Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:9 - ಕನ್ನಡ ಸತ್ಯವೇದವು C.L. Bible (BSI)

9 ಆತನ ಹೆಂಡತಿ, “ನಿನ್ನ ಸತ್ಯಸಂಧತೆಯನ್ನು ಇನ್ನೂ ಬಿಡಲಿಲ್ಲವೇ? ದೇವರನ್ನು ದೂಷಿಸಿ ಸಾಯಬಾರದೇ?” ಎಂದು ಹೀಗಳೆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗಿರುವಲ್ಲಿ ಅವನ ಹೆಂಡತಿ ಅವನಿಗೆ, “ನಿನ್ನ ಯಥಾರ್ಥತ್ವವನ್ನು ಇನ್ನೂ ಬಿಡಲಿಲ್ಲವೋ? ಇದೆಲ್ಲವನ್ನು ಕೊಟ್ಟ ದೇವರನ್ನು ದೂಷಿಸಿ ಸಾಯಿ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೀಗಿರುವಲ್ಲಿ ಅವನ ಹೆಂಡತಿ ಅವನಿಗೆ - ನಿನ್ನ ಯಥಾರ್ಥತ್ವವನ್ನು ಇನ್ನೂ ಬಿಡಲಿಲ್ಲವೋ? ದೇವರನ್ನು ದೂಷಿಸಿ ಸಾಯಿ ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೋಬನ ಹೆಂಡತಿಯು ಅವನಿಗೆ, “ನೀನು ಇನ್ನೂ ದೇವರಿಗೆ ನಂಬಿಗಸ್ತನಾಗಿರುವೆಯೋ? ದೇವರನ್ನು ದೂಷಿಸಿ ಸಾಯಿ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಯೋಬನ ಹೆಂಡತಿಯು ಅವನಿಗೆ, “ನೀನು ಇನ್ನೂ ಯಥಾರ್ಥತ್ವವನ್ನು ಬಿಡಲಿಲ್ಲವೇ? ದೇವರನ್ನು ಶಪಿಸಿ ಸತ್ತುಹೋಗು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:9
13 ತಿಳಿವುಗಳ ಹೋಲಿಕೆ  

ನೀವೀಗ ಕೈಚಾಚಿ ಯೋಬನ ಮೂಳೆಮಾಂಸಗಳನ್ನು ಮುಟ್ಟಿನೋಡಿ; ಅವನು ನಿಮ್ಮ ಮುಖದೆದುರಿಗೇ ನಿಮ್ಮನ್ನು ದೂಷಿಸುತ್ತಾನೋ ಇಲ್ಲವೋ ನೀವೇ ನೋಡುವಿರಂತೆ,” ಎಂದನು.


ಆಗ ಸರ್ವೇಶ್ವರ ಅವನಿಗೆ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ನಿಷ್ಕಾರಣವಾಗಿ ಆತನನ್ನು ನಾಶಮಾಡಲು ಬಿಡಬೇಕೆಂದು ನೀನು ನನ್ನನ್ನು ಪೀಡಿಸಿದೆ. ಆದರೂ ಆತನು ತನ್ನ ಸತ್ಯಸಂಧತೆಯನ್ನು ಬಿಡದೆ ಇದ್ದಾನೆ ನೋಡು,” ಎಂದರು.


ದೇವರಿಗೆ ಸೇವೆಮಾಡುವುದು ವ್ಯರ್ಥ. ಅವರು ಹೇಳಿದಂತೆ ನಾವು ನಡೆದುಕೊಳ್ಳುವುದರಿಂದ ಪ್ರಯೋಜನವೇನು? ನಮ್ಮ ಕೃತ್ಯಗಳಿಗಾಗಿ ಸೇನಾಧೀಶ್ವರ ಸರ್ವೇಶ್ವರನ ಮುಂದೆ ದುಃಖಪಡುವುದರಿಂದ ಲಾಭವೇನು?


ಆದರೆ ನೀವು ಕೈಹಾಕಿ ಆತನ ಸೊತ್ತನ್ನೆಲ್ಲಾ ಅಳಿಸಿಬಿಡಿ. ಆಗ ಆತನು ನಿಮ್ಮನ್ನು ಮುಖಾಮುಖಿಯಾಗಿ ನಿಂದಿಸುತ್ತಾನೋ ಇಲ್ಲವೋ ಎಂದು ನೋಡುವಿರಂತೆ!” ಎಂದನು.


ಅವನು ಅವರೊಡನೆ ಮಾತಾಡುತ್ತಿರುವಾಗಲೇ ಆ ಆಳೂ ಅವನ ಹಿಂದಿನಿಂದ ಅರಸನೂ ಅಲ್ಲಿಗೆ ಬಂದರು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಸರ್ವೇಶ್ವರನಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಆತನನ್ನು ನಂಬಿ ನಿರೀಕ್ಷಿಸಿಕೊಂಡಿರಬೇಕು?” ಎಂದನು.


ಆಗ ಆ ಮಹಿಳೆ, “ಈ ಮರದ ಹಣ್ಣು ಊಟಕ್ಕೆ ಎಷ್ಟು ಚೆನ್ನಾಗಿದೆ, ನೋಟಕ್ಕೆ ಎಷ್ಟು ರಮಣೀಯವಾಗಿದೆ. ಜ್ಞಾನಾರ್ಜನೆಗೆ ಎಷ್ಟು ಆಕರ್ಷಣೀಯವಾಗಿದೆ” ಎಂದು ತಿಳಿದು, ಅದನ್ನು ತೆಗೆದುಕೊಂಡು ತಿಂದಳು; ಸಂಗಡವಿದ್ದ ಗಂಡನಿಗೂ ಕೊಟ್ಟಳು; ಅವನೂ ತಿಂದನು.


ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿಟ್ಟಿದ್ದ ಯಥಾರ್ಥ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.


ಅದಕ್ಕೆ ಆದಾಮನು, “ನನ್ನ ಜೊತೆಯಲ್ಲಿ ಇರಲು ತಾವು ಕೊಟ್ಟ ಮಹಿಳೆ ಆ ಮರದ ಹಣ್ಣನ್ನು ನನಗೆ ಕೊಟ್ಟಳು; ನಾನು ತಿಂದೆ,” ಎಂದನು


ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. ಆ ವ್ಯಕ್ತಿಯ ತಾಯಿ ದಾನ್ ಕುಲದ ದಿಬ್ರೀಯ ಮಗಳು ‘ಶೆಲೋಮೀತ್’ ಎಂದು ಅವಳ ಹೆಸರು.


ಯೋಬನು ತನ್ನ ಮೈಕಡಿತವನ್ನು ತಾಳಲಾಗದೆ ಬೋಕಿಯೊಂದರಿಂದ ಕೆರೆದುಕೊಳ್ಳುತ್ತಾ ಬೂದಿಗುಂಡಿಯಲ್ಲಿ ಕುಳಿತುಕೊಳ್ಳಬೇಕಾಯಿತು.


ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ. ದೇವರಿಂದ ನಾವು ಸುಖಪಡೆಯಬಹುದು, ದುಃಖವನ್ನು ಮಾತ್ರ ಪಡೆಯಬಾರದೊ?” ಎಂದು ಉತ್ತರಕೊಟ್ಟ. ಇಂಥ ಪರಿಸ್ಥಿತಿಯಲ್ಲೂ ಪಾಪದ ಮಾತೊಂದೂ ಅವನ ಬಾಯಿಂದ ಬರಲಿಲ್ಲ.


ಆಕೆ ಔತಣದ ಏಳು ದಿನಗಳಲ್ಲೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನ ಆಕೆ ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳೇಬಿಟ್ಟನು. ಆಕೆ ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು