Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:22 - ಕನ್ನಡ ಸತ್ಯವೇದವು C.L. Bible (BSI)

22 ಸಮೃದ್ಧಿಯಿಂದಿರುವಾಗಲೇ ಕೊರತೆ ಅವನನ್ನು ಕಾಡುವುದು ಶ್ರಮಜೀವಿಗಳೆಲ್ಲರ ಕೈ ಅವನ ಮೇಲೆ ಎರಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸಮೃದ್ಧಿಯು ತುಂಬಿರುವಾಗಲೇ ಅವನಿಗೆ ಇಕ್ಕಟ್ಟಾಗುವುದು. ಶ್ರಮೆಯನ್ನು ಅನುಭವಿಸುವ ಪ್ರತಿಯೊಬ್ಬನ ಕೈ ಅವನ ಮೇಲೆ ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಸಮೃದ್ಧಿಯು ತುಂಬಿರುವಾಗಲೇ ಅವನಿಗೆ ಇಕ್ಕಟ್ಟಾಗುವದು. ಶ್ರಮೆಯನ್ನನುಭವಿಸುವ ಪ್ರತಿಯೊಬ್ಬನ ಕೈ ಅವನ ಮೇಲೆ ಬೀಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದುಷ್ಟನು ಸಮೃದ್ಧಿಯಿಂದಿರುವಾಗಲೇ ಇಕ್ಕಟ್ಟಿನಿಂದ ಕುಗ್ಗಿಸಲ್ಪಡುವನು; ಅವನ ಕಷ್ಟಗಳು ಅವನ ಮೇಲೆ ಬೀಳುವವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವನ ಸಮೃದ್ಧಿಯಿಂದ ತುಂಬಿರುವಾಗಲೇ ಅವನಿಗೆ ಇಕ್ಕಟ್ಟಾಗುವುದು; ಘೋರ ದುಃಖವು ಅವನ ಮೇಲೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:22
13 ತಿಳಿವುಗಳ ಹೋಲಿಕೆ  

ಅಹಂಭಾವದಿಂದಾಕೆ ಮೆರೆದುದಕೆ ಪೀಡಿಸಿ ಕಾಡಿಸಿರಿ ಸರಿಯಾದ ಅಳತೆಯಲ್ಲೇ. ಹೃದಯದಲಿ ಹೇಳುತಿಹಳು ಅವಳಿಂತು : ರಾಣಿಯಂತೆ ನಾ ಕುಳಿತಿಹೆನು ವಿಧವೆಯಲ್ಲ ನಾನೇನು ಕಾಣೆನೆಂದಿಗೂ ದುಃಖವನು.


ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.


ನನ್ನಾಯುಸ್ಸು ಗೇಣುದ್ದ, ನಿನ್ನೆಣಿಕೆಗದು ಶೂನ್ಯ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ! II


ಅವನ ಬಿರುಸಾದ ಹೆಜ್ಜೆಗಳು ಜಡವಾಗುವುವು ಅವನು ಹಾಕಿದ ಯೋಜನೆಗಳು ಅವನನ್ನೆ ಕೆಡವಿಹಾಕುವುವು.


ದೇವರು ನನ್ನನ್ನೊಪ್ಪಿಸಿಬಿಟ್ಟಿದ್ದಾನೆ ತುಂಟರಿಗೆ ನನ್ನನ್ನು ಎಸೆದುಬಿಟ್ಟಿದ್ದಾನೆ ದುಷ್ಟರ ಕೈಗೆ.


ಇಂಥವನು ಸಿರಿವಂತನಾಗಿ ಉಳಿಯನು ಅವನ ಆಸ್ತಿ ಸ್ಥಿರವಾಗಿ ನಿಲ್ಲದು ಅವನು ಧರೆಯಲ್ಲಿ ಬೇರೂರಿ ಬೆಳೆಯನು.


ದಣಿದವರಿಗೆ ದೊರಕುವುದು ಆ ಕೂಪದಲಿ ವಿಶ್ರಾಂತಿ ಅಣಗುವುದಲ್ಲಿ ದುರುಳರು ಕೊಡುವ ಹಾವಳಿ.


ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ಮೇಲೆ ಬಿದ್ದು, ಒಂಟೆಗಳನ್ನು ಹೊಡೆದುಕೊಂಡುಹೋದರು. ಅಲ್ಲದೆ ಆ ಕೂಲಿ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯೊಂದಿಗೆ ನಿಮ್ಮ ಬಳಿಗೆ ಓಡಿಬಂದೆ,” ಎಂದನು.


ಅಷ್ಟರಲ್ಲಿ, ಶೆಬದವರು ಬಂದು, ಮೇಲೆ ಬಿದ್ದು, ಅವುಗಳನ್ನು ಹೊಡೆದುಕೊಂಡು ಹೋದರು. ಕೂಲಿ ಆಳುಗಳನ್ನು ಕತ್ತಿಯಿಂದ ಕೊಂದುಹಾಕಿದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ಮುಟ್ಟಿಸಲು ಓಡಿಬಂದೆ,” ಎಂದನು.


ಸರ್ವೇಶ್ವರ, ತನ್ನ ದಾಸರಾದ ಪ್ರವಾದಿಗಳ ಮುಖಾಂತರ ಮುಂತಿಳಿಸಿದ ಪ್ರಕಾರ ಜುದೇಯ ರಾಜ್ಯವನ್ನು ಹಾಳುಮಾಡುವುದಕ್ಕಾಗಿ ಬಾಬಿಲೋನಿಯ, ಸಿರಿಯ, ಮೋಬಾವ, ಅಮ್ಮೋನ್ ದೇಶೀಯರಾದ ಸುಲಿಗೆಗಾರರನ್ನು ಕಳುಹಿಸಿದರು.


ಹಸಿದವರು ಅವನ ಬೆಳೆಯನು ತಿಂದುಬಿಡುವರು ಮುಳ್ಳುಬೇಲಿ ಹಾಕಿದ್ದರೂ ಅದನು ತಿಂದುಬಿಡುವರು ಅವನ ಸೊತ್ತನು ನುಂಗಲು ಬಾಯ್ದೆರೆದು ಕಾದಿರುವರು.


ಅವನು ಹೊಟ್ಟೆಯನು ತುಂಬಿಸಿಕೊಳ್ಳುವಾಗಲೇ ದೇವರು ಸುರಿಸುವರು ಕೋಪಾಗ್ನಿಯನು ಆಹಾರದಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು