Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:2 - ಕನ್ನಡ ಸತ್ಯವೇದವು C.L. Bible (BSI)

2 “ಎಲ್ಲಿಂದ ಬಂದೆ?” ಎಂದು ಸರ್ವೇಶ್ವರನು ಅವನನ್ನು ಕೇಳಿದರು. “ಭೂಲೋಕದಲ್ಲೆಲ್ಲಾ ಗಸ್ತು ತಿರುಗಿ ಬಂದಿದ್ದೇನೆ,” ಎಂದು ಅವನು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು, “ಎಲ್ಲಿಂದ ಬಂದೆ?” ಎಂದು ಸೈತಾನನನ್ನು ಕೇಳಲು ಸೈತಾನನು ಯೆಹೋವನಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು - ಎಲ್ಲಿಂದ ಬಂದಿ ಎಂದು ಸೈತಾನನನ್ನು ಕೇಳಲು ಸೈತಾನನು ಯೆಹೋವನಿಗೆ - ಭೂಲೋಕದಲ್ಲಿ ಸಂಚರಿಸುತ್ತಾ ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಸೈತಾನನಿಗೆ, “ನೀನು ಎಲ್ಲಿಂದ ಬರುತ್ತಿರುವೆ?” ಎಂದು ಕೇಳಿದನು. ಸೈತಾನನು ಯೆಹೋವನಿಗೆ, “ನಾನು ಭೂಮಿಯ ಮೇಲೆಲ್ಲಾ ಅಲೆದಾಡುತ್ತಾ ಬಂದೆನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಯೆಹೋವ ದೇವರು ಸೈತಾನನಿಗೆ, “ನೀನು ಎಲ್ಲಿಂದ ಬಂದೆ?” ಎಂದರು. ಸೈತಾನನು ಯೆಹೋವ ದೇವರಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗಾಡುತ್ತಾ ಇದ್ದು ಬಂದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:2
7 ತಿಳಿವುಗಳ ಹೋಲಿಕೆ  

ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.


ಸರ್ವೇಶ್ವರ ಸೈತಾನನನ್ನು ನೋಡಿ, “ಎಲ್ಲಿಂದ ಬಂದೆ?” ಎಂದು ಕೇಳಿದರು. ಅದಕ್ಕೆ ಅವನು, “ಭೂಲೋಕದಲ್ಲಿ ಗಸ್ತುತಿರುಗಿ ಬಂದಿದ್ದೇನೆ” ಎಂದನು.


ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


ಇಹದ ಲೋಕಾಧಿಪತಿ ಬರುವ ಸಮಯವಾಯಿತು. ಇನ್ನು ಬಹಳ ಹೊತ್ತು ನಾನು ನಿಮ್ಮೊಡನೆ ಮಾತನಾಡಲು ಕಾಲಾವಕಾಶವಿಲ್ಲ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.


“ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತಿರುವೆ?” ಎಂದು ವಿಚಾರಿಸಿದನು. “ನನ್ನ ಯಜಮಾನಿ ಸಾರಯಳ ಬಳಿಯಿಂದ ಓಡಿಹೋಗುತ್ತಿದ್ದೇನೆ,” ಎಂದು ಉತ್ತರಕೊಟ್ಟಳು.


ಸ್ವರ್ಗನಿವಾಸಿಗಳು ಇನ್ನೊಂದು ದಿನ ಸರ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಓಲಗಿಸಿದ್ದರು. ಸೈತಾನನು ಅವರ ಮಧ್ಯೆ ಕಾಣಿಸಿಕೊಂಡನು.


ಆಗ ಸರ್ವೇಶ್ವರ ಅವನಿಗೆ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ನಿಷ್ಕಾರಣವಾಗಿ ಆತನನ್ನು ನಾಶಮಾಡಲು ಬಿಡಬೇಕೆಂದು ನೀನು ನನ್ನನ್ನು ಪೀಡಿಸಿದೆ. ಆದರೂ ಆತನು ತನ್ನ ಸತ್ಯಸಂಧತೆಯನ್ನು ಬಿಡದೆ ಇದ್ದಾನೆ ನೋಡು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು