Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:16 - ಕನ್ನಡ ಸತ್ಯವೇದವು C.L. Bible (BSI)

16 ಅವನು ಹೀರುವುದು ನಾಗರವಿಷವನು ಸರ್ಪದ ನಾಲಿಗೆ ಕೊಲ್ಲುವುದು ಅವನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ಚೀಪುವುದು ಹಾವಿನ ವಿಷವೇ, ಸರ್ಪದ ನಾಲಿಗೆಯು ಅವನನ್ನು ಕೊಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು ಚೀಪುವದು ಹಾವಿನ ವಿಷವೇ, ಸರ್ಪದ ನಾಲಿಗೆಯು ಅವನನ್ನು ಕೊಲ್ಲುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದುಷ್ಟನ ಪಾನೀಯವು ಹಾವಿನ ವಿಷದಂತಿದೆ. ಹಾವಿನ ನಾಲಿಗೆಯು ಅವನನ್ನು ಕೊಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನು ಸರ್ಪಗಳ ವಿಷವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:16
9 ತಿಳಿವುಗಳ ಹೋಲಿಕೆ  

ಅವರ ಗಂಟಲೇ ತೆರೆದ ಸಮಾಧಿಯಾಗಿದೆ ನಾಲಗೆಗಳಲಿ ಮರೆಮೋಸ ತುಂಬಿತುಳುಕುತಿದೆ. ತುಟಿಯ ಕಂಪನದಲಿ ಘೋರ ವಿಷವಿದೆ.


ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?


ನೆಗೇಬಿನ ಮೃಗಗಳನ್ನು ಕುರಿತ ದೈವವಾಣಿ : ಸಿಂಹಸಿಂಹಿಣಿಗಳಿಂದಲೂ ವಿಷಸರ್ಪ - ಘಟಸರ್ಪಗಳಿಂದಲೂ ಕೂಡಿದ ಭಯಂಕರ ಹಾಗೂ ಸಂಕಟಕರವಾದ ಆ ನಾಡಿನ ಮಾರ್ಗವಾಗಿ ತಮ್ಮ ಧನಕನಕಗಳನ್ನು ಕತ್ತೆಗಳ ಮೇಲೂ ಆಸ್ತಿಪಾಸ್ತಿಗಳನ್ನು ಒಂಟೆಗಳ ಮೇಲೂ ಹೊರಿಸಿಕೊಂಡು ನಿಷ್ಪ್ರಯೋಜಕವಾದ ಆ ರಾಷ್ಟ್ರಕ್ಕೆ ಹೋಗುತ್ತಾರೆ.


ಕ್ಷಯಿಸಿಹೋಗುವರವರು ಕ್ಷಾಮಡಾಮರದಿಂದ ಸಾಯುವರು ಶಾಪದಿಂದ, ಅಂಟುರೋಗಗಳಿಂದ, ನಾ ಕಳುಹಿಸುವ ಕಾಡುಮೃಗ, ವಿಷಸರ್ಪಗಳಿಂದ.


ಅವುಗಳ ಹಣ್ಣಿನ ಗೊಂಚಲು ವಿಷ ಅವುಗಳ ರಸ ಮರಣಕರ ಸರ್ಪವಿಷ.


ನನ್ನ ಮನದೊಳು ಸರ್ವಶಕ್ತನ ಬಾಣಗಳು ನಾಟಿವೆ ನನ್ನ ಅಂತರಂಗದೊಳು ಅವುಗಳ ವಿಷ ಹೀರಲಾಗುತ್ತಿದೆ ದೇವರಿಂದ ಬಂದ ಆತಂಕಗಳು ನನ್ನನು ಸುತ್ತುವರೆದಿವೆ.


ಕುಡಿದಾದ ಮೇಲೆ ಅದು ಹಾವಿನಂತೆ ಕಚ್ಚುವುದು; ಹೌದು, ವಿಷಸರ್ಪದಂತೆ ಕಡಿಯುವುದು.


ಪರೋಪಕಾರಿ ತನಗೂ ಉಪಕಾರಿ; ಕ್ರೂರಿಯಾದವನು ತನ್ನ ದೇಹಕ್ಕೂ ಕ್ರೂರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು