Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ಸರ್ವೇಶ್ವರ ಅವನಿಗೆ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ನಿಷ್ಕಾರಣವಾಗಿ ಆತನನ್ನು ನಾಶಮಾಡಲು ಬಿಡಬೇಕೆಂದು ನೀನು ನನ್ನನ್ನು ಪೀಡಿಸಿದೆ. ಆದರೂ ಆತನು ತನ್ನ ಸತ್ಯಸಂಧತೆಯನ್ನು ಬಿಡದೆ ಇದ್ದಾನೆ ನೋಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೆಹೋವನು ಸೈತಾನನಿಗೆ, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನ್ನನ್ನು ಪ್ರೇರೇಪಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಯೆಹೋವನು ಸೈತಾನನಿಗೆ - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶನಮಾಡುವದಕ್ಕೆ ನೀನು ನನ್ನನ್ನು ಪ್ರೇರಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅದಕ್ಕೆ ಯೆಹೋವನು, “ನನ್ನ ಸೇವಕನಾದ ಯೋಬನನ್ನು ಗಮನಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ. ನಿಷ್ಕಾರಣವಾಗಿ ಅವನನ್ನು ನಾಶಪಡಿಸುವಂತೆ ನೀನು ನನ್ನನ್ನು ಒತ್ತಾಯಪಡಿಸಿದೆ. ಆದರೆ ಅವನು ನನಗೆ ಇನ್ನೂ ನಂಬಿಗಸ್ತನಾಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ, ಯಥಾರ್ಥನೂ, ದೇವರಿಗೆ ಭಯಪಡುವವನೂ, ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನಗೆ ಸೂಚಿಸಿದರೂ, ಅವನು ಇನ್ನೂ ತನ್ನ ಯಥಾರ್ಥತೆಯಲ್ಲಿ ದೃಢವಾಗಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:3
26 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ಆತನಿಗೆ ಸರಿಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಗನು,” ಎಂದು ಹೇಳಿದರು.


ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.


ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.


ಸಜ್ಜನರ ರಾಜಮಾರ್ಗ ಹಾನಿಗೆ ದೂರ; ಸನ್ನಡತೆಯುಳ್ಳವ ಪ್ರಾಣಸಂರಕ್ಷಕ.


ನನ್ನನ್ನು ಬಿರುಗಾಳಿಯಿಂದ ಬಡಿಯುತ್ತಾನೆ ಕಾರಣವಿಲ್ಲದೆ ಗಾಯದ ಮೇಲೆ ಗಾಯ ಮಾಡುತ್ತಾನೆ.


ಈಗಾಗಲೇ ನಾನಿದೆಲ್ಲವನ್ನೂ ಸಾಧಿಸಿದ್ದೇನೆ, ಪರಿಪೂರ್ಣತೆಯನ್ನು ಗಳಿಸಿದ್ದೇನೆ ಎಂದು ನೀವು ಭಾವಿಸಬಾರದು. ಕ್ರಿಸ್ತಯೇಸು ನನ್ನನ್ನು ಯಾವುದಕ್ಕಾಗಿ ತಮ್ಮವನನ್ನಾಗಿ ಮಾಡಿಕೊಂಡರೋ, ಅದನ್ನು ನನ್ನದಾಗಿಸಿಕೊಳ್ಳಲು ನಾನು ಪ್ರಯತ್ನಿಸುತ್ತಿದ್ದೇನೆ.


ಅದಕ್ಕೆ ಉತ್ತರವಾಗಿ ಯೇಸು, “ಇವನ ಪಾಪವಾಗಲಿ, ಇವನನ್ನು ಹೆತ್ತವರ ಪಾಪವಾಗಲಿ ಇದಕ್ಕೆ ಕಾರಣವಲ್ಲ, ದೇವರ ಕಾರ್ಯ ಇವನಲ್ಲಿ ವ್ಯಕ್ತವಾಗುವಂತೆ ಹೀಗಾಗಿದೆ.


ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.


ಸನ್ಮಾರ್ಗಿಯು ಸರ್ವೇಶ್ವರನಿಗೆ ಭಯಪಡುತ್ತಾನೆ; ದುರ್ಮಾರ್ಗಿಯು ಆತನನ್ನು ಅಸಡ್ಡೆಮಾಡುತ್ತಾನೆ.


ನೀತಿ ಕಾಪಾಡುವುದು ನಿರ್ದೋಷಿಯನ್ನು; ಅನೀತಿ ಕೆಡವಿಬಿಡುವುದು ಪಾಪಿಯನ್ನು.


ಸಜ್ಜನನು ಇಕ್ಕಟ್ಟಿನಿಂದ ಪಾರಾಗುವನು; ದುರ್ಜನನು ಅದರೊಳಗೆ ಸಿಕ್ಕಿಬೀಳುವನು.


ನಿರ್ದೋಷಿಯಾದೆನ್ನನು ನೀನುದ್ಧರಿಸುವೆ I ಚಿರಕಾಲ ನಿನ್ನ ಸನ್ನಿಧಿಯಲ್ಲೆನ್ನನು ಇರಿಸುವೆ II


ನಿರಪರಾಧಿಯನ್ನು ಲಕ್ಷಿಸು, ಸತ್ಪುರುಷನನು ವೀಕ್ಷಿಸು I ಶಾಂತಿಪ್ರಿಯನಿಗಿದೆ ಸಂತಾನವೃದ್ಧಿ, ಇದ ಗಮನಿಸು II


ಇಗೋ, ದೇವರು ಕೊಲ್ಲುವನೆನ್ನನು ಅದಕ್ಕಾಗಿ ನಾನು ಕಾದಿರುವೆನು. ಆದರೂ ನನ್ನ ನಡತೆ ಸರಿಯೆಂಬುದನು ಆತನ ಮುಂದೆಯೆ ರುಜುವಾತುಪಡಿಸುವೆನು.


ನಾನು ಸತ್ಯವಂತನಾಗಿದ್ದರೂ ಬಾಯೇ ನಾನು ಅಪರಾಧಿಯೆಂದು ಒಪ್ಪಿಕೊಳ್ಳುತ್ತದೆ. ನಾನು ನಿರ್ದೋಷಿಯಾಗಿದ್ದರೂ ‘ನಿನ್ನದು ವಕ್ರಬುದ್ಧಿ’ ಎನ್ನುತ್ತದೆ.


ಆದರೆ ನೀವು ಕೈಹಾಕಿ ಆತನ ಸೊತ್ತನ್ನೆಲ್ಲಾ ಅಳಿಸಿಬಿಡಿ. ಆಗ ಆತನು ನಿಮ್ಮನ್ನು ಮುಖಾಮುಖಿಯಾಗಿ ನಿಂದಿಸುತ್ತಾನೋ ಇಲ್ಲವೋ ಎಂದು ನೋಡುವಿರಂತೆ!” ಎಂದನು.


ಅದಕ್ಕೆ ಯೋವಾಬನು, “ಕಬಳಿಸುವುದಾಗಲಿ, ಹಾಳುಮಾಡುವುದಾಗಲಿ ನನ್ನಿಂದ ದೂರವಿರಲಿ; ಅಂಥದು ಬೇಡವೇ ಬೇಡ.


ನೋಹನ ಚರಿತ್ರೆಯಿದು: ಆತ ಸತ್ಪುರುಷ, ಅವನಂಥ ನಿರ್ದೋಷಿ ಆ ಕಾಲದಲ್ಲಿ ಯಾರೂ ಇರಲಿಲ್ಲ. ದೇವರೊಡನೆ ಆತ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಿದ್ದ.


ಸಾಚವಾದುದೆನ್ನ ನಡತೆ, ಅಚಲವಾದುದೆನ್ನ ನಂಬುಗೆ I ನೀಚ ನಾನಲ್ಲವೆಂದು ಪ್ರಭು, ನ್ಯಾಯ ತೀರಿಸೆನಗೆ II


“ಎಲ್ಲಿಂದ ಬಂದೆ?” ಎಂದು ಸರ್ವೇಶ್ವರನು ಅವನನ್ನು ಕೇಳಿದರು. “ಭೂಲೋಕದಲ್ಲೆಲ್ಲಾ ಗಸ್ತು ತಿರುಗಿ ಬಂದಿದ್ದೇನೆ,” ಎಂದು ಅವನು ಉತ್ತರಕೊಟ್ಟನು.


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ, ಎಂದ ಹಾಗೆ ಒಬ್ಬ ಮನುಷ್ಯ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ತೊರೆದುಬಿಡುತ್ತಾನೆ.


ಒಮ್ಮೆ ಸ್ವರ್ಗನಿವಾಸಿಗಳು ಸರ್ವೇಶ್ವರಸ್ವಾಮಿಯ ಸನ್ನಿಧಿಯಲ್ಲಿ ಓಲಗಿಸಿದ್ದರು. ಸೈತಾನನೂ ಅಲ್ಲಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು