Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:14 - ಕನ್ನಡ ಸತ್ಯವೇದವು C.L. Bible (BSI)

14 ಆದರೆ ಈ ದುರುಳರೇ, ದೇವರಿಗೆ, ‘ನಮ್ಮನ್ನು ಬಿಟ್ಟು ತೊಲಗು, ನಮಗೆ ಬೇಡವಾಗಿದೆ ನಿನ್ನ ಮಾರ್ಗದ ಅರಿವು’.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಇವರೇ ದೇವರನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ನಿನ್ನ ಮಾರ್ಗಗಳ ತಿಳಿವಳಿಕೆಯೇ ನಮಗೆ ಬೇಡ ಎಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ಇವರೇ ದೇವರನ್ನು ಕುರಿತು - ನಮ್ಮಿಂದ ತೊಲಗಿ ಹೋಗು, ನಿನ್ನ ಮಾರ್ಗಗಳ ತಿಳುವಳಿಕೆಯೇ ನಮಗೆ ಬೇಡ ಎಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ದುಷ್ಟರು ದೇವರಿಗೆ, ‘ನಮ್ಮನ್ನು ನಮ್ಮಷ್ಟಕ್ಕೇ ಬಿಟ್ಟುಕೊಡು! ನಿನ್ನ ಮಾರ್ಗದ ತಿಳುವಳಿಕೆಯೇ ನಮಗೆ ಬೇಡ’ ಎನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೂ ಇವರು ದೇವರಿಗೆ, ‘ನಮ್ಮನ್ನು ಬಿಟ್ಟುಬಿಡು, ನಿಮ್ಮ ಮಾರ್ಗಗಳ ತಿಳುವಳಿಕೆ ನಮಗೆ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:14
22 ತಿಳಿವುಗಳ ಹೋಲಿಕೆ  

ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದ್ದರೂ ಅವರು ಆತನಿಗೆ, ‘ತೊಲಗಿಹೋಗು ನಮ್ಮಿಂದ’ ಎಂದರು.


ಶರೀರ ಸ್ವಭಾವದಲ್ಲೇ ಮಗ್ನವಾಗಿರುವ ಮನಸ್ಸು ದೇವರಿಗೆ ಶತ್ರು. ಅಂಥ ಮನಸ್ಸು ದೇವರ ನಿಯಮಕ್ಕೆ ಮಣಿಯುವುದಿಲ್ಲ. ಮಣಿಯಲು ಸಾಧ್ಯವೂ ಇಲ್ಲ.


ಸೊಕ್ಕೇರಿದ ಮುಖದಾತನು ಪ್ರಭುವನು ಅರಸುವುದಿಲ್ಲ I ಅವನ ಮನದೊಳಿದೊಂದೇ ಭಾವನೆ : “ದೇವರೇ ಇಲ್ಲ"! II


ಏಕೆಂದರೆ ಸುಜ್ಞಾನವನ್ನೇ ಅವರು ದ್ವೇಷಿಸಿದರು, ಸರ್ವೇಶ್ವರನಲ್ಲಿ ಭಯಭಕ್ತಿಯಿರಿಸದೆ ಹೋದರು.


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಬಹಳವಾಗಿ ದಿಗಿಲುಗೊಂಡಿದ್ದ ಗೇರಸೇನಿನ ಹಾಗೂ ಸುತ್ತಮುತ್ತಲಿನ ಜನರೆಲ್ಲರೂ ತಮ್ಮನ್ನು ಬಿಟ್ಟುಹೋಗಬೇಕೆಂದು ಯೇಸುವನ್ನು ಕೇಳಿಕೊಂಡರು. ಯೇಸು ದೋಣಿ ಹತ್ತಿ ಹಿಂದಿರುಗಿದರು.


ಯೇಸುವನ್ನು ಕಂಡೊಡನೆ ಗಟ್ಟಿಯಾಗಿ ಕೂಗುತ್ತಾ ಅವರ ಮುಂದೆ ಅಡ್ಡಬಿದ್ದು, “ಯೇಸುವೇ, ಪರಾತ್ಪರ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದಯವಿಟ್ಟು ನನ್ನನ್ನು ಪೀಡಿಸಬೇಡಿ,” ಎಂದು ದನಿಯೆತ್ತಿ ಬೇಡಿಕೊಂಡನು.


ಈ ಕಾರಣ ಆ ಬಾಬಿಲೋನಿಯರು ಮಾನವರನ್ನು ಗಾಳದಿಂದ ಸೆಳೆದುಕೊಳ್ಳುತ್ತಾರೆ; ಬಲೆಯಿಂದ ಬಾಚಿಕೊಳ್ಳುತ್ತಾರೆ; ತಮ್ಮ ಜಾಲದಲ್ಲಿ ರಾಶಿಹಾಕಿಕೊಳ್ಳುತ್ತಾರೆ; ಹಿರಿಹಿರಿ ಹಿಗ್ಗುತ್ತಾರೆ.


“ಮೂಢರೇ, ಎಂದಿನ ತನಕ ಮೂಢರಾಗಿರಲಾಶಿಸುವಿರಿ? ಕುಚೋದ್ಯಗಾರರೇ, ಎಷ್ಟುಕಾಲ ಕುಚೋದ್ಯಗಾರರಾಗಿರಲಿಚ್ಚಿಸುವಿರಿ? ಮೂರ್ಖರೇ, ಎಷ್ಟರವರೆಗೆ ತಿಳುವಳಿಕೆಯನ್ನು ಹಗೆಮಾಡುವಿರಿ?


ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ.


ಮನದೊಳಿಂತೆಂದು ನೆನೆದನಾ ದುರುಳನು: I “ದೇವನಿದನು ಮರೆತು ವಿಮುಖನಾಗಿಹನು I ಇನ್ನೆಂದಿಗು ನೋಡನು ಇದೆಲ್ಲವನು” II


ದೇವರ ಮಾರ್ಗಗಳೆಲ್ಲವನು ಅವರು ಅಲಕ್ಷ್ಯಮಾಡಿದರು ಆತನಿಗೆ ವಿಧೇಯರಾಗದೆ ತಿರುಗಿಬಿದ್ದರು.


ಆದರೆ ‘ನಮ್ಮನ್ನು ಸೃಷ್ಟಿಸಿದ ಕರ್ತನೆಲ್ಲಿ? ಕತ್ತಲಲ್ಲೂ ಕೀರ್ತನೆ ಹಾಡಬಲ್ಲವನೆಲ್ಲಿ?


ನಮಗೆ ಅಡ್ಡ ಬರಬೇಡಿ. ನಮ್ಮ ದಾರಿಯಿಂದ ದೂರವಿರಿ. ಇಸ್ರಯೇಲರ ಪರಮಪಾವನ ಸ್ವಾಮಿಯ ವಿಷಯವನ್ನು ನಮ್ಮ ಮುಂದೆ ಎತ್ತಬೇಡಿ,” ಎಂದು ಹೇಳುತ್ತಾರೆ.


‘ನೀನು (ಯೆರೆಮೀಯ) ವಾಸವಾಗಿರುವುದು ಮೋಸಗಾರರ ಮಧ್ಯೆ ಮೋಸಗಾರರಾಗಿರುವುದರಿಂದಲೆ ಅವರು ನನ್ನನ್ನು ಅರಿಯಲೊಲ್ಲರು’ ಎನ್ನುತ್ತಾರೆ ಸರ್ವೇಶ್ವರ.


ನಲವತ್ತು ವರುಷ ಆ ಪೀಳಿಗೆಯ ಬಗ್ಗೆ ನಾ ಬೇಸರಗೊಂಡೆ I ‘ತಪ್ಪುಮನಸ್ಕರು ಇವರು, ನನ್ನ ಮಾರ್ಗವನು ಮೆಚ್ಚರಿವರು’ ಎಂದುಕೊಂಡೆ II


ಇಸ್ರಯೇಲ್ ಜನರೇ, ದುಷ್ಟಸಂತತಿಯವರೇ, ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿರಿ : ನಾನು ನಿಮಗೆ ಬೆಂಗಾಡಾಗಿಯೂ ಗಾಢಾಂಧಕಾರವಾಗಿಯೂ ಪರಿಣಮಿಸಿದ್ದೇನೊ? ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ; ನಿನ್ನ ಬಳಿಗೆ ಇನ್ನು ಬಾರೆವು’ ಎಂದು ನನ್ನ ಜನರಾದ ನೀವು ಹೇಳುವುದು ಹೇಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು