆದ ಮೇಲೆ ಸಂಭವಿಸುವುದೇನೆಂದು ಗ್ರಹಿಸಲಾಗದಂತೆ ದೇವರು ಇವುಗಳನ್ನು ಒಂದರ ಮೇಲೊಂದನ್ನು ಬರಮಾಡುತ್ತಾರೆ.


ಸಾಕು ಮಾಡು ನಿನ್ನ ಕೈ ಹೊಡೆತವನು I ಅದರಿಂದ ನಾ ಸಾಯುತ್ತಿರುವೆನು II


ಸ್ವಾಮಿಯ ಅಪ್ಪಣೆಯಿಲ್ಲದೆ ಯಾರ ಮಾತೂ ಸಾರ್ಥಕವಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು