Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:7 - ಕನ್ನಡ ಸತ್ಯವೇದವು C.L. Bible (BSI)

7 ತನ್ನ ಮಲದ ಹಾಗೆ ನಿತ್ಯಕ್ಕು ಅವನು ನಶಿಸಿಹೋಗುವನು ಅವನನು ಅರಿತವರೆಲ್ಲರೂ “ಅವನೆಲ್ಲಿಯೋ!’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತನ್ನ ಮಲದ ಹಾಗೆ ನಿತ್ಯನಾಶನವನ್ನೂ ಹೊಂದುವನು, ಅವನನ್ನು ಕಂಡವರು ಕೂಡ ‘ಅವನು ಎಲ್ಲಿ?’ ಎನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತನ್ನ ಮಲದ ಹಾಗೆ ನಿತ್ಯನಾಶನವನ್ನು ಹೊಂದುವನು, ಅವನನ್ನು ಕಂಡವರು ಕೂಡ ಅವನೆಲ್ಲಿಯೋ ಅನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಅವನು ತನ್ನ ಮಲದ ಹಾಗೆ ನಿತ್ಯನಾಶವಾಗುವನು. ಅವನನ್ನು ಬಲ್ಲವರು, ‘ಅವನೆಲ್ಲಿ?’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಗೊಬ್ಬರದ ಹಾಗೆ ಶಾಶ್ವತವಾಗಿ ಅವನು ನಾಶವಾಗುವನು; ಅವನನ್ನು ನೋಡಿದವರು, ‘ಅವನೆಲ್ಲಿ?’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:7
16 ತಿಳಿವುಗಳ ಹೋಲಿಕೆ  

ಎಂದೋರಿನಲ್ಲವರು ಕೊಲೆಯಾದರು I ಹೊಲಗದ್ದೆಗಳಿಗೆ ಗೊಬ್ಬರವಾದರು II


ಮನುಜನೋ ಬಿದ್ದಿರುತ್ತಾನೆ ಸತ್ತು ಕೊನೆಯುಸಿರೆಳೆದಾಗ ಎಲ್ಲವು ಮುಗಿಯಿತು.


ಆಕೆಯ ಶವ ಆ ಹೊಲಕ್ಕೆ ಗೊಬ್ಬರವಾಗುವುದು; ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು’ ಎಂಬುದಾಗಿ ತಿಷ್ಬೀಯನೂ ತಮ್ಮ ದಾಸನೂ ಆದ ಎಲೀಯನ ಮುಖಾಂತರ ಸರ್ವೇಶ್ವರ ಹೇಳಿಸಿದ ಮಾತು ಈಗ ನೆರವೇರಿತು,” ಎಂದನು.


ಆದುದರಿಂದ ಯಾರೊಬ್ಬಾಮನೇ, ಕೇಳು; ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು; ನಿನ್ನ ಕುಟುಂಬದ ಗಂಡಸರಲ್ಲಿ, ಸ್ವತಂತ್ರರಾಗಲಿ, ಪರತಂತ್ರರಾಗಲಿ, ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಸಂಹರಿಸಿಬಿಡುವೆನು. ಕಸವನ್ನು ಗುಡಿಸಿ ಎಸೆಯುವಂತೆ ನಾನು ನಿನ್ನ ಮನೆಯವರನ್ನು ಎಸೆದುಬಿಡುವೆನು; ಅವರು ನಿರ್ನಾಮವಾಗುವರು.


ಅವರು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ, ಪೂಜಿಸಿದ ಸೂರ್ಯ,‍ ಚಂದ್ರ, ತಾರಾಗಣಗಳ ಎದುರಿಗೇ ಆ ಎಲುಬುಗಳನ್ನು ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವುವು.


ಅಲ್ಲಿಂದ ಅವನನ್ನು ಕಿತ್ತುಹಾಕಿದ್ದೇ ಆದರೆ ಅವನನ್ನು ಕಂಡದ್ದೇ ಇಲ್ಲ ಎಂದು ಬೊಂಕುವುದು ಆ ಸ್ಥಳ.


ತನ್ನ ಮನೆಗವನು ಹಿಂತಿರುಗುವುದಿಲ್ಲ ಅವನ ನಿವಾಸಕ್ಕೆ ಅವನ ಗುರುತೇ ಇಲ್ಲ.


ಅವರು ಉದಯಾಸ್ತಮಾನಗಳ ನಡುವೆ ಜಜ್ಜಿಹೋಗುವರು ಯಾರ ಲಕ್ಷ್ಯವೂ ಇಲ್ಲದೆ ನಿತ್ಯವಿನಾಶ ಹೊಂದುವರು.


ನೀನು ಅವನನ್ನು ಶಾಶ್ವತವಾಗಿ ಸೋಲಿಸಿಬಿಡುವೆ ಅವನು ಗತಿಸಿಹೋಗುವನು. ಅವನನ್ನು ವಿಕಾರಗೊಳಿಸಿ ತೊಲಗಿಸಿಬಿಡುವೆ.


ಅವನು ನಿದ್ರಿಸಹೋಗುತ್ತಾನೆ ಹಣವಂತನಾಗಿ ಕಣ್ಣು ತೆರೆಯುತ್ತಲೆ ಇಲ್ಲವಾಗಿರುತ್ತದೆ ಆಸ್ತಿ! ಮತ್ತೆ ಇರುತ್ತಾನೆ ನಿದ್ರೆ ಕಾಣದವನಾಗಿ


ಹುಡುಕಿದರೂ ಸಿಗರು ನಿನ್ನೊಡನೆ ಹೋರಾಡಿದವರು ನಾಶವಾಗಿ ನಿರ್ನಾಮವಾಗುವರು ನಿನ್ನ ವಿರುದ್ಧ ಯುದ್ಧಮಾಡಿದವರು.


ಅದಕ್ಕೆ ಸರ್ವೇಶ್ವರ: “ನೀನು ಹದ್ದಿನ ಮಟ್ಟದಲ್ಲಿ ಹಾರಾಡುತ್ತಿದ್ದರೂ ನಕ್ಷತ್ರಮಂಡಲದಲ್ಲಿ ನೆಲೆಗೊಂಡಿದ್ದರೂ ಅಲ್ಲಿಂದಲೂ ನಿನ್ನನ್ನು ಇಳಿಸಿಬಿಡುತ್ತೇನೆ,” ಎನ್ನುತ್ತಾರೆ.


ಸತ್ತಮೇಲೆ ಮನುಜ ಮರಳಿ ಬದುಕುತ್ತಾನೆಯೇ? ಬದುಕುವುದಾದರೆ ಮುಕ್ತಿಹೊಂದುವವರೆಗೆ ನನ್ನ ವಾಯಿದೆಯ ದಿನವೆಲ್ಲ ನಾ ಕಾದಿರುವೆ.


ನಿಮ್ಮ ಪ್ರಶ್ನೆ ಇದು: “ಆ ಖದೀಮನ ಮನೆ ಏನಾಯಿತು? ಆ ದುರುಳರು ನಿವಾಸಿಸುತ್ತಿದ್ದ ಗುಡಾರ ಏನಾಯಿತು?”


“ಇವನ ಸಾವೆಂದು? ಇವ ನಿರ್ನಾಮವಾಗುವದೆಂತು?” I ನನಗೆ ಕೇಡು ಬಯಸುವವರ ಕುಹಕ ನುಡಿಯಿದು II


ಇದನು ಕಂಡು ಕೆರಳುವನಾ ದುರುಳನು I ಹೊಂದುವನು ಈ ಪರಿ ಆಶಾಭಂಗವನು I ಹಲ್ಲು ಕಡಿಯುತ ಅವನು ಹಾಳಾಗುವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು