Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:26 - ಕನ್ನಡ ಸತ್ಯವೇದವು C.L. Bible (BSI)

26 ಅವನ ನಿಧಿನಿಕ್ಷೇಪಕ್ಕಾಗಿ ಕಾರಿರುಳು ಕಾದಿದೆ ಯಾರೂ ಹೊತ್ತಿಸದ ಬೆಂಕಿ ಅವನನು ಕಬಳಿಸಲಿದೆ ಅವನ ಗುಡಾರದಲಿ ಉಳಿದದ್ದೆಲ್ಲ ನಾಶವಾಗಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನ ನಿಧಿನಿಕ್ಷೇಪಗಳಿಗಾಗಿ ಪೂರ್ಣಾಂಧಕಾರವು ಕಾದಿರುವುದು, ಯಾರೂ ಹೊತ್ತಿಸದ ಬೆಂಕಿಯು ಅವನನ್ನು ತಿಂದುಹಾಕಿ, ಅವನ ಗುಡಾರದಲ್ಲಿ ತಪ್ಪಿಸಿಕೊಂಡದ್ದನ್ನು ಮೇದು ಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನ ನಿಧಿನಿಕ್ಷೇಪಗಳಿಗಾಗಿ ಪೂರ್ಣಾಂಧಕಾರವು ಕಾದಿರುವದು, ಯಾರೂ ಹೊತ್ತಿಸದ ಬೆಂಕಿಯು ಅವನನ್ನು ತಿಂದುಹಾಕಿ ಅವನ ಗುಡಾರದಲ್ಲಿ ತಪ್ಪಿಸಿಕೊಂಡದ್ದನ್ನು ಮೇದುಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅವನ ಭಂಡಾರಗಳೆಲ್ಲಾ ನಾಶವಾಗುತ್ತವೆ. ಯಾರೂ ಹೊತ್ತಿಸದ ಬೆಂಕಿಯಿಂದ ಅವನು ನಾಶವಾಗುವನು. ಅವನ ಗುಡಾರದಲ್ಲಿ ಉಳಿದಿರುವುದೆಲ್ಲವನ್ನು ಬೆಂಕಿಯು ನಾಶಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವನ ನಿಕ್ಷೇಪಗಳಲ್ಲಿ ಅಂಧಕಾರವು ಪೂರ್ಣವಾಗಿ ಕವಿಯುವುದು; ಯಾರೂ ಹೊತ್ತಿಸದ ಬೆಂಕಿ ಅವನನ್ನು ದಹಿಸುವುದು; ಅವನ ಗುಡಾರದಲ್ಲಿ ಉಳಿದದ್ದೆಲ್ಲ ನಾಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:26
13 ತಿಳಿವುಗಳ ಹೋಲಿಕೆ  

ಅಗ್ನಿಕುಂಡವಾಗುವರವರು ನೀ ಪ್ರತ್ಯಕ್ಷನಾದಾಗ I ಕಬಳಿಸುವುದು ಕೋಪಾಗ್ನಿ, ಭಸ್ಮವಾಗ್ವರು ಪ್ರಭು ಬಂದಾಗ II


ತಟ್ಟುವುವು ಶೂರನ ಹರಿತ ಬಾಣಗಳು I ಗಿಟ್ಟುವುವು ಉರಿಯುವ ಬೆಂಕಿ ಕೆಂಡಗಳು II


ತಮ್ಮ ನಾಚಿಕೆಗೇಡಿತನದ ನೊರೆಯನ್ನು ಕಾರುವ ಸಾಗರದ ಹುಚ್ಚು ತೆರೆಗಳು; ದಿಕ್ಕುಗೆಟ್ಟ ತಾರೆಗಳಿವರು. ಇವರಿಗಾಗಿ ಕಾದಿದೆ ನಿರಂತರ ಕಾರ್ಗತ್ತಲಿನ ಕಂದಕ.


ಆದರೆ ಯಾರು ಈ ಸಾಮ್ರಾಜ್ಯಕ್ಕೆ ಬಾಧ್ಯಸ್ಥರೋ ಅವರನ್ನೇ ಹೊರಗೆ ದಬ್ಬಲಾಗುವುದು; ಅಲ್ಲಿ, ಆ ಕಾರ್ಗತ್ತಲಲ್ಲಿ, ಅವರ ಗೋಳಾಟವೇನು! ಹಲ್ಲು ಕಡಿತವೇನು!”


ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


ಆಕಾಶವನ್ನು ದಿಟ್ಟಿಸಿ ನೋಡಿದರೂ ಭೂಮಿಯನ್ನು ದುರುಗುಟ್ಟಿ ನೋಡಿದರೂ ಅವರಿಗೆ ಕಾಣುವುದು ಕಷ್ಟಸಂಕಟಗಳ ಕತ್ತಲೆ, ಭಯಂಕರವಾದ ಕಾಳಗತ್ತಲೆಯಲ್ಲದೆ ಮತ್ತೇನೂ ಅಲ್ಲ. ಅಂಥ ಕರಾಳ ಕತ್ತಲೆಯೊಳಗೆ ಅವರನ್ನು ದೂಡಲಾಗುವುದು.


ಕತ್ತಲು ಅಂಥವರನು ಸುತ್ತುವರೆದಿರುತ್ತದೆ ಹಾಡುಹಗಲಲ್ಲೆ ರಾತ್ರಿಯಲ್ಲೋ ಎಂಬಂತೆ ತಡಕಾಡುತ್ತಾರೆ ಅವರು ನಡುಹಗಲಲ್ಲೇ.


ಕತ್ತಲೊಳಗಿಂದ ಪಾರಾಗನವನು ಸುಡುವುದು ಕಿಚ್ಚು ಅವನ ಕೊಂಬೆಯನು ಬಡಿದೊಯ್ಯುವುದು ಗಾಳಿ ಅದರ ಫಲವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು