Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:4 - ಕನ್ನಡ ಸತ್ಯವೇದವು C.L. Bible (BSI)

4 ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ, ಎಂದ ಹಾಗೆ ಒಬ್ಬ ಮನುಷ್ಯ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ತೊರೆದುಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನ ಆ ಮಾತಿಗೆ ಸೈತಾನನು - ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ! ಎಂಬಂತೆ ಮನುಷ್ಯನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ತನ್ನ ಸರ್ವಸ್ವವನ್ನೂ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ,” ಎಂದ ಹಾಗೆ, “ಒಬ್ಬ ಮನುಷ್ಯನು ತನ್ನ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:4
15 ತಿಳಿವುಗಳ ಹೋಲಿಕೆ  

ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?


“ನಾನು ಹೇಳುವುದನ್ನು ಕೇಳಿ: ‘ಪ್ರಾಣಧಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ ಉಡುಪಿಗಿಂತ ದೇಹ ಮೇಲಾದುದಲ್ಲವೆ?


ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡಿ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ ಇವುಗಳನ್ನು ಕಾಡಿನಲ್ಲಿ ರಾಶಿಯಾಗಿ ಬಚ್ಚಿಟ್ಟಿದ್ದೇವೆ,” ಎಂದು ಬಿನ್ನವಿಸಿದರು. ಈ ಕಾರಣ ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.


ಆಗ ಸರ್ವೇಶ್ವರ ಅವನಿಗೆ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ನಿಷ್ಕಾರಣವಾಗಿ ಆತನನ್ನು ನಾಶಮಾಡಲು ಬಿಡಬೇಕೆಂದು ನೀನು ನನ್ನನ್ನು ಪೀಡಿಸಿದೆ. ಆದರೂ ಆತನು ತನ್ನ ಸತ್ಯಸಂಧತೆಯನ್ನು ಬಿಡದೆ ಇದ್ದಾನೆ ನೋಡು,” ಎಂದರು.


ನೀವೀಗ ಕೈಚಾಚಿ ಯೋಬನ ಮೂಳೆಮಾಂಸಗಳನ್ನು ಮುಟ್ಟಿನೋಡಿ; ಅವನು ನಿಮ್ಮ ಮುಖದೆದುರಿಗೇ ನಿಮ್ಮನ್ನು ದೂಷಿಸುತ್ತಾನೋ ಇಲ್ಲವೋ ನೀವೇ ನೋಡುವಿರಂತೆ,” ಎಂದನು.


ಅವರು ತಮ್ಮ ಪಶುಪ್ರಾಣಿಗಳನ್ನು ಜೋಸೆಫನ ಬಳಿಗೆ ತಂದರು. ಅವನು ಅವರ ಕುದುರೆಗಳನ್ನೂ ದನಕುರಿಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯ ಕೊಡಿಸಿದನು. ಹೀಗೆ ಆ ವರ್ಷ ಅವರ ಪಶುಪ್ರಾಣಿಗಳನ್ನು ಪಡೆದು, ಧಾನ್ಯಕೊಟ್ಟು ಅವರನ್ನು ಕಾಪಾಡಿದನು.


ನಾವೇಕೆ ನಿಮ್ಮ ಕಣ್ಣೆದುರಿಗೆ ಸಾಯಬೇಕು? ನಮ್ಮ ಭೂಮಿಯೇಕೆ ಹಾಳಾಗಬೇಕು? ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯ ಕೊಡಿ, ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವರಿಗೆ ಗುಲಾಮರಾಗುತ್ತೇವೆ. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿ ಪಾಳುಬೀಳಬಾರದಿದ್ದರೆ ಧಾನ್ಯಕೊಡಿ,” ಎಂದು ಕೇಳಿದರು.


ಅವರು ಯೆಹೋಶುವನಿಗೆ, “ನಿಮ್ಮ ದೇವರಾದ ಸರ್ವೇಶ್ವರ ತಮ್ಮ ದಾಸ ಮೋಶೆಗೆ, ‘ನಾನು ನಿಮಗೆ ಈ ದೇಶವನ್ನೆಲ್ಲ ಕೊಡುವಾಗ ನೀವು ಇದರ ನಿವಾಸಿಗಳನ್ನೆಲ್ಲಾ ಸಂಹರಿಸಬೇಕು’ ಎಂದು ಆಜ್ಞಾಪಿಸಿದ್ದಾರೆಂದು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.


ಆಗ ಅವನ ಅಧಿಕಾರಿಗಳು, “ಇಸ್ರಯೇಲರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ; ಆದುದರಿಂದ ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು, ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಆ ಅರಸನ ಬಳಿಗೆ ಹೋಗುವುದಕ್ಕೆ ನಮಗೆ ಅಪ್ಪಣೆಯಾಗಲಿ; ಹೀಗೆ ಮಾಡಿದರೆ ಅವನು ತಮ್ಮ ಜೀವವನ್ನು ಉಳಿಸಬಹುದು,” ಎಂದು ಹೇಳಿದರು.


ಹಣವಂತನ ಪ್ರಾಣರಕ್ಷಣೆಗೆ ಅವನ ಹಣವೇ ಈಡು; ಬಡವನಿಗೆ ಈಡಿನ ಬೆದರಿಕೆಯೂ ಇರದು.


ಏತಕ್ಕೆಂದರೆ ಊಟಕ್ಕಿಂತ ಪ್ರಾಣ, ಉಡುಪಿಗಿಂತ ದೇಹ ಮೇಲಾದುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು