Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:14 - ಕನ್ನಡ ಸತ್ಯವೇದವು C.L. Bible (BSI)

14 ಆದರೆ ಆ ತಿಂಡಿ ತಿಂದ ಮೇಲೆ ಮಾರ್ಪಡುವುದು ಅವನ ಕರುಳೊಳಗೆ ನಾಗರವಿಷವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತಿಂದ ಮೇಲೆ ಆ ಪದಾರ್ಥವು ಮಾರ್ಪಟ್ಟು, ಅವನೊಳಗೆ ಹಾವಿನ ವಿಷವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತಿಂದ ಮೇಲೆ ಆ ಪದಾರ್ಥವು ಮಾರ್ಪಟ್ಟು ಅವನೊಳಗೆ ಹಾವಿನ ವಿಷವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಅದು ಅವನ ಹೊಟ್ಟೆಯಲ್ಲಿ ಹಾವಿನ ವಿಷದ ಹಾಗೆ ಕಹಿಯಾದ ವಿಷವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನ ಆಹಾರವು ಅವನ ಕರುಳಲ್ಲಿ ಹುಳಿಯಾಗಿ, ಅದು ಅವನೊಳಗಿನ ಸರ್ಪಗಳ ವಿಷವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:14
17 ತಿಳಿವುಗಳ ಹೋಲಿಕೆ  

ಅವರ ಗಂಟಲೇ ತೆರೆದ ಸಮಾಧಿಯಾಗಿದೆ ನಾಲಗೆಗಳಲಿ ಮರೆಮೋಸ ತುಂಬಿತುಳುಕುತಿದೆ. ತುಟಿಯ ಕಂಪನದಲಿ ಘೋರ ವಿಷವಿದೆ.


ನನ್ನ ನಾಮಕ್ಕೆ ಮಹಿಮೆ ಸಲ್ಲಿಸಬೇಕು. ಇದನ್ನು ನೀವು ಮನದಟ್ಟು ಮಾಡಿಕೊಳ್ಳಬೇಕು. ನನ್ನ ಈ ಮಾತಿಗೆ ಕಿವಿಗೊಡದಿದ್ದರೆ ನಿಮಗೆ ಶಾಪವನ್ನು ತರುವೆನು. ನಿಮ್ಮ ವರಮಾನಗಳನ್ನೆಲ್ಲ ಶಾಪವಾಗಿ ಮಾರ್ಪಡಿಸುವೆನು; ಈಗಾಗಲೇ ಮಾರ್ಪಡಿಸಿರುವೆನು. ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಂಡಿಲ್ಲ.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವುವು. ನಿನಗೆ ನನ್ನ ಭಯವಿಲ್ಲದೆ ನಿನ್ನ ದೇವರಾದ ಸರ್ವೇಶ್ವರನಾದ ನನ್ನನ್ನು ತೊರೆದುಬಿಟ್ಟದ್ದು ನಿನಗೆ ಕೆಟ್ಟದ್ದಾಗಿಯೂ ಕಹಿಯಾಗಿಯೂ ಪರಿಣಮಿಸುವುದು. ಇದನ್ನು ಚೆನ್ನಾಗಿ ಗ್ರಹಿಸಿಕೊ, ಕಣ್ಣಾರೆ ನೋಡು. ಇದು ಸರ್ವಶಕ್ತನೂ, ಸ್ವಾಮಿ ಸರ್ವೇಶ್ವರನೂ ಆದ ನನ್ನ ನುಡಿ.”


ಈ ಕಾರಣ, ತಮ್ಮ ನಡತೆಗೆ ತಕ್ಕ ಫಲವನ್ನು ಅನುಭವಿಸುವರು, ತಮ್ಮ ಕುಯುಕ್ತಿಗಳ ಪರಿಣಾಮದಿಂದ ಹೊಟ್ಟೆ ತುಂಬಿಸಿಕೊಳ್ಳುವರು.


ಅವನು ಹೀರುವುದು ನಾಗರವಿಷವನು ಸರ್ಪದ ನಾಲಿಗೆ ಕೊಲ್ಲುವುದು ಅವನನು.


ಕ್ಷಯಿಸಿಹೋಗುವರವರು ಕ್ಷಾಮಡಾಮರದಿಂದ ಸಾಯುವರು ಶಾಪದಿಂದ, ಅಂಟುರೋಗಗಳಿಂದ, ನಾ ಕಳುಹಿಸುವ ಕಾಡುಮೃಗ, ವಿಷಸರ್ಪಗಳಿಂದ.


ಅದನ್ನು ಬಿಟ್ಟುಕೊಡಲು ಅವನಿಗೆ ಇಷ್ಟವಿಲ್ಲ ಬಾಯಲ್ಲೇ ಇಟ್ಟುಕೊಳ್ಳುತ್ತಾನೆ ಚಪ್ಪರಿಸುತ್ತಾ.


ನುಂಗಿದ ಗಂಟನು ಅವನು ಹೊರಗೆ ಕಕ್ಕುವನು ಹೊಟ್ಟೆಯಿಂದ ದೇವರು ಅದನು ಹೊರಡಿಸುವನು.


ಅವನು ಹೊಟ್ಟೆಯನು ತುಂಬಿಸಿಕೊಳ್ಳುವಾಗಲೇ ದೇವರು ಸುರಿಸುವರು ಕೋಪಾಗ್ನಿಯನು ಆಹಾರದಂತೆ.


ವಂಚಿಸಿ ಪಡೆದ ಊಟ ಬಲು ರುಚಿ; ಆಮೇಲೆ ಬಾಯಿ ತುಂಬ ಕಲ್ಲುಜಲ್ಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು