ಯೋಬ 2:11 - ಕನ್ನಡ ಸತ್ಯವೇದವು C.L. Bible (BSI)11 ಯೋಬನಿಗೆ ಒದಗಿದ್ದ ಆಪತ್ತಿನ ಸುದ್ದಿ ಆತನ ಮೂವರು ಮಿತ್ರರಿಗೆ ಮುಟ್ಟಿತು. ಅವರು ತಮ್ಮ ತಮ್ಮ ಊರುಗಳಿಂದ, ಅಂದರೆ, ತೇಮಾನ್ಯದಿಂದ ಎಲೀಫಜನೂ, ಶೂಹ್ಯದಿಂದ ಬಿಲ್ದದನು, ನಾಮಾಥ್ಯದಿಂದ ಚೋಫರನೂ ಹೊರಟುಬಂದರು. ಯೋಬನಿಗೆ ತಮ್ಮ ಸಂತಾಪವನ್ನು ವ್ಯಕ್ತಪಡಿಸಿ ಅವನನ್ನು ಸಾಂತ್ವನಗೊಳಿಸಬೇಕೆಂಬ ಒಂದೇ ಉದ್ದೇಶದಿಂದ ಅವರು ಆತನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ, “ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ, ಅವನನ್ನು ಸಂತೈಸೋಣ ಬನ್ನಿರಿ” ಎಂದು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ತೇಮಾನ್ಯನಾದ ಎಲೀಫಜನು ಶೂಹ್ಯನಾದ ಬಿಲ್ದದನು ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ - ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ ಅವನನ್ನು ಸಂತಯಿಸೋಣ ಬನ್ನಿರಿ ಎಂದು ಗೊತ್ತುಮಾಡಿಕೊಂಡು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೋಬನ ಮೂವರು ಗೆಳೆಯರು ಯಾರೆಂದರೆ: ತೇಮಾನಿನ ಎಲೀಫಜನು, ಶೂಹದ ಬಿಲ್ದದನು ಮತ್ತು ನಾಮಾಥದ ಚೋಫರನು. ಯೋಬನಿಗೆ ಸಂಭವಿಸಿದ ಆಪತ್ತುಗಳ ಬಗ್ಗೆ ಈ ಮೂವರು ಗೆಳೆಯರು ಕೇಳಿದಾಗ ತಮ್ಮ ಮನೆಯಿಂದ ಹೊರಟು ಒಟ್ಟಾಗಿ ಭೇಟಿಯಾದರು. ಯೋಬನ ಬಳಿಗೆ ಹೋಗಿ ಅನುತಾಪ ಸೂಚಿಸಿ ಸಂತೈಸಲು ಒಪ್ಪಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೋಬನ ಮೂವರು ಸ್ನೇಹಿತರು, ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಅವನಿಗೆ ಬಂದ ಈ ಎಲ್ಲಾ ಕಷ್ಟನಷ್ಟವನ್ನು ಕುರಿತು ಕೇಳಿ, ಯೋಬನಿಗೆ ಸಂತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸುವುದಕ್ಕೆ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡು, ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿ |